Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾಕಾರಿ ಹೇಳಿಕೆ ನೀಡಿದರೆ ಕಠಿಣ ಕಾನೂನು ಕ್ರಮ : ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ

Facebook
Twitter
Telegram
WhatsApp

ದಾವಣಗೆರೆ (ಫೆ.11) :  ಅನಗತ್ಯವಾಗಿ ಶಾಂತಿ ಸುವ್ಯವಸ್ಥೆ ಕದಡುವುದು ಅಥವಾ ಗದ್ದಲ ಸೃಷ್ಟಿಸುವ ಪ್ರಯತ್ನ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾಕಾರಿ ಸಂದೇಶ ಹಾಕುವುದನ್ನು ಯಾರು ಮಾಡಬಾರದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು.

ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿಯಾಗಿರುವ ಹಿನ್ನಲೆಯಲ್ಲಿ ಶುಕ್ರವಾರ ದಾವಣಗೆರೆ ನಗರದ ಆಜಾದ್ ನಗರ, ಭಾಷಾನಗರ, ವಿನೋಬನಗರ ದಲ್ಲಿರುವ ಮಸೀದಿಗಳಿಗೆ ಭೇಟಿ ನೀಡಿ, ಜನರಲ್ಲಿ ಅರಿವು ಮೂಡಿಸಿ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಇದುವರೆಗೂ ಯಾವುದೇ ಗಲಾಟೆಗಳಾಗದೆ ಎಲ್ಲರೂ ಸಹೋದರರಂತೆ ಬಾಳುತ್ತಿದ್ದೇವೆ.  ಹಾಗಾಗಿ ಜನಸಂದಣಿ ಇರುವ ಪ್ರದೇಶಗಳಿಗೆ ಹಾಗೂ ಮಸೀದಿಗಳಿಗೆ ಭೇಟಿ ನೀಡಿ ಜನರೊಂದಿಗೆ ಮಾತನಾಡಿ ಅವರಿಗೆ ಆತ್ಮವಿಶ್ವಾಸ ತುಂಬುವ ಕಾರ್ಯ ಮಾಡುತ್ತಿದ್ದೇವೆ.   ನೀಷೆಧಾಜ್ಞೆ ಜಾರಿ ಇರುವುದರಿಂದ ಸಾಮೂಹಿಕವಾಗಿ ನಮಾಜ್ ಮಾಡದೆ 144 ಸೆಕ್ಷನ್ ತೆರವಾಗುವವರೆಗೂ ತಮ್ಮ ಮನೆಗಳಲ್ಲಿ ಪ್ರಾರ್ಥನೆ ಮಾಡುವಂತೆ ಅರಿವು ಮೂಡಿಸಲಾಗುತ್ತಿದ್ದು ಯಾವುದೇ ಸಂದರ್ಭದಲ್ಲಿಯೂ ಜನರು ಕಾನೂನು ಕೈಗೆತ್ತಿಕೊಳ್ಳುವುದಕ್ಕೆ ಮುಂದಾಗಬಾರದು.

ಕೆಲವೆಡೆ ಅನವಶ್ಯಕವಾಗಿ ಸಣ್ಣ ಪುಟ್ಟ ಗಲಾಟೆಗಳಾಗಿವೆ, ಅವುಗಳನ್ನು ಜಿಲ್ಲಾ ಪೊಲೀಸ್ ಇಲಾಖೆ ಯಶಸ್ವಿಯಾಗಿ ನಿಭಾಯಿಸಿದೆ ಮತ್ತು ಮುಂದೆಯೂ ಕೂಡ ಈ ರೀತಿಯ ಗಲಾಟೆಗಳಾಗದಂತೆ ನೋಡಿಕೊಳ್ಳಲಾಗುವುದು.  ಸುಳ್ಳು ಸಂದೇಶ ಹಾಗೂ ವದಂತಿಗಳಿಗೆ ಯಾರು ಕಿವಿಗೂಡಬಾರದು, ಪ್ರಚೋದನಾಕಾರಿ ಹೇಳಿಕೆಗಳು, ಸಂದೇಶ ನೀಡುವವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಮಾತನಾಡಿ ಹಿಜಾಬ್ ಮತ್ತು ಕೇಸರಿಶಾಲಿನ ಕುರಿತ ಚರ್ಚೆಗೆ ಸಂಬಂಧಿಸಿದಂತೆ ನ್ಯಾಯಾಲಯ ನೀಡುವ ಆದೇಶ, ಸೂಚನೆಗಳನ್ನು ಪಾಲಿಸುವುದು ನಮ್ಮ ಕರ್ತವ್ಯ.  ಸಾಮಾಜಿಕ ಜಾಲತಾಣಗಳಾದ ಫೇಸ್‍ಬುಕ್, ವಾಟ್ಸಪ್, ಇನ್ಸ್ಟಾಗ್ರಾಮ್‍ಗಳಲ್ಲಿ ಪ್ರಚೋದನಾಕಾರಿ ಹೇಳಿಕೆಗಳನ್ನು ಹಾಗೂ ಪೊಸ್ಟರ್ ಹಂಚಿಕೊಂಡಲ್ಲಿ ಮತ್ತು ಗುಂಪುಗಾರಿಗೆ, ಗಲಾಟೆ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಕೆಲವರ ಮೇಲೆ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ.

ಗುಂಪುಗಾರಿಕೆ, ಪ್ರಚೋದನಾಕಾರಿ ಹೇಳಿಕೆ, ಪೋಸ್ಟರ್‍ಗಳ ಹಂಚಿಕೆ ಕುರಿತಂತೆ ಸಾರ್ವಜನಿಕರಿಗೆ ಮಾಹಿತಿ ದೊರೆತಲ್ಲಿ, ಕಾನೂನು ಕೈಗೆತ್ತಿಕೊಳ್ಳದೆ ಹತ್ತಿರದ ಪೊಲೀಸ್ ಠಾಣೆಗೆ ತಿಳಿಸಬೇಕು.  ಜಿಲ್ಲೆಗೆ ರಕ್ಷಣಾ ಪಡೆಗಳು ಕೂಡ ಆಗಮಿಸಿದ್ದು ಇದುವರೆಗೂ ಬಳಕೆ ಮಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿಲ್ಲ, ಸಾರ್ವಜನಿಕರು ಹೀಗೆಯೇ ಶಾಂತಿಯುತವಾಗಿ ಸಹಕರಿಸಬೇಕು ಎಂದರು.

ಇದೇ ಸಂದರ್ಭದಲ್ಲಿ ಮುಸ್ಲಿಂ ಸಮಾಜದ ಮುಖಂಡ ಖಾಸಿಂಸಾಬ್, ಡಿವೈಎಸ್‍ಪಿ ನರಸಿಂಹ ತಾಮ್ರಧ್ವಜ ಹಾಗೂ ಇತರರು ಹಾಜರಿದ್ದರು.

ಹರಿಹರದ ಜಾಮಿಯಾ ಮಸೀದಿ ಹಾಗೂ ಹೆಚ್.ಎಸ್. ಬಡಾವಣೆಯ ಮಸ್ಜಿದ್ ಇ ಅಜಾಮ್ ಮಸೀದಿಗಳಿಗೆ ಮತ್ತು ಮಲೆಬೇನ್ನೂರಿಗೆ ಜಿಲ್ಲಾಧಿಕಾರಿಗಳು, ಪೊಲೀಸ್ ಅಧಿಕಾರಿಗಳನ್ನೊಳಗೊಂಡ ತಂಡ ಭೇಟಿ ನೀಡಿ ಸಾಮೂಹಿಕ ಪ್ರಾರ್ಥನೆ ಕೈಗೊಳ್ಳದಂತೆ ಅರಿವು ಮೂಡಿಸಲಾಯಿತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಬಾಪೂಜಿ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ : ವಕೀಲರಿಗೆ ಸನ್ಮಾನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 24 : ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಕದಳಿ ಮಹಿಳಾ ವೇದಿಕೆ, ಬಾಪೂಜಿ ಸಮೂಹ ಸಂಸ್ಥೆಗಳು, ರಂಗಸೌರಭ ಕಲಾ ಸಂಘ ಹಾಗೂ ಶ್ರೀ ಶಿವಕುಮಾರ ಕಲಾ ಸಂಘ ಇವರ ಸಂಯುಕ್ತ

ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಸೋಲಿಗೆ ಆ ಐವರು ಕಾರಣವೇ ?

ಸುದ್ದಿಒನ್ | ಮಹಾರಾಷ್ಟ್ರ ಚುನಾವಣೆಯ ಇತಿಹಾಸದಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷ ಕೇವಲ 16 ಸ್ಥಾನಗಳನ್ನು ಗೆದ್ದಿದೆ. ಭಾರೀ ಸೋಲಿನ ನಂತರ ಪಕ್ಷವು ಇವಿಎಂಗಳಿಂದ ನಮಗೆ ಸೋಲಾಗಿದೆ ಎಂದು ದೂರಿದೆ. ಇವಿಎಂಗಳ ದತ್ತಾಂಶದಿಂದಾಗಿ ಚುನಾವಣೆ

RCB ಸೇರ್ತಾರೆ ಅಂದುಕೊಂಡ್ರೆ ಕನ್ನಡಿಗ ರಾಹುಲ್ ಡೆಲ್ಲಿ ಪಾಲು..!

RCB ಕ್ರೇಜ್ ಎಷ್ಟಿದೆ‌ ಎಂಬುದನ್ನು ಬಿಡಿಸಿ ಹೇಳುವ ಅಗತ್ಯವಿಲ್ಲ. ಐಪಿಎಲ್ ಶುರುವಾಗುವ ಮುನ್ನವೇ ಆರ್ಸಿಬಿ ಫೀವರ್ ಅಭಿಮಾನಿಗಳಲ್ಲಿ ಜೋರಾಗಿ ಬಿಡುತ್ತದೆ. ಆರ್ಸಿಬಿ ಅಂದ್ರೆ ಅಷ್ಟು ಪ್ರೀತಿ ಕನ್ನಡಿಗರಿಗೆ. ಈಗ ಆರ್ಸಿಬಿ ಫ್ಯಾನ್ಸ್ ಖುಷಿ ಪಡೋ

error: Content is protected !!