ಬೆಂಗಳೂರು: ರಾಮನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅವರ ಆರೋಗ್ಯದಲ್ಲಿ ಏಕಾಏಕಿ ವ್ಯತ್ಯಯ ಉಂಟಾದ ಹಿನ್ನೆಲೆ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಳೆದ ಕೆಲವು ದಿನಗಳಿಂದ ಸಣ್ಣ ಪ್ರಮಾಣದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ವೈದ್ಯಕೀಯ ತಪಾಸಣೆಗೆ ಒಳಗಾದ ವೇಳೆ ಹೃದಯದ ರಕ್ತನಾಳದಲ್ಲಿ ತಡೆ (ಬ್ಲಾಕೇಜ್) ಇರುವ ಲಕ್ಷಣಗಳು ಪತ್ತೆಯಾಗಿವೆ.
ವೈದ್ಯರ ಸಲಹೆಯಂತೆ ಯಾವುದೇ ವಿಳಂಬ ಮಾಡದೆ ಅವರನ್ನು ಬೆಂಗಳೂರಿನ ವಿಠ್ಠಲ್ ಮಲ್ಯ ರಸ್ತೆಯಲ್ಲಿರುವ ಪ್ರಸಿದ್ಧ ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಸ್ತುತ ಆಸ್ಪತ್ರೆಯ ನುರಿತ ಹೃದ್ರೋಗ ತಜ್ಞರ ತಂಡವು ಶಾಸಕರ ಆರೋಗ್ಯದ ಮೇಲೆ ನಿಕಟ ನಿಗಾ ವಹಿಸಿದ್ದು, ಅಗತ್ಯ ಚಿಕಿತ್ಸೆಯನ್ನು ನೀಡುತ್ತಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











