Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿದ್ಯಾರ್ಥಿಗಳೇ ಗಮನಿಸಿ! ಇಂದಿನಿಂದ ಫ್ರೀ ಬಸ್ ಪಾಸ್ ಅರ್ಜಿ ಆರಂಭ; ಈ ದಾಖಲೆಗಳು ಕಡ್ಡಾಯ

---Advertisement---

ಬೆಂಗಳೂರು: ರಾಜ್ಯದ ಶಾಲಾ,ಕಾಲೇಜು ವಿದ್ಯಾರ್ಥಿಗಳಿಗೆ ಸರ್ಕಾರ ಘೋಷಿಸಿರುವ ಉಚಿತ ಬಸ್ ಪಾಸ್ ಯೋಜನೆಗೆ ಇಂದಿನಿಂದ ಅಧಿಕೃತ ಚಾಲನೆ ದೊರೆತಿದೆ. 2026-27ನೇ ಶೈಕ್ಷಣಿಕ ಸಾಲಿನ ಫ್ರೀ ವಿದ್ಯಾರ್ಥಿ ಬಸ್ ಪಾಸ್ ಪಡೆಯಲು ಅರ್ಹ ವಿದ್ಯಾರ್ಥಿಗಳು ‘ಸೇವಾಸಿಂಧು’ ಪೋರ್ಟಲ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆ ಅಡಿಯಲ್ಲಿ ಸರ್ಕಾರಿ ಬಸ್ಗಳಲ್ಲಿ ವಿದ್ಯಾರ್ಥಿನಿಯರಿಗೆ ಈಗಾಗಲೇ ಉಚಿತ ಪ್ರಯಾಣ ಸೌಲಭ್ಯ ಲಭ್ಯವಿರುವುದರಿಂದ, ಅವರು ಪ್ರತ್ಯೇಕ ಬಸ್ ಪಾಸ್ ಪಡೆಯುವ ಅಗತ್ಯವಿಲ್ಲ. ಹೊಸದಾಗಿ ಜಾರಿಗೆ ಬಂದಿರುವ ಈ ಯೋಜನೆ ಕೇವಲ ಗಂಡು ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯವಾಗಲಿದೆ.

ಅರ್ಜಿ ಸಲ್ಲಿಸಲು ಬೇಕಾಗುವ ಕಡ್ಡಾಯ ದಾಖಲೆಗಳು

ಫ್ರೀ ಬಸ್ ಪಾಸ್ ಗೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಈ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು:

ವಿದ್ಯಾರ್ಥಿಯ ಆಧಾರ್ ಕಾರ್ಡ್

ಶಾಲೆ ಅಥವಾ ಕಾಲೇಜಿನ ಪ್ರವೇಶಾತಿ ರಶೀದಿ

ಇತ್ತೀಚಿನ ಎರಡು ಪಾಸ್ಪೋರ್ಟ್ ಅಳತೆಯ ಭಾವಚಿತ್ರಗಳು

ಆನ್ಲೈನ್ ಅರ್ಜಿಯ ಮುದ್ರಿತ ಪ್ರತಿಯಲ್ಲಿ ಪ್ರಾಂಶುಪಾಲರು ಅಥವಾ ಮುಖ್ಯೋಪಾಧ್ಯಾಯರ ಸಹಿ ಮತ್ತು ಅಧಿಕೃತ ಸೀಲ್ ಈ ದಾಖಲೆಗಳಲ್ಲಿ ಯಾವುದಾದರೂ ಕೊರತೆಯಿದ್ದರೆ ಅರ್ಜಿ ಅನುಮೋದನೆ ವಿಳಂಬವಾಗುವ ಸಾಧ್ಯತೆ ಇದೆ.

ಅರ್ಜಿ ಸಲ್ಲಿಸುವುದು ಹೇಗೆ?

ವಿದ್ಯಾರ್ಥಿಗಳು ತಮ್ಮ ಮೊಬೈಲ್ ಫೋನ್ ಬಳಸಿ ಅಥವಾ ಸಮೀಪದ ಸೈಬರ್ ಸೆಂಟರ್, ಬೆಂಗಳೂರು ಒನ್, ಕರ್ನಾಟಕ ಒನ್ ಹಾಗೂ ನಾಡಕಚೇರಿಗಳ ಮೂಲಕ ‘ಸೇವಾಸಿಂಧು’ ಪೋರ್ಟಲ್ಗೆ ಲಾಗಿನ್ ಆಗಿ ಅರ್ಜಿ ಸಲ್ಲಿಸಬಹುದು.

ಉಚಿತ ಬಸ್ ಪಾಸ್ ಯೋಜನೆ ಘೋಷಣೆಗೆ ಮುನ್ನ ಹಣ ಪಾವತಿಸಿ ಪಾಸ್ ಪಡೆದಿರುವ ವಿದ್ಯಾರ್ಥಿಗಳಿಗೆ ಪಾವತಿಸಿದ ಮೊತ್ತವನ್ನು ಮುಂದಿನ 15 ದಿನಗಳೊಳಗೆ ಮರುಪಾವತಿಸಲಾಗುವುದು ಎಂದು ಇಲಾಖೆ ಸ್ಪಷ್ಟಪಡಿಸಿದೆ.

 

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now