Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಆರಂಭ: ಅರ್ಜಿ ಆಹ್ವಾನ

---Advertisement---

ಚಿತ್ರದುರ್ಗ. ಜೂನ್. 15: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ 2026-27ನೇ ಸಾಲಿನ ಉಚಿತ ವಿದ್ಯಾರ್ಥಿ ಬಸ್ ಪಾಸ್‍ಗಳ ವಿತರಣೆಗೆ ಚಾಲನೆ ನೀಡಿದ್ದು, 2026ರ ಜೂನ್ 12 ರಿಂದಲೇ ಅನ್ವಯವಾಗುವಂತೆ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್‍ಗಳನ್ನು ವಿತರಿಸಲಾಗುತ್ತಿದೆ. ಈ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ.

ಬಸ್ ಪಾಸ್ ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳು ಸೇವಾ ಸಿಂಧು ಫೋರ್ಟಲ್ https://sevasindhuservices.karnataka.gov.in/buspassservices ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ನಿಗಮದ ವ್ಯಾಪ್ತಿಯಲ್ಲಿರುವ 123 ಬಸ್ ಪಾಸ್ ವಿತರಣಾ ಕೇಂದ್ರಗಳ ಸಂಪೂರ್ಣ ವಿವರಗಳನ್ನು ವಿದ್ಯಾರ್ಥಿಗಳ ಮಾಹಿತಿಗಾಗಿ ಕೆ.ಎಸ್.ಆರ್.ಟಿ.ಸಿ ಅಧಿಕೃತ ವೆಬ್‍ಸೈಟ್‍ನಲ್ಲಿ https://ksrtc.karnataka.gov.in/student pass ಪ್ರಕಟಿಸಲಾಗಿದೆ.

ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಈಗಾಗಲೇ ವಿತರಿಸಲಾಗಿರುವ ವಿದ್ಯಾರ್ಥಿ ಬಸ್‍ಪಾಸ್‍ಗಳು ಯಥಾ ವತ್ತಾಗಿ ಚಾಲ್ತಿಯಲ್ಲಿರುತ್ತವೆ. ಆದಾಗ್ಯೂ ವಿದ್ಯಾರ್ಥಿಗಳು ಪಾವತಿಸಿರುವ ಮೊತ್ತವನ್ನು ಹಿಂದಿರುಗಿಸಲಾಗುವುದು.
ರಾಜ್ಯದಲ್ಲಿ ವಾಸವಿದ್ದು ನೆರೆರಾಜ್ಯಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಹಾಗೂ ನೆರೆರಾಜ್ಯಗಳಲ್ಲಿ (ರಾಜ್ಯದ ಗಡಿಭಾಗದಲ್ಲಿ) ವಾಸವಿದ್ದು, ರಾಜ್ಯದೊಳಗಿನ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೂ ಉಚಿತ ಬಸ್‍ಪಾಸ್ ಪಡೆಯಬಹುದಾಗಿದೆ. ಈಗಾಗಲೇ ಶೈಕ್ಷಣಿಕ ವರ್ಷ 2026-27ನೇ ಸಾಲಿನಲ್ಲಿ ಶುಲ್ಕ ಪಡೆದು ವಿತರಿಸಲಾದ ಪಾಸುಗಳ ಸಂಪೂರ್ಣ ಶುಲ್ಕವನ್ನು 15 ದಿನಗಳೊಳಗಾಗಿ ವಿದ್ಯಾರ್ಥಿಗಳಿಗೆ ಮರು ಪಾವತಿಸಲಾಗುವುದು. ಈ ಬಗ್ಗೆ ಪ್ರತ್ಯೇಕವಾಗಿ ತಿಳಿಸಲಾಗುವುದು ಎಂದು ಚಿತ್ರದುರ್ಗ ವಿಭಾಗ ಕೆಎಸ್‍ಆರ್‍ಟಿಸಿ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now