ಸುದ್ದಿಒನ್, ಚಿತ್ರದುರ್ಗ, ಜೂನ್. 11 : ಭಾರತದಲ್ಲಿ ನಿರುದ್ಯೋಗಿಗಳು ಆದವರೋ ಇಲ್ಲಾ ಮಾಡಿದವರೋ ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮವು ಜೂನ್. 13 ರಂದು ನಗರದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ರಾಜ್ಯ ಕಾಲೇಜು ಮತ್ತು ವಿಶ್ವವಿದ್ಯಾಲಯಗಳ ನಿವೃತ್ತ ಶಿಕ್ಷಕರ ಒಕ್ಕೂಟ (FUCRTAK), ಚಿತ್ರದುರ್ಗ ಜಿಲ್ಲಾ ಘಟಕ, ರೋಟರಿ ಕ್ಲಬ್ ಚಿನ್ಮೂಲಾದ್ರಿ, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಮತ್ತು ಚಿತ್ರದುರ್ಗ ಸೈನ್ಸ್ ಫೌಂಡೇಶನ್ ಇವರುಗಳ ಸಂಯುಕ್ತಾಶ್ರಯದಲ್ಲಿ ಈ ಕಾರ್ಯಕ್ರಮ ಜರುಗಲಿದೆ.
ನಿವೃತ್ತ ಪ್ರಾಧ್ಯಾಪಕರು ಹಾಗೂ FUCRTAK ಅಧ್ಯಕ್ಷರಾದ ಪ್ರೊ.ಟಿ. ಹೆಚ್. ಕೃಷ್ಣಮೂರ್ತಿ ಅಧ್ಯಕ್ಷತೆ ವಹಿಸುವರು. ರೋಟರಿ ಕ್ಲಬ್ ಚಿನ್ಮೂಲಾದ್ರಿ ಅಧ್ಯಕ್ಷರಾದ ಶ್ರೀಮತಿ ದಿಲ್ ಷಾದ್ ಉನ್ನೀಸಾ ಕಾರ್ಯಕ್ರಮ ಉದ್ಘಾಟಿಸುವರು. ಹಂಪಿ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರಾದ ಪ್ರೊ.ಟಿ. ಆರ್.ಚಂದ್ರಶೇಖರ್ ಅವರು “ಭಾರತದಲ್ಲಿ ನಿರುದ್ಯೋಗ ಒಂದು ಅವಲೋಕನ” ವಿಷಯವಾಗಿ, ನಿವೃತ್ತ ಪ್ರಾಂಶುಪಾಲರು ಹಾಗೂ ಆರ್ಥಿಕ ಚಿಂತಕರು ಆದ ಡಾ.ಜಿ. ಎನ್.ಮಲ್ಲಿಕಾರ್ಜುನಪ್ಪ ಅವರು “ಭಾರತದಲ್ಲಿ ನಿರುದ್ಯೋಗಿಗಳು ಆದವರೋ ಇಲ್ಲಾ ಮಾಡಿದವರೋ” ಎಂಬ ವಿಷಯವಾಗಿ ಉಪನ್ಯಾಸ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬಿ.ಕೆ.ಶಿವರಶ್ಮಿ ಅಕ್ಕನವರು, ಡಾ.ಕೆ.ಎಂ.ವೀರೇಶ್, ಶ್ರೀ ಚಳ್ಳಕೆರೆ ಯರ್ರಿಸ್ವಾಮಿ ಭಾಗವಹಿಸುವರು ಎಂದು ಚಿತ್ರದುರ್ಗ ಸೈನ್ಸ್ ಫೌಂಡೇಶನ್ ಕಾರ್ಯದರ್ಶಿ ಎಚ್.ಎಸ್.ಟಿ.ಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















