Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸರ್ಕಾರಿ ನೌಕರರಿಗೆ ಭರ್ಜರಿ ಕೊಡುಗೆ: ಪರಿಷ್ಕೃತ CGHS ದರ ಪಟ್ಟಿಗೆ ಸಿಎಂ ಗ್ರೀನ್ ಸಿಗ್ನಲ್!

---Advertisement---

ಬೆಂಗಳೂರು.ಜೂನ್.16: ರಾಜ್ಯ ಸರ್ಕಾರಿ ನೌಕರರ ವೈದ್ಯಕೀಯ ಚಿಕಿತ್ಸೆಯ ಪರಿಷ್ಕೃತ ಸಿಜಿಎಚ್‌ ಎಸ್‌ (CGHS – Central Government Health Scheme) ದರ ಪಟ್ಟಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕೃತವಾಗಿ ಅನುಮತಿ ನೀಡಿದ್ದಾರೆ.

ರಾಜ್ಯ ಸರ್ಕಾರದ ಈ ಐತಿಹಾಸಿಕ ನಿರ್ಧಾರದಿಂದಾಗಿ, ಸರ್ಕಾರಿ ನೌಕರರ ವೈದ್ಯಕೀಯ ಸೇವೆಗಳಿಗಾಗಿ ಸರ್ಕಾರವು ಹೆಚ್ಚುವರಿಯಾಗಿ ಬರೋಬ್ಬರಿ 474 ಕೋಟಿ ರೂಪಾಯಿಗಳನ್ನು ಒದಗಿಸಿದಂತಾಗಲಿದೆ. ಪರಿಷ್ಕೃತ ದರಗಳ ಅಳವಡಿಕೆಯಿಂದಾಗಿ ನೌಕರರಿಗೆ ಇನ್ಮುಂದೆ ಅತ್ಯುತ್ತಮ ಗುಣಮಟ್ಟದ ಚಿಕಿತ್ಸಾ ಸೌಲಭ್ಯಗಳು ಲಭ್ಯವಾಗಲಿವೆ.

ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿಗಳು, ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಸದಸ್ಯರಿಗೆ ಉನ್ನತ ಗುಣಮಟ್ಟದ ಆರೋಗ್ಯ ಸೇವೆಗಳನ್ನು ತಲುಪಿಸುವುದು ಮತ್ತು ಅವರ ಸಾಮಾಜಿಕ ಭದ್ರತೆಯನ್ನು ಖಾತ್ರಿಪಡಿಸುವುದು ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಇದಕ್ಕೆ ರಾಜ್ಯ ಸರ್ಕಾರವು ಸಂಪೂರ್ಣವಾಗಿ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now