ಚಿತ್ರದುರ್ಗ, ಜೂನ್. 11: 2026-27ನೆ ಸಾಲಿಗೆ ಕೃಷೋನ್ನತಿ-ಕೃಷಿ ವಿಸ್ತರಣೆ (ಆತ್ಮ) ಯೋಜನೆಯಡಿ ಚಿತ್ರದುರ್ಗ ಜಿಲ್ಲೆಯ ಕೃಷಿ ಇಲಾಖೆಯಲ್ಲಿ ಹೊಸದಾಗಿ 6 ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗಳಿಗೆ ನೇರ ಗುತ್ತಿಗೆ ಆಧಾರದ ಮೇಲೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜೂನ್ 30 ಅರ್ಜಿ ಸಲ್ಲಿಸಲು ಕೊನೆಯ ದಿನ.

ಮೊಳಕಾಲ್ಮೂರು ತಾಲ್ಲೂಕು ಹೊರತುಪಡಿಸಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ ಒಂದರಂತೆ ಹಾಗೂ ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬಬ್ಬೂರು ಫಾರಂಗೆ ಒಂದು ಹುದ್ದೆ ಸೇರಿದಂತೆ ಒಟ್ಟು 6 “ಸಹಾಯಕ ತಾಂತ್ರಿಕ ವ್ಯವಸ್ಥಾಪಕರ” ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.
ಕೃಷಿ/ಕೃಷಿ ಸಂಬಂಧಿತ ವಿಷಯದಲ್ಲಿ ಪದವಿ/ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ಕೃಷಿ/ಕೃಷಿ ಸಂಬಂಧಿತ ಚಟುವಟಿಕೆಗಳಲ್ಲಿ ಕನಿಷ್ಠ 1 ವರ್ಷದ ಕ್ಷೇತ್ರ ಮಟ್ಟದ ಅನುಭವ ಹೊಂದಿರಬೇಕು. ಅರ್ಜಿದಾರರು 10.06.2026ಕ್ಕೆ 45 ವರ್ಷದೊಳಗಿರಬೇಕು. ವೇತನ ಮಾಹೆಯಾನ ರೂ. 25,000/- ನೀಡಲಾಗುವುದು.
ಆಸಕ್ತ ಅಭ್ಯರ್ಥಿಗಳು ಆತ್ಮ ವಿಭಾಗ, ಜಂಟಿ ಕೃಷಿ ನಿರ್ದೇಶಕರ ಕಛೇರಿ, ಚಿತ್ರದುರ್ಗ ಇಲ್ಲಿ ಅರ್ಜಿಯನ್ನು ಪಡೆದು, ಅರ್ಜಿಯನ್ನು ನಿಗಧಿತ ನಮೂನೆಯಲ್ಲಿ ಪೂರ್ಣ ಮಾಹಿತಿಯೊಂದಿಗೆ ದಿನಾಂಕ:30.06.2026 ಸಂಜೆ 5ರ ಒಳಗಾಗಿ ಮುದ್ದಾಂ / ನೊಂದಣೆ ಅಂಚೆ ಮೂಲಕ ಜಂಟಿ ಕೃಷಿ ನಿರ್ದೇಶಕರು, ಆತ್ಮ ವಿಭಾಗ ಚಿತ್ರದುರ್ಗ ಇವರಿಗೆ ಅರ್ಜಿ ಸಲ್ಲಿಸಲು ಸೂಚಿಸಿದ್ದು, ತಡವಾಗಿ ಬಂದ ಅರ್ಜಿಗಳನ್ನು ಸ್ವಿಕರಿಸಲಾಗುವುದಿಲ್ಲ. ಅರ್ಜಿಯೊಂದಿಗೆ ವಿದ್ಯಾರ್ಹತೆ ಸಂಬಂಧಿಸಿದಂತೆ ಎಲ್ಲಾ ವರ್ಷದ ಅಂಕಪಟ್ಟಿಗಳು, ಅನುಭವ ಪ್ರಮಾಣ ಪತ್ರಗಳು, ಕಂಪ್ಯೂಟರ್ ಜ್ಞಾನಕ್ಕೆ ಸಂಬಂಧಿಸಿದ ಪ್ರಮಾಣ ಪತ್ರಗಳನ್ನು ಲಗತ್ತಿಸುವುದು ಕಡ್ಡಾಯವಾಗಿರುತ್ತದೆ ಮತ್ತು ಎಲ್ಲಾ ಪ್ರಮಾಣ ಪತ್ರಗಳ ದೃಢೀಕೃತ ಪ್ರತಿಗಳನ್ನು ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಆತ್ಮ ವಿಭಾಗ, ಜಂಟಿ ಕೃಷಿ ನಿರ್ದೇಶಕರ ಕಛೇರಿ, ಚಿತ್ರದುರ್ಗ ಇಲ್ಲಿ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.















