Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ: ಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ

---Advertisement---

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. “ಗ್ಯಾರಂಟಿ ಯೋಜನೆಗಳು ಇವೆ, ಮುಂದೆಯೂ ಇರಲಿವೆ” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಾರ್ವಜನಿಕರಿಗೆ ಸ್ಪಷ್ಟ ಭರವಸೆ ನೀಡಿದ್ದಾರೆ.

ಕಾಂಗ್ರೆಸ್ ಸರ್ಕಾರದ ಜನಪರ ಯೋಜನೆಗಳಾದ ‘ಗೃಹಲಕ್ಷ್ಮಿ’ ಮತ್ತು ‘ಗೃಹಜ್ಯೋತಿಯನ್ನು ಸ್ಥಗಿತಗೊಳಿಸಲಾಗುತ್ತದೆ ಎಂಬ ವಿರೋಧ ಪಕ್ಷಗಳ ಸುಳ್ಳು ಪ್ರಚಾರ ಹಾಗೂ ವದಂತಿಗಳಿಗೆ ಸಾರ್ವಜನಿಕರು ಯಾವುದೇ ಕಾರಣಕ್ಕೂ ಕಿವಿಗೊಡಬಾರದು ಎಂದು ಅವರು ಮನವಿ ಮಾಡಿದ್ದಾರೆ.

ಕೆಲವರು ಮೃತಪಟ್ಟವರ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ, ಕಾನೂನುಬಾಹಿರವಾಗಿ ಯೋಜನೆಯ ಲಾಭ ಪಡೆಯುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ವ್ಯವಸ್ಥೆಯನ್ನು ಸರಿಪಡಿಸಲು ಮರುಪರಿಶೀಲನೆ ಪ್ರಕ್ರಿಯೆಯನ್ನು ಕೈಗೊಳ್ಳಲಾಗಿದೆ.ನಿಜವಾದ ಫಲಾನುಭವಿಗಳ ಹೆಸರು, ವಿಳಾಸ ಹಾಗೂ ಬ್ಯಾಂಕ್ ಖಾತೆ ವಿವರಗಳನ್ನು ಮಾತ್ರ ಮರುಪರಿಶೀಲಿಸಲಾಗುತ್ತಿದೆ.ಇದು ಯೋಜನೆಗಳನ್ನು ನಿಲ್ಲಿಸುವ ಕ್ರಮವಲ್ಲ. ಬದಲಾಗಿ, ನಕಲಿ ಫಲಾನುಭವಿಗಳನ್ನು ತಡೆದು, ಸರ್ಕಾರದ ಸೌಲಭ್ಯಗಳು ಅರ್ಹರಿಗೆ ಸಮರ್ಪಕವಾಗಿ ತಲುಪುವಂತೆ ಮಾಡುವ ಪ್ರಾೂಮಾಣಿಕ ಪ್ರಯತ್ನವಾಗಿದೆ ಎಂದು ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now