ಸುದ್ದಿಒನ್, ಚಿತ್ರದುರ್ಗ, ಜೂನ್. 16 : ಹಿರಿಯ ನಟಿ, ಮಾಜಿ ಸಚಿವೆ ಉಮಾಶ್ರೀ ಅವರಿಗೆ ಈ ಬಾರಿ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಹಂಪಿ ಹೇಮಕೂಟ ಗಾಯತ್ರಿಪೀಠ ಮಹಾಸಂಸ್ಥಾನದ ಪೀಠಾಧ್ಯಕ್ಷ ದಯಾನಂದಪುರಿ ಸ್ವಾಮೀಜಿ ಒತ್ತಾಯಿಸಿದ್ದಾರೆ.
ಕಳೆದ ಅವಧಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದಾರೆ. ರಾಜ್ಯದ ಹಿಂದುಳಿದ ವರ್ಗಗಳ, ಮಹಿಳೆಯರ, ಕಲಾವಿದರ, ವಿಕಲಚೇತನರ ಅಭಿವೃದ್ಧಿಗೆ ಸಹಕಾರ ನೀಡಿದ್ದಾರೆ. ಅಂಗನವಾಡಿ ಕೇಂದ್ರಗಳ ಬಲರ್ವಧನೆ ವಿಶೇಷ ಯೋಜನೆ ಮತ್ತು ಅನುದಾನ ನೀಡಿದ್ದು, ಇಲಾಖೆಯಲ್ಲಿ ಸಮರ್ಥವಾಗಿ ಕಾರ್ಯನಿರ್ವಹಿದ್ದಾರೆ.
ಸಚಿವರಾಗಿದ್ದ ವೇಳೆ ಇಲಾಖೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದರಿಂದ ಪ್ರಥಮ ಬಾರಿಗೆ ಎರಡು ರಾಷ್ಟ್ರ ಪ್ರಶಸ್ತಿಗಳನ್ನು ಪಡೆದುಕೊಂಡಿರುವ ಹೆಗ್ಗಳಿಕೆ ಇವರದ್ದು, ಇವೆಲ್ಲವನ್ನೂ ಪರಿಗಣಿಸಿಬೇಕು. ಹಿಂದುಳಿದ ವರ್ಗದ ನೇಕಾರ ಸಮುದಾಯದ ಯಾರೋಬ್ಬರಿಗೂ ಸಚಿವ ಸ್ಥಾನ ನೀಡಿರುವುದಿಲ್ಲ. ನೇಕಾರರ ಸಮುದಾಯಗಳು ಶೈಕ್ಷಣಿಕವಾಗಿ, ಆರ್ಥಿಕವಾಗಿ, ರಾಜಕೀಯವಾಗಿ ಸದೃಢ ಹೊಂದಲು ಈ ಬಾರಿಯ ಸಂಪುಟದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಮುಖಂಡರು ಹಾಗೂ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಿರಿಯ ನಟಿ ಉಮಾಶ್ರೀ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ದಯಾನಂದಪುರಿ ಸ್ವಾಮೀಜಿ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.








