ಅಹಮದಾಬಾದ್: ದುಬೈನಿಂದ ಬಂದಿಳಿದ ಇಂಡಿಗೋ ವಿಮಾನದಲ್ಲಿ ಅಡಗಿಸಿಡಲಾಗಿದ್ದ ಬರೋಬ್ಬರಿ 4.27 ಕೋಟಿ ರೂಪಾಯಿ ಮೌಲ್ಯದ ಚಿನ್ನವನ್ನು ಅಹಮದಾಬಾದ್ನ ಸರ್ದಾರ್ ವಲ್ಲಭಭಾಯ್ ಪಟೇಲ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಯಶಸ್ವಿಯಾಗಿ ವಶಪಡಿಸಿಕೊಂಡಿದ್ದಾರೆ.
ಶುಕ್ರವಾರದಂದು ದುಬೈನಿಂದ ಬಂದ ಇಂಡಿಗೋ ಫ್ಲೈಟ್ 6E-1478 ರಲ್ಲಿ ಕಸ್ಟಮ್ಸ್ ಅಧಿಕಾರಿಗಳು ಮತ್ತು ವಿಮಾನದ ಇಂಜಿನಿಯರ್ಗಳು ಜಂಟಿಯಾಗಿ ತಪಾಸಣೆ ನಡೆಸಿದ್ದರು. ಈ ವೇಳೆ ವಿಮಾನದ ಮುಂಭಾಗದ ಶೌಚಾಲಯದಲ್ಲಿದ್ದ ಸ್ಪೀಕರ್ ಬಾಕ್ಸ್ ಅಡಿಯಲ್ಲಿ ಕಪ್ಪು ಪ್ಲಾಸ್ಟಿಕ್ ಟೇಪ್ನಿಂದ ಸುತ್ತಿಡಲಾಗಿದ್ದ ಎರಡು ಪೌಚ್ ಗಳು ಪತ್ತೆಯಾಗಿವೆ. 2,799.3 ಗ್ರಾಂ (ಸುಮಾರು 2.8 ಕೆಜಿ) 24 ಕ್ಯಾರೆಟ್ (999 ಪರಿಶುದ್ಧತೆ) ಹೊಂದಿರುವ 24 ಬಿಸ್ಕತ್ತುಗಳು ಪತ್ತೆಯಾಗಿವೆ.
962ರ ಕಸ್ಟಮ್ಸ್ ಕಾಯ್ದೆಯನ್ನು ಉಲ್ಲಂಘಿಸಿ ಈ ಚಿನ್ನವನ್ನು ಭಾರತಕ್ಕೆ ಸಾಗಿಸಲು ಯತ್ನಿಸಲಾಗಿತ್ತು. ವಿಮಾನದಲ್ಲಿದ್ದ ಯಾವುದೇ ಪ್ರಯಾಣಿಕರಾಗಲಿ ಅಥವಾ ಸಿಬ್ಬಂದಿಯಾಗಲಿ ಈ ಚಿನ್ನ ತಮಗೆ ಸೇರಿದ್ದೆಂದು ಒಪ್ಪಿಕೊಳ್ಳದ ಕಾರಣ, ಅಧಿಕಾರಿಗಳು ಇದನ್ನು ಅನಾಥ ಸರಕು ಎಂದು ಪರಿಗಣಿಸಿ ವಶಪಡಿಸಿಕೊಂಡಿದ್ದಾರೆ. ಸದ್ಯ ಈ ಬಗ್ಗೆ ತೀವ್ರ ತನಿಖೆ ನಡೆಯುತ್ತಿದೆ.
Ahmedabad: Customs officials seized 24 gold biscuits (2.79 kg) worth over ₹4.26 crore from a hidden compartment on an IndiGo flight arriving from Dubai at SVPI Airport. The gold was found concealed and declared unclaimed.#Ahmedabad #Gujarat #Customs pic.twitter.com/GHRuuOCwp2
— Vijay (@Vijay2038575) June 13, 2026
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















