Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ವಾಟರ್ ಅಮ್ಯೂಸ್‌ಮೆಂಟ್ ಪಾರ್ಕ್ ನಿರ್ಮಿಸಿ : ಪಪ್ಪಿಸ್ ಸ್ಟಡೆಂಟ್ ವಿಂಗ್ ಮನವಿ

---Advertisement---

ಸುದ್ದಿಒನ್, ಚಿತ್ರದುರ್ಗ, ಜೂನ್ 15 : ಭದ್ರಾ ಮೇಲ್ದಂಡೆ ಯೋಜನೆ ಅಡಿ ಚಿತ್ರದುರ್ಗ ನಗರ ಸಮೀಪ ವಾಟರ್ ಅಮ್ಯೂಸ್‌ಮೆಂಟ್ ಪಾರ್ಕ್ (Water Amusement Park) ನಿರ್ಮಿಸುವಂತೆ ಪಪ್ಪಿಸ್ ಸ್ಟಡೆಂಟ್ ವಿಂಗ್ ಕಾರ್ಯಕರ್ತರು ಸೋಮವಾರ ಭದ್ರಾ ಮೇಲ್ದಂಡೆ ಯೋಜನೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕಿರಣ್ ಕುಮಾರ್.ಜಿ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಚಿತ್ರದುರ್ಗ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಪ್ರವಾಸೋದ್ಯಮ, ಮನರಂಜನೆ ಮತ್ತು ಸ್ಥಳೀಯ ಆರ್ಥಿಕ ಅಭಿವೃದ್ಧಿಯನ್ನು ಉತ್ತೇಜಿಸುವ ಉದ್ದೇಶದಿಂದ ಭದ್ರಾ ಮೇಲ್ದಂಡೆ ಯೋಜನೆ ಅಡಿ ಚಿತ್ರದುರ್ಗ ನಗರ ಸಮೀಪ ಆಧುನಿಕ ಸೌಲಭ್ಯಗಳನ್ನು ಒಳಗೊಂಡ ವಾಟರ್ ಅಮ್ಯೂಸ್‌ಮೆಂಟ್ ಪಾರ್ಕ್ ನಿರ್ಮಿಸಬೇಕು ಹಾಗೂ ಯೋಜನೆಯಿಂದ ಜಿಲ್ಲೆಯ ಯುವಜನರಿಗೆ ಉದ್ಯೋಗಾವಕಾಶಗಳು ಸೃಷ್ಟಿಯಾಗುವುದರ ಜೊತೆಗೆ ರಾಜ್ಯದ ವಿವಿಧ ಭಾಗಗಳಿಂದ ಪ್ರವಾಸಿಗರನ್ನು ಆಕರ್ಷಿಸಲು ಸಾಧ್ಯವಾಗುತ್ತದೆ. ಅಲ್ಲದೆ, ಚಿತ್ರದುರ್ಗ ಜಿಲ್ಲೆಯ ಪ್ರವಾಸೋದ್ಯಮ ಕ್ಷೇತ್ರಕ್ಕೆ ಹೊಸ ಅಯಾಮ ದೊರೆತು ಸ್ಥಳೀಯ ವ್ಯಾಪಾರ ಹಾಗೂ ಸೇವಾ ವಲಯಗಳ ಅಭಿವೃದ್ಧಿಗೂ ಸಹಕಾರಿಯಾಗಲಿದೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಯಡಿ ಸೂಕ ಜಾಗ ಗುರುತಿಸಿ, 5 ಕೋಟಿಗಳ ಅನುದಾನ ಮಂಜೂರು ಮಾಡಿ ವಾಟರ್ ಅಮ್ಯೂಸ್‌ಮೆಂಟ್ ಪಾರ್ಕ್ ನಿರ್ಮಿಸಬೇಕೆಂದು ಪಪ್ಪಿಸ್ ಸ್ಟಡೆಂಟ್ ವಿಂಗ್ ಅಧ್ಯಕ್ಷ ಚಿನ್ನು ಭದ್ರಾ ಮೇಲ್ದಂಡೆ ಯೋಜನೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕಿರಣ್ ಕುಮಾರ್.ಜಿ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಪಪ್ಪಿಸ್ ಸ್ಟುಡೆಂಟ್ ವಿಂಗ್ ಕಾರ್ಯದರ್ಶಿ ಸಲೀಂ ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now