ಬೆಂಗಳೂರು : ರಾಜ್ಯದ ಆರೋಗ್ಯ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಆರೋಗ್ಯ ಸಚಿವ ಯು.ಟಿ. ಖಾದರ್ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಅಧಿಕಾರ ಸ್ವೀಕರಿಸಿದ ತಕ್ಷಣವೇ ಸಾರ್ವಜನಿಕರಿಗೆ ಉತ್ತಮ ವೈದ್ಯಕೀಯ ಸೇವೆ ದೊರಕಬೇಕು ಎಂಬ ಉದ್ದೇಶದಿಂದ ಇಲಾಖೆಯ ಕಾರ್ಯವೈಖರಿಯನ್ನು ಚುರುಕುಗೊಳಿಸಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಹಲವು ವರ್ಷಗಳಿಂದ ಕಾಡುತ್ತಿದ್ದ ವೈದ್ಯರು ಮತ್ತು ಸಿಬ್ಬಂದಿ ಕೊರತೆ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಕ್ರಮ ಆರಂಭಿಸಿದ್ದಾರೆ.
ಆರೋಗ್ಯ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಮೊದಲ ಸಮಾಲೋಚನಾ ಸಭೆ ಸುಮಾರು ಐದು ಗಂಟೆಗಳ ಕಾಲ ನಡೆಯಿತು. ಈ ಸಭೆಯಲ್ಲಿ ಆರೋಗ್ಯ ಇಲಾಖೆಯನ್ನು ತಳಮಟ್ಟದಿಂದಲೇ ಸದೃಢಗೊಳಿಸಲು ದೊಡ್ಡ ಮಟ್ಟದ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲು ತೀರ್ಮಾನಿಸಲಾಯಿತು.
ಪ್ರಸ್ತುತ ರಾಜ್ಯದ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ಸುಮಾರು 1,280 ಎಂಬಿಬಿಎಸ್ ವೈದ್ಯರು, 924 ತಜ್ಞ ವೈದ್ಯರು ಹಾಗೂ 892 ನರ್ಸ್ಗಳ ಕೊರತೆ ಇದೆ ಎಂದು ಇಲಾಖೆಯ ಅಂಕಿಅಂಶಗಳು ತಿಳಿಸಿವೆ. ಈ ಕೊರತೆಯನ್ನು ಹಂತ ಹಂತವಾಗಿ ಭರ್ತಿ ಮಾಡುವ ಉದ್ದೇಶದಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮೂಲಕ ಮೊದಲ ಹಂತದಲ್ಲಿ 200 ವೈದ್ಯರನ್ನು ನೇರ ಹಾಗೂ ಖಾಯಂ ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ಈ ಪ್ರಕ್ರಿಯೆಗೆ ಆರ್ಥಿಕ ಇಲಾಖೆಯ ಅನುಮೋದನೆಯೂ ದೊರೆತಿದೆ.ಪರೀಕ್ಷೆ ಪೂರ್ಣಗೊಂಡ ಕೇವಲ ಒಂದು ವಾರದೊಳಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡುವಂತೆ ಸಚಿವರು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ.
ಇದರ ಜೊತೆಗೆ ಕೆಇಎ ಮೂಲಕವೇ 400 ನರ್ಸ್ಗಳು, 400 ಫಾರ್ಮಸಿಸ್ಟ್ಗಳು ಮತ್ತು 400 ಲ್ಯಾಬ್ ಟೆಕ್ನಿಷಿಯನ್ಗಳ ಹುದ್ದೆಗಳನ್ನೂ ಶಾಶ್ವತವಾಗಿ ಭರ್ತಿ ಮಾಡಲಾಗುತ್ತದೆ. ಉಳಿದಿರುವ 1,000 ವೈದ್ಯರ ಹುದ್ದೆಗಳನ್ನು ತುರ್ತಾಗಿ ಭರ್ತಿ ಮಾಡಲು ಜಿಲ್ಲಾ ಆರೋಗ್ಯಾಧಿಕಾರಿಗಳ (DHO) ಮಟ್ಟದಲ್ಲಿ ವಾಕ್-ಇನ್ ಇಂಟರ್ವ್ಯೂ ನಡೆಸಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ನೇರವಾಗಿ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಅರ್ಜಿ ಸಲ್ಲಿಸಿ ಗುತ್ತಿಗೆ ಆಧಾರದ ಮೇಲೆ ಸೇವೆಗೆ ಸೇರಬಹುದಾಗಿದೆ.
ಗ್ರಾಮೀಣ ಹಾಗೂ ಗುಡ್ಡಗಾಡು ಪ್ರದೇಶಗಳಲ್ಲಿ ಕನಿಷ್ಠ ಐದು ವರ್ಷಗಳ ಕಾಲ ಸಮರ್ಪಕ ಸೇವೆ ಸಲ್ಲಿಸುವ ಗುತ್ತಿಗೆ ವೈದ್ಯರ ಕಾರ್ಯಕ್ಷಮತೆಯನ್ನು ಪರಿಗಣಿಸಿ ಭವಿಷ್ಯದಲ್ಲಿ ಖಾಯಂ ನೇಮಕಾತಿಗೆ ಅವಕಾಶ ಕಲ್ಪಿಸುವ ಭರವಸೆಯನ್ನು ಸಚಿವರು ನೀಡಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















