Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯಾದ್ಯಂತ ಇಂದಿನಿಂದ ಜೂ. 22 ರವರೆಗೆ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ!

---Advertisement---

ಬೆಂಗಳೂರು.ಜೂನ್.16: ರಾಜ್ಯದಾದ್ಯಂತ ಮುಂಗಾರು ಮಳೆ ಚುರುಕುಗೊಂಡಿದ್ದು, ಜೂನ್ 16 ರಿಂದ ಜೂನ್ 22 ರವರೆಗೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಹಾಗೂ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜಧಾನಿ ಬೆಂಗಳೂರು ಸೇರಿದಂತೆ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ಮುನ್ನೆಚ್ಚರಿಕೆಯನ್ನು ನೀಡಲಾಗಿದೆ.
ಮುಂದಿನ ಕೆಲವು ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ಈ ಭಾಗಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯೂ ಇದೆ.

ರಾಜಧಾನಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಸಂಜೆ ಅಥವಾ ರಾತ್ರಿಯ ಅವಧಿಯಲ್ಲಿ ಗುಡುಗು ಸಹಿತ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಕಳೆದ ಕೆಲವು ದಿನಗಳಿಂದ ಮೋಡ ಕವಿದ ವಾತಾವರಣವಿದ್ದು, ಮುಂದಿನ ಒಂದು ವಾರ ಮಳೆ ಮುಂದುವರಿಯಲಿದೆ ಎಂದು ವರದಿಯಾಗಿದೆ.

ಬೆಳಗಾವಿ, ಧಾರವಾಡ, ಹಾವೇರಿ ಸೇರಿದಂತೆ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಾಗೂ ಮೈಸೂರು, ಮಂಡ್ಯ, ಚಾಮರಾಜನಗರ ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now