ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜೂನ್. 10 : ಬಯಲು ಸೀಮೆ ಚಿತ್ರದುರ್ಗ ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ಜಿಲ್ಲೆಯ ಎಲ್ಲಾ ಶಾಸಕರು ಜೊತೆಗೂಡಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇವೆಂದು ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಹೇಳಿದರು.
ತಮ್ಮ 64 ನೇ ವರ್ಷದ ಜನ್ಮದಿನದ ಅಂಗವಾಗಿ ಪ್ರವಾಸಿ ಮಂದಿರದಲ್ಲಿ ಬುಧವಾರ ಅಪಾರ ಅಭಿಮಾನಿಗಳಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಮೂರು ಬಾರಿ ಶಾಸಕನಾಗಿ ಚಳ್ಳಕೆರೆ ಅಭಿವೃದ್ದಿಗೆ ಶ್ರಮ ವಹಿಸಿ ಕೆಲಸ ಮಾಡುತ್ತಿದ್ದೇವೆ. ಮಾಜಿ ಸಚಿವ ಹೆಚ್.ಆಂಜನೇಯರವರು ನಮೆಗೆಲ್ಲಾ ಶಕ್ತಿಯಿದ್ದಂತೆ. ಭದ್ರಾ ಮೇಲ್ದಂಡೆ ಯೋಜನೆಯಿಂದ ಜಿಲ್ಲೆಗೆ ನೀರು ಹರಿಯುವ ಕಾಲ ಸನ್ನಿಹಿತವಾಗಿದೆ. ಈಗಾಗಲೆ 11 ಸಾವಿರ ಕೋಟಿ ರೂ.ಗಳ ಖರ್ಚಾಗಿಗೆ. 23 ಸಾವಿರ ಕೋಟಿ ರೂ.ಗಳ ಯೋಜನೆ ಇದಾಗಿದ್ದು, ಗೋನೂರುವರೆಗೂ ನೀರು ತರುತ್ತೇವೆ. ಚಳ್ಳಕೆರೆ, ಪಾವಗಡ, ಮೊಳಕಾಲ್ಮುರುವಿಗೂ ನೀರು ತೆಗೆದುಕೊಂಡು ಹೋಗಬೇಕೆಂಬುದು ನಮ್ಮ ಆಸೆ. ಈ ಸಂಬಂಧ ಜಲ ಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿರವರ ಜೊತೆ ಚರ್ಚಿಸಿದ್ದೇವೆ. ಜಿಲ್ಲೆ, ಜಾತಿವಾರು ಹಾಗೂ ನನ್ನ ಅಭಿವೃದ್ದಿ ಕೆಲಸವನ್ನು ಪರಿಗಣಿಸಿ ನೂತನ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ರವರ ಮಂತ್ರಿ ಮಂಡಲದಲ್ಲಿ ನನಗೆ ಸಚಿವ ಸ್ಥಾನ ಸಿಗಬಹುದೆಂಬ ನಂಬಿಕೆಯಿದೆ. ಜಿಲ್ಲೆಯ ಜನರ ಹಾಗೂ ರೈತರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತೇನೆಂದು ಭರವಸೆ ನೀಡಿದರು.
ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷನಾಗಿ ನನ್ನನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ರೈತರಿಗೆ ಸರ್ಕಾರದಿಂದ ಏನೇನು ನೆರವು ಕೊಡಿಸಬಹುದೋ ಅದನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ. ಪಕ್ಷಾತೀತವಾಗಿ ಜಿಲ್ಲೆಯ ಅಭಿವೃದ್ದಿಗೆ ಶ್ರಮಿಸುತ್ತೇನೆಂದರು.
ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು ಮಾತನಾಡಿ ಚಳ್ಳಕೆರೆಯ ಭಗೀರಥ ಶಾಸಕ ಟಿ.ರಘುಮೂರ್ತಿಗೆ ಈ ಬಾರಿ ಸಚಿವ ಸ್ಥಾನ ಸಿಗುತ್ತದೆಂಬ ನಿರೀಕ್ಷೆಯಲ್ಲಿದ್ದೇವೆ. ಚಳ್ಳಕೆರೆಯಲ್ಲಿ ವಿಶಾಲವಾದ ರಸ್ತೆಗಳಾಗಿವೆ. ಇಂಜಿನಿಯರಿಂಗ್ ಕಾಲೇಜು ಮಂಜೂರು ಮಾಡಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ. ಸಣ್ಣ ನೀರಾವರಿ ಯೋಜನೆ ಸಚಿವರಾದರೆ ಜಿಲ್ಲೆಯ ರೈತರ ಬದುಕು ಹಸನಾಗುತ್ತದೆ ಎಂದರು.
ನಗರಸಭೆ ಮಾಜಿ ಅಧ್ಯಕ್ಷ ಬಿ.ಕಾಂತರಾಜ್, ಜಿಲ್ಲಾ ಮದಕರಿನಾಯಕ ಸಾಂಸ್ಕøತಿಕ ಕೇಂದ್ರದ ಅಧ್ಯಕ್ಷ ಡಿ.ಗೋಪಾಲಸ್ವಾಮಿ ನಾಯಕ, ದರ್ಶನ್, ರೈತ ಮುಖಂಡರುಗಳಾದ ಬಸ್ತಿಹಳ್ಳಿ ಜಿ.ಸುರೇಶ್ಬಾಬು, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಕರ್ನಾಟಕ ರಾಜ್ಯ ಟಿಪ್ಪುಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ರಾಜ್ಯಾಧ್ಯಕ್ಷ ಟಿಪ್ಪುಖಾಸಿಂ ಆಲಿ, ಶಬ್ಬೀರ್ಭಾಷ
ಕಾಟಿಹಳ್ಳಿ ಕರಿಯಣ್ಣ, ಅಹೋಬಲ ಟಿ.ವಿ.ಎಸ್.ನ ಅರುಣ್, ಸಹಸ್ರಾರು ಅಭಿಮಾನಿಗಳು ಹಾಗೂ ಅಧಿಕಾರಿಗಳು ಶಾಸಕ ಟಿ.ರಘುಮೂರ್ತಿರವರಿಗೆ ಹುಟ್ಟುಹಬ್ಬದ ಶುಭಾಷಯಗಳನ್ನು ಕೋರಿದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















