Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೊಲ್ಲೂರು ಮೂಕಾಂಬಿಕಾ ದೇಗುಲದ ದರ್ಶನದ ಬಗ್ಗೆ ಭಕ್ತರಿಗೆ ಪೊಲೀಸ್ ಇಲಾಖೆಯಿಂದ ಮಹತ್ವದ ಸೂಚನೆ

---Advertisement---

ತಮಿಳುನಾಡಿನ ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್ 12ರಂದು ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆಯಲಿದ್ದಾರೆ. ಮುಖ್ಯಮಂತ್ರಿ ಭೇಟಿಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಂಡಿದೆ.ಸಿಎಂ ವಿಜಯ್ ಅವರು ದೇವಿಯ ದರ್ಶನ ಮತ್ತು ವಿಶೇಷ ಪೂಜೆಗಾಗಿ ಮಾತ್ರ ಕೊಲ್ಲೂರಿಗೆ ಆಗಮಿಸುತ್ತಿದ್ದು, ಪೂಜೆ ಮುಗಿದ ಬಳಿಕ ಅದೇ ದಿನ ತಮಿಳುನಾಡಿಗೆ ವಾಪಸ್ಸಾಗಲಿದ್ದಾರೆ.

ಅವರ ಪ್ರವಾಸದ ವೇಳೆ ಯಾವುದೇ ಸಾರ್ವಜನಿಕ ಕಾರ್ಯಕ್ರಮ ಅಥವಾ ರಾಜಕೀಯ ಸಭೆ-ಸಮಾರಂಭಗಳು ನಿಗದಿಯಾಗಿಲ್ಲ ಎಂದು ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ.ವಿವಿಐಪಿ ಭದ್ರತಾ ಕ್ರಮಗಳ ಹಿನ್ನೆಲೆಯಲ್ಲಿ ಜೂನ್ 12ರಂದು ಮಧ್ಯಾಹ್ನ 12 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರು ದರ್ಶನದ ಸಮಯವನ್ನು ಮರುಪರಿಶೀಲಿಸುವುದು ಒಳಿತು ಎಂದು ಪೊಲೀಸರು ಮನವಿ ಮಾಡಿದ್ದಾರೆ. ಈ ಅವಧಿಯಲ್ಲಿ ಭದ್ರತಾ ತಪಾಸಣೆಗಳು ಹೆಚ್ಚಾಗಿರುವುದರಿಂದ ಸಾಮಾನ್ಯ ದರ್ಶನಕ್ಕೆ ವಿಳಂಬ ಹಾಗೂ ಅನಾನುಕೂಲ ಉಂಟಾಗುವ ಸಾಧ್ಯತೆ ಇದೆ.

ದೇವಸ್ಥಾನದ ಮುಖ್ಯ ಪ್ರವೇಶ ದ್ವಾರ, ಒಳಾಂಗಣ ಹಾಗೂ ಮುಖ್ಯಮಂತ್ರಿ ಸಂಚರಿಸುವ ಮಾರ್ಗಗಳಲ್ಲಿ ಸಾರ್ವಜನಿಕರು ಅನಗತ್ಯವಾಗಿ ಗುಂಪುಗೂಡುವುದು ಮತ್ತು ಜನಸಂದಣಿ ಉಂಟುಮಾಡುವುದನ್ನು ನಿರ್ಬಂಧಿಸಲಾಗಿದೆ.ಕೊಲ್ಲೂರಿಗೆ ಆಗಮಿಸುವ ಭಕ್ತರು ಹಾಗೂ ಸಾರ್ವಜನಿಕರು ಪೊಲೀಸ್ ಸಿಬ್ಬಂದಿಯೊಂದಿಗೆ ಸಹಕರಿಸಿ, ತಮ್ಮ ದರ್ಶನದ ಸಮಯವನ್ನು ಮುಂಚಿತವಾಗಿ ಯೋಜಿಸಿಕೊಳ್ಳಬೇಕು ಎಂದು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ಮನವಿ ಮಾಡಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now