Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕರಾವಳಿ ಸೇರಿ ಹಲವು ಜಿಲ್ಲೆಗಳಲ್ಲಿ ಇಂದು,ನಾಳೆ ಭಾರಿ ಮಳೆ : ಆರೆಂಜ್ ಅಲರ್ಟ್ ಘೋಷಣೆ

---Advertisement---

ಬೆಂಗಳೂರು: ಕರಾವಳಿ ಸೇರಿದಂತೆ ರಾಜ್ಯದಾದ್ಯಂತ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಹವಾಮಾನ ಇಲಾಖೆಯು ವಿವಿಧ ಜಿಲ್ಲೆಗಳಿಗೆ ‘ಆರೆಂಜ್’ ಹಾಗೂ ‘ಯೆಲ್ಲೋ’ ಅಲರ್ಟ್ ಘೋಷಿಸಿದೆ.

ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಕೆಲವು ಗಂಟೆಗಳ ಅವಧಿಯಲ್ಲಿ ಅತ್ಯಂತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕರಾವಳಿಯ ಈ ಮೂರೂ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ (Orange Alert) ಘೋಷಿಸಲಾಗಿದೆ.
ಧಾರವಾಡ, ಹಾವೇರಿ ಹಾಗೂ ಗದಗ ಜಿಲ್ಲೆಗಳಲ್ಲಿ ಗುಡುಗು ಮತ್ತು ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮಳೆಯ ಜೊತೆಗೆ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯೂ ಇರುವುದರಿಂದ ಈ ಭಾಗಕ್ಕೆ ಯೆಲ್ಲೋ ಅಲರ್ಟ್ (Yellow Alert) ಜಾರಿಗೊಳಿಸಲಾಗಿದೆ.

ಇದೇ ಅವಧಿಯಲ್ಲಿ ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಹಾಗೂ ಕೋಲಾರ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದ್ದು, ಕೆಲವು ಕಡೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಈ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now