Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಉಡುಪಿಯಲ್ಲಿ ಹೃದಯವಿದ್ರಾವಕ ಘಟನೆ ; ತಲೆ ಮೇಲೆ ತೆಂಗಿನಕಾಯಿ ಬಿದ್ದು ಮಗು ಸಾವು!

---Advertisement---

ಉಡುಪಿ: ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೆರಂಜೆಯಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. ತಾಯಿಯ ಕಂಕುಳಲ್ಲಿದ್ದ ಪುಟ್ಟ ಮಗುವಿನ ತಲೆಯ ಮೇಲೆ ಆಕಸ್ಮಿಕವಾಗಿ ತೆಂಗಿನಕಾಯಿ ಬಿದ್ದ ಪರಿಣಾಮ, ಒಂದೂವರೆ ವರ್ಷದ ಹೆಣ್ಣು ಮಗು ಪ್ರಾಣ ಕಳೆದುಕೊಂಡಿರುವ ದಾರುಣ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.

ಬ್ರಹ್ಮಾವರದಲ್ಲಿ ಫಾಸ್ಟ್ ಫುಡ್ ಅಂಗಡಿ ನಡೆಸುತ್ತಿರುವ ಪ್ರಶಾಂತ್ ಹಾಗೂ ಸುಚಿತ್ರಾ ದಂಪತಿಯ ಮುದ್ದಿನ ಮಗುವೇ ಈ ದುರ್ಘಟನೆಯ ಬಲಿಯಾಗಿದೆ. ಕುಟುಂಬದ ಸಂತಸಕ್ಕೆ ಕಾರಣವಾಗಿದ್ದ ಕಂದಮ್ಮನ ಅಕಾಲಿಕ ನಿಧನದಿಂದ ಮನೆಮಂದಿ ಹಾಗೂ ಗ್ರಾಮಸ್ಥರು ಶೋಕ ಸಾಗರದಲ್ಲಿ ಮುಳುಗಿದ್ದಾರೆ.

ಮಂಗಳವಾರ ಬೆಳಗ್ಗೆ ಸುಚಿತ್ರಾ ಅವರು ತಮ್ಮ ಆರು ವರ್ಷದ ಮಗಳನ್ನು ಶಾಲೆಗೆ ಬಿಟ್ಟು ಬರಲು ಮನೆಯಿಂದ ಹೊರಟಿದ್ದರು. ಸಾಮಾನ್ಯವಾಗಿ ಕಿರಿಯ ಮಗುವನ್ನು ಮನೆಯಲ್ಲಿ ಬಿಟ್ಟು ಹೋಗುತ್ತಿದ್ದ ಅವರು, ಅಂದು ಮಳೆ ನಿಂತಿದ್ದ ಹಿನ್ನೆಲೆಯಲ್ಲಿ ಒಂದೂವರೆ ವರ್ಷದ ಮಗುವನ್ನೂ ಕಂಕುಳಲ್ಲಿ ಎತ್ತಿಕೊಂಡು ಹೊರಟಿದ್ದರು.

ಮನೆಯಿಂದ ಸ್ವಲ್ಪ ದೂರ ಸಾಗುತ್ತಿದ್ದಂತೆಯೇ ದಾರಿ ಪಕ್ಕದಲ್ಲಿದ್ದ ತೋಟದ ತೆಂಗಿನ ಮರದಿಂದ ಏಕಾಏಕಿ ಒಂದು ತೆಂಗಿನಕಾಯಿ ಕಳಚಿ ನೇರವಾಗಿ ಮಗುವಿನ ತಲೆಯ ಮೇಲೆ ಬಿದ್ದಿದೆ. ಕ್ಷಣಾರ್ಧದಲ್ಲೇ ಮಗು ಗಂಭೀರವಾಗಿ ಗಾಯಗೊಂಡಿದ್ದು, ತಾಯಿ ಬೆಚ್ಚಿಬಿದ್ದಿದ್ದಾರೆ. ಘಟನೆ ನಡೆದ ತಕ್ಷಣ ಸ್ಥಳೀಯರು ನೆರವಿಗೆ ಧಾವಿಸಿ, ಪಕ್ಕದ ಮನೆಯವರ ವಾಹನದಲ್ಲಿ ಮಗುವನ್ನು ಆಸ್ಪತ್ರೆಗೆ ಕರೆದೊಯ್ದರು. ಮಗುವಿನ ತಲೆಗೆ ತೀವ್ರ ಸ್ವರೂಪದ ಗಾಯವಾಗಿದ್ದರಿಂದ ವೈದ್ಯರು ತುರ್ತು ಶಸ್ತ್ರಚಿಕಿತ್ಸೆ ನಡೆಸಿದರು.ಆದರೆ ವೈದ್ಯರ ಎಲ್ಲಾ ಪ್ರಯತ್ನಗಳ ನಡುವೆಯೂ ಚಿಕಿತ್ಸೆ ಫಲಕಾರಿಯಾಗದೆ, ಸಂಜೆಯ ವೇಳೆಗೆ ಮಗು ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now