Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿಚ್ಛೇದನ ವದಂತಿಗಳ ನಡುವೆ ಮೌನ ಮುರಿದ ನಟಿ ಶುಭಾ ಪೂಂಜಾ!

---Advertisement---

ಕೆಲವು ದಿನಗಳಿಂದ ನಟಿ ಶುಭಾ ಪೂಂಜಾ ಮತ್ತು ಅವರ ಪತಿ ಸುಮಂತ್ ಬಿಲ್ಲವ ಅವರ ವಿಚ್ಛೇದನದ ಕುರಿತ ಸುದ್ದಿಗಳು ಸಾಮಾಜಿಕ ಜಾಲತಾಣಗಳು ಹಾಗೂ ಮಾಧ್ಯಮಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿವೆ. ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದೆ ಎಂಬ ವದಂತಿಗಳು ಹರಿದಾಡುತ್ತಿದ್ದರೂ, ಈ ಬಗ್ಗೆ ಇದುವರೆಗೆ ಇಬ್ಬರೂ ಯಾವುದೇ ಅಧಿಕೃತ ಪ್ರತಿಕ್ರಿಯೆ ನೀಡಿರಲಿಲ್ಲ.ಶುಭಾ ಪೂಂಜಾ ತಮ್ಮ ಇನ್‌ಸ್ಟಾಗ್ರಾಂ ಖಾತೆಯಿಂದ ಮದುವೆಗೆ ಸಂಬಂಧಿಸಿದ ಕೆಲವು ಫೋಟೋಗಳನ್ನು ಅಳಿಸಿದ್ದ ಹಿನ್ನೆಲೆಯಲ್ಲಿ ವಿಚ್ಛೇದನದ ಊಹಾಪೋಹಗಳಿಗೆ ಮತ್ತಷ್ಟು ಬಲ ಸಿಕ್ಕಿತ್ತು. ಕಳೆದ ಕೆಲವು ದಿನಗಳಿಂದ ಈ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು.

ಈ ಎಲ್ಲ ಬೆಳವಣಿಗೆಗಳ ನಡುವೆ ಮೊದಲ ಬಾರಿಗೆ ನಟಿ ಶುಭಾ ಪೂಂಜಾ ತಮ್ಮ ಅಧಿಕೃತ ಇನ್‌ಸ್ಟಾಗ್ರಾಂ ಖಾತೆಯ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ವೈಯಕ್ತಿಕ ಜೀವನದ ಕುರಿತು ಸಮಯ ಬಂದಾಗ ತಾವೇ ಎಲ್ಲವನ್ನೂ ಬಹಿರಂಗಪಡಿಸುವುದಾಗಿ ಹೇಳಿರುವ ಅವರು, ಸದ್ಯಕ್ಕೆ ತಮ್ಮ ಮತ್ತು ಪತಿ ಸುಮಂತ್ ಬಿಲ್ಲವ ಅವರ ಖಾಸಗಿತನವನ್ನು ಗೌರವಿಸುವಂತೆ ಮನವಿ ಮಾಡಿದ್ದಾರೆ.“ನನ್ನ ಆತ್ಮೀಯ ಮಾಧ್ಯಮ ಮಿತ್ರರು ಹಾಗೂ ಪ್ರೀತಿಯ ಅಭಿಮಾನಿಗಳಿಗೆ ನಮಸ್ಕಾರ. ನಾನು ಚಿತ್ರರಂಗಕ್ಕೆ ಬಂದ ದಿನದಿಂದಲೂ ನೀವು ನನಗೆ ನೀಡಿರುವ ಪ್ರೀತಿ ಮತ್ತು ಬೆಂಬಲಕ್ಕೆ ಋಣಿ. ನನ್ನ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಮಯ ಬಂದಾಗ ನಾನೇ ಖುದ್ದಾಗಿ ಮಾಹಿತಿ ನೀಡುತ್ತೇನೆ. ಅಲ್ಲಿಯವರೆಗೂ ನನಗೂ ಹಾಗೂ ಸುಮಂತ್ ಅವರಿಗೂ ಸ್ವಲ್ಪ ಸಮಯಾವಕಾಶ ಮತ್ತು ಪ್ರೈವಸಿ ನೀಡಿ,” ಎಂದು ಅವರು ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

2022ರಲ್ಲಿ ಉದ್ಯಮಿ ಹಾಗೂ ಸಮಾಜಸೇವಕ ಸುಮಂತ್ ಬಿಲ್ಲವ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಶುಭಾ ಪೂಂಜಾ, ಹಲವು ಕಾರ್ಯಕ್ರಮಗಳಲ್ಲಿ ಪತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಆದರೆ ಇತ್ತೀಚಿನ ವರದಿಗಳ ಪ್ರಕಾರ, ಈ ದಂಪತಿ ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನಕ್ಕಾಗಿ ಕೌಟುಂಬಿಕ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎನ್ನಲಾಗಿದೆ.ಇದೀಗ ಶುಭಾ ಪೂಂಜಾ ಅವರ ಪೋಸ್ಟ್‌ಗೆ ಅಭಿಮಾನಿಗಳು ಬೆಂಬಲ ವ್ಯಕ್ತಪಡಿಸಿದ್ದು, “ನಿಮ್ಮ ನಿರ್ಧಾರವನ್ನು ಗೌರವಿಸುತ್ತೇವೆ”, “ಯಾವಾಗಲೂ ನಿಮ್ಮ ಜೊತೆಗಿದ್ದೇವೆ” ಎಂದು ಧೈರ್ಯ ತುಂಬುತ್ತಿದ್ದಾರೆ. ಆದರೆ, “ಸಮಯ ಬಂದಾಗ ಎಲ್ಲವನ್ನೂ ತಿಳಿಸುತ್ತೇನೆ” ಎಂಬ ಅವರ ಹೇಳಿಕೆ ಅಭಿಮಾನಿಗಳಲ್ಲಿ ಕುತೂಹಲ ಹಾಗೂ ಆತಂಕವನ್ನು ಹೆಚ್ಚಿಸಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now