ಜೋರ್ಹತ್ (ಅಸ್ಸಾಂ): ಭಾರತೀಯ ವಾಯುಪಡೆಯ (IAF) ಎಎನ್-32 (AN-32) ಸರಕು ಸಾಗಣೆ ವಿಮಾನವೊಂದು ಶನಿವಾರ (ಜೂನ್ 13, 2026) ಲ್ಯಾಂಡಿಂಗ್ ಆಗುವ ವೇಳೆ ಅಪಘಾತಕ್ಕೀಡಾಗಿದ್ದು, ಐದು ಜನ ವಾಯುಪಡೆ ಸಿಬ್ಬಂದಿ ದುರದೃಷ್ಟವಶಾತ್ ಸಾವನ್ನಪ್ಪಿದ್ದಾರೆ ಎಂದು ವಾಯುಪಡೆ ತಿಳಿಸಿದೆ.
ಅಪಘಾತಕ್ಕೆ ನಿಖರವಾದ ಕಾರಣವನ್ನು ಪತ್ತೆಹಚ್ಚಲು ಕೋರ್ಟ್ ಆಫ್ ಇನ್ಕ್ವೈರಿ (ವಿಚಾರಣಾ ಸಮಿತಿ) ರಚಿಸಲಾಗುತ್ತಿದೆ.43ನೇ ಸ್ಕ್ವಾಡ್ರನ್ಗೆ ಸೇರಿದ ಈ ಎಎನ್-32 ವಿಮಾನವು ಸರಕುಗಳನ್ನು ಹೊತ್ತು ತರುತ್ತಿತ್ತು. ಜೋರ್ಹತ್ ಜಿಲ್ಲೆಯ ರೌರಿಯಾ ಪ್ರದೇಶದಲ್ಲಿರುವ ಐಎಎಫ್ ವಾಯುನೆಲೆಯಲ್ಲಿ ಲ್ಯಾಂಡಿಂಗ್ ಆಗುತ್ತಿದ್ದ ಸಂದರ್ಭದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.

ಈ ಕುರಿತು ಭಾರತೀಯ ವಾಯುಪಡೆಯು ‘X’ (ಟ್ವಿಟರ್) ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಇಂದು ಜೋರ್ಹತ್ನಲ್ಲಿ ಲ್ಯಾಂಡಿಂಗ್ ಆಗುತ್ತಿದ್ದಾಗ ಐಎಎಫ್ನ ಎಎನ್-32 ವಿಮಾನವೊಂದು ಅಪಘಾತಕ್ಕೀಡಾಗಿದೆ. ಅಪಘಾತದ ಕಾರಣವನ್ನು ಕಂಡುಹಿಡಿಯಲು ಕೋರ್ಟ್ ಆಫ್ ಇನ್ಕ್ವೈರಿಗೆ ಆದೇಶಿಸಲಾಗಿದೆ ಎಂದು ತಿಳಿಸಿದೆ.
ಘಟನಾ ಸ್ಥಳಕ್ಕೆ ಭಾರತೀಯ ವಾಯುಪಡೆಯ ಹಿರಿಯ ಅಧಿಕಾರಿಗಳು ಧಾವಿಸಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಇಡೀ ವಾಯುನೆಲೆಯನ್ನು ಸಂಪೂರ್ಣವಾಗಿ ಸೀಲ್ ಮಾಡಲಾಗಿದ್ದು, ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ,” ಎಂದು ವಾಯುಪಡೆಯ ವಕ್ತಾರರು ತಿಳಿಸಿದ್ದಾರೆ. ವಿಮಾನದಲ್ಲಿದ್ದ ಇತರರ ಸ್ಥಿತಿಗತಿ ಹಾಗೂ ಹಾನಿಯ ಸಂಪೂರ್ಣ ವಿವರಗಳಿಗಾಗಿ ತನಿಖೆ ಮುಂದುವರಿದಿದೆ.
The Indian Air Force deeply regrets the loss of five personnel in the An-32 accident at Jorhat, Assam.
Sqn Ldr Prashant Singh, Flt Lt Shubham Kumar, Sgt Jitendra Sharma, Agniveervayu Khemaram Kumawat and Agniveervayu Danish Alam made the supreme sacrifice in the line of duty.… pic.twitter.com/9SmOjtS5mU
— Indian Air Force (@IAF_MCC) June 13, 2026
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.













