Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜನರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್! ಅಕ್ಕಿ ದರ ಕೆಜಿಗೆ ₹10ರವರೆಗೆ ಹೆಚ್ಚಳ

---Advertisement---

ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆಯ ನಡುವೆ ಅಕ್ಕಿ ದರವೂ ಗಗನಕ್ಕೇರಿದೆ ಪೆಟ್ರೋಲ್, ಡೀಸೆಲ್, ತರಕಾರಿ ಸೇರಿದಂತೆ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಲೇ ಸಂಕಷ್ಟ ಅನುಭವಿಸುತ್ತಿರುವ ಜನಸಾಮಾನ್ಯರಿಗೆ ಇದೀಗ ಮತ್ತೊಂದು ಆಘಾತ ಎದುರಾಗಿದೆ. ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಅಕ್ಕಿ ಬೆಲೆ ಏರಿಕೆಯಾಗಿದ್ದು, ಗ್ರಾಹಕರ ಮನೆ ಬಜೆಟ್ ಮೇಲೆ ಹೆಚ್ಚುವರಿ ಹೊರೆ ಬೀಳುವಂತಾಗಿದೆ.

ಮಾರುಕಟ್ಟೆ ಮಾಹಿತಿಯ ಪ್ರಕಾರ, ವಿವಿಧ ಮಾದರಿಯ ಅಕ್ಕಿಗಳ ಬೆಲೆ ಪ್ರತಿ ಕೆಜಿಗೆ ಸುಮಾರು ₹6 ರಿಂದ ₹10ರವರೆಗೆ ಹೆಚ್ಚಾಗಿದೆ. 25 ರಿಂದ 26 ಕೆಜಿ ತೂಕದ ಒಂದು ಅಕ್ಕಿ ಚೀಲದ ಬೆಲೆ ಸುಮಾರು ₹150ರವರೆಗೆ ಏರಿಕೆಯಾದ ಹಿನ್ನೆಲೆಯಲ್ಲಿ ಗ್ರಾಹಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.
ಸ್ಥಳೀಯ ಮಾರುಕಟ್ಟೆಯಲ್ಲಿ ಅಕ್ಕಿಯ ಬೇಡಿಕೆ ಹೆಚ್ಚುತ್ತಿರುವುದರ ಜೊತೆಗೆ ಪೂರೈಕೆ ಪ್ರಮಾಣ ಕಡಿಮೆಯಾಗಿರುವುದು ಪ್ರಮುಖ ಕಾರಣವಾಗಿದೆ. ಇದರ ಜೊತೆಗೆ, ಕೇಂದ್ರ ಸರ್ಕಾರ ವಿವಿಧ ದೇಶಗಳಿಗೆ ಅಕ್ಕಿ ರಫ್ತಿಗೆ ಅವಕಾಶ ನೀಡಿರುವ ಪರಿಣಾಮ ದೇಶೀಯ ಮಾರುಕಟ್ಟೆಯಲ್ಲಿ ಲಭ್ಯತೆ ಕುಸಿದಿದ್ದು, ಬೆಲೆ ಏರಿಕೆಗೆ ದಾರಿ ಮಾಡಿಕೊಟ್ಟಿದೆ.

ವ್ಯಾಪಾರಿಗಳ ಪ್ರಕಾರ, ಅಕ್ಕಿ ಪೂರೈಕೆಯ ಕೊರತೆ ಮುಂದಿನ ನವೆಂಬರ್ ತಿಂಗಳವರೆಗೂ ಮುಂದುವರಿಯುವ ಸಾಧ್ಯತೆ ಇದ್ದು, ಸಮೀಪ ಭವಿಷ್ಯದಲ್ಲಿ ಬೆಲೆ ಇಳಿಕೆಯಾಗುವ ಲಕ್ಷಣಗಳು ಕಡಿಮೆ ಎನ್ನಲಾಗುತ್ತಿದೆ. ಸುಮಾರು ಹತ್ತು ದಿನಗಳ ಹಿಂದೆಯೇ ಅಕ್ಕಿ ದರ ಏರಿಕೆ ಆರಂಭವಾಗಿದ್ದು, 26 ಕೆಜಿ ಚೀಲದ ಮೇಲೆ ಕನಿಷ್ಠ ₹150 ಹೆಚ್ಚಳ ದಾಖಲಾಗಿದೆ. ಸಾಮಾನ್ಯವಾಗಿ ಬೇಸಿಗೆ ಅವಧಿಯಲ್ಲಿ ಕೆಜಿಗೆ ₹1 ರಿಂದ ₹2ರಷ್ಟು ಮಾತ್ರ ಬೆಲೆ ಹೆಚ್ಚಾಗುತ್ತಿತ್ತು. ಆದರೆ ಈ ಬಾರಿ ಜಾಗತಿಕ ಮಟ್ಟದ ಬೆಳವಣಿಗೆಗಳು, ವಿಶೇಷವಾಗಿ ಮಧ್ಯಪ್ರಾಚ್ಯ ಪ್ರದೇಶದ ಸಂಘರ್ಷಗಳ ಪರಿಣಾಮದಿಂದ ಸಾಗಾಣಿಕೆ ಹಾಗೂ ಇಂಧನ ವೆಚ್ಚ ಹೆಚ್ಚಾಗಿ ಅಕ್ಕಿ ಮಾರುಕಟ್ಟೆಯ ಮೇಲೂ ಪರಿಣಾಮ ಬೀರಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now