Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜೂನ್ 15ರವರೆಗೆ ಕರ್ನಾಟಕದಲ್ಲಿ ವರುಣನ ಅಬ್ಬರ ; ಈ 11ಕ್ಕೂ ಹೆಚ್ಚು ಜಿಲ್ಲೆಗಳಿಗೆ ಭಾರೀ ಮಳೆ ಎಚ್ಚರಿಕೆ

---Advertisement---

ಬೆಂಗಳೂರು: ರಾಜ್ಯಾದ್ಯಂತ ಮುಂಗಾರು ಚುರುಕುಗೊಂಡಿದ್ದು, ವರುಣನ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮುಂದಿನ ಕೆಲವು ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಹತ್ವದ ಮುನ್ಸೂಚನೆ ನೀಡಿದೆ.

ಹವಾಮಾನ ಇಲಾಖೆಯ ಇತ್ತೀಚಿನ ವರದಿಯ ಪ್ರಕಾರ, ಜೂನ್ 15ರವರೆಗೆ ಕರಾವಳಿ ಕರ್ನಾಟಕದಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ. ವಿಶೇಷವಾಗಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಗುಡುಗು-ಮಿಂಚಿನೊಂದಿಗೆ ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇದೆ.

ರಾಜಧಾನಿ ಬೆಂಗಳೂರಿನ ನಿವಾಸಿಗಳಿಗೂ ಮಳೆಯ ಮುನ್ಸೂಚನೆ ನೀಡಲಾಗಿದೆ. ಮುಂದಿನ 48 ಗಂಟೆಗಳ ಅವಧಿಯಲ್ಲಿ ನಗರದ ವಿವಿಧ ಭಾಗಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆ ಸುರಿಯುವ ಸಾಧ್ಯತೆ ಇದ್ದು, ವಾಹನ ಸವಾರರು ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದ ಸಂಚರಿಸುವಂತೆ ಸೂಚಿಸಲಾಗಿದೆ.

ಮುಂಗಾರು ಮಳೆ ಉತ್ತರ ಒಳನಾಡು ಭಾಗಗಳಲ್ಲೂ ತನ್ನ ಪ್ರಭಾವವನ್ನು ಹೆಚ್ಚಿಸಲಿದೆ. ಬೆಳಗಾವಿ, ಬಾಗಲಕೋಟೆ, ವಿಜಯಪುರ ಹಾಗೂ ಕಲಬುರಗಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡು ಹಾಗೂ ಮಲೆನಾಡು ಪ್ರದೇಶಗಳಾದ ಕೊಡಗು, ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು, ಮಿಂಚಿನೊಂದಿಗೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕೆಲವು ಪ್ರದೇಶಗಳಲ್ಲಿ ಗಾಳಿ ವೇಗವೂ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now