Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸರ್ಕಾರದ ಆದೇಶದ ಮೇರೆಗೆ ಪ್ಲೇ ಸ್ಟೋರ್ ನಿಂದ ಟೆಲಿಗ್ರಾಂ ಆ್ಯಪ್ ತೆಗೆದುಹಾಕಿದ ಗೂಗಲ್!

---Advertisement---

ದೆಹಲಿ.ಜೂನ್.16: ಮುಂಬರುವ ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಆದೇಶದ ಮೇರೆಗೆ ಗೂಗಲ್ ಸಂಸ್ಥೆಯು ತನ್ನ ಪ್ಲೇ ಸ್ಟೋರ್ ನಿಂದ ಜನಪ್ರಿಯ ಮೆಸೇಜಿಂಗ್ ಆ್ಯಪ್ ಆದ ಟೆಲಿಗ್ರಾಂ ಅನ್ನು ತಾತ್ಕಾಲಿಕವಾಗಿ ತೆಗೆದುಹಾಕಿದೆ. ಆಪಲ್ ಸಂಸ್ಥೆಯೂ ಸಹ ಶೀಘ್ರದಲ್ಲೇ ತನ್ನ ಆ್ಯಪ್ ಸ್ಟೋರ್ನಿಂದ ಇದನ್ನು ತೆಗೆದುಹಾಕುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಮುಂಬರುವ ನೀಟ್ ಯುಜಿ 2026 ಮರುಪರೀಕ್ಷೆಯ ಸಂದರ್ಭದಲ್ಲಿ ಯಾವುದೇ ಅಕ್ರಮ ಅಥವಾ ಪತ್ರಿಕೆ ಸೋರಿಕೆ ವದಂತಿಗಳು ಹರಡದಂತೆ ತಡೆಯಲು ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ.

ಟೆಲಿಗ್ರಾಂ ಆ್ಯಪ್ ಅನ್ನು ತಾತ್ಕಾಲಿಕವಾಗಿ ಸ್ಟೋರ್ಗಳಿಂದ ತೆಗೆದುಹಾಕುವಂತೆ ಸರ್ಕಾರವು ಗೂಗಲ್ ಮತ್ತು ಆಪಲ್ ಸಂಸ್ಥೆಗಳಿಗೆ ಸೂಚನೆ ನೀಡಿತ್ತು. ಅದರಂತೆ ಗೂಗಲ್ ಈಗಾಗಲೇ ಆ್ಯಪ್ ಅನ್ನು ಹಟಾವೋ ಮಾಡಿದ್ದು, ಆಪಲ್ ಸಂಸ್ಥೆಯೂ ಶೀಘ್ರದಲ್ಲೇ ಈ ಆದೇಶವನ್ನು ಪಾಲಿಸಲಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಪ್ರಸ್ತುತ ಗೂಗಲ್ ಪ್ಲೇ ಸ್ಟೋರ್ನಲ್ಲಿ ಟೆಲಿಗ್ರಾಂ ಆ್ಯಪ್ಗಾಗಿ ಹುಡುಕಾಡಿದರೆ, ಈ ಆ್ಯಪ್ ಲಭ್ಯವಿಲ್ಲ ಎಂಬ ಸಂದೇಶ ಕಾಣಿಸುತ್ತಿದೆ. ಈ ಕುರಿತು ಗೂಗಲ್, ಆಪಲ್ ಮತ್ತು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯಕ್ಕೆ ಕಳುಹಿಸಲಾದ ಪ್ರಶ್ನೆಗಳಿಗೆ ತಕ್ಷಣದ ಯಾವುದೇ ಪ್ರತಿಕ್ರಿಯೆ ಲಭ್ಯವಾಗಿಲ್ಲ.

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನೀಡಿದ ಶಿಫಾರಸುಗಳ ಆಧಾರದ ಮೇಲೆ, ಮಾಹಿತಿ ತಂತ್ರಜ್ಞಾನ ಕಾಯ್ದೆ 2000ರ ಸೆಕ್ಷನ್ 69A ಅಡಿಯಲ್ಲಿ ಸಚಿವಾಲಯವು ಈ ನಿರ್ದೇಶನವನ್ನು ನೀಡಿದೆ. ಜೂನ್ 22, 2026 ರವರೆಗೆ ಅನ್ವಯವಾಗುವಂತೆ ಭಾರತದಲ್ಲಿ ಟೆಲಿಗ್ರಾಂ ಬಳಕೆಯನ್ನು ನಿರ್ಬಂಧಿಸಲಾಗಿದೆ. ಈ ಅವಧಿಯು ನೀಟ್ ಮರುಪರೀಕ್ಷೆ ಮತ್ತು ಅದರ ನಂತರದ ದಿನಗಳನ್ನು ಒಳಗೊಂಡಿರುತ್ತದೆ.

ಇಷ್ಟೇ ಅಲ್ಲದೆ, ಜೂನ್ 30ರವರೆಗೆ ಭಾರತದಲ್ಲಿ ಈಗಾಗಲೇ ಪೋಸ್ಟ್ ಮಾಡಲಾದ ಸಂದೇಶಗಳನ್ನು ಎಡಿಟ್ ಮಾಡುವ ವೈಶಿಷ್ಟ್ಯವನ್ನು ನಿಷ್ಕ್ರಿಯಗೊಳಿಸುವಂತೆ ಟೆಲಿಗ್ರಾಂಗೆ ಪ್ರತ್ಯೇಕ ಆದೇಶ ನೀಡಲಾಗಿದೆ. ರಾಷ್ಟ್ರೀಯ ಪರೀಕ್ಷೆಗಳು ಮುಗಿದ ನಂತರ, ಟೆಲಿಗ್ರಾಂನ ಈ ಎಡಿಟಿಂಗ್ ಫೀಚರ್ ಬಳಸಿ ಹಳೆಯ ಸಂದೇಶಗಳನ್ನು ಬದಲಾಯಿಸಿ ಪ್ರಶ್ನೆಪತ್ರಿಕೆ ಮುಂಚಿತವಾಗಿಯೇ ಸೋರಿಕೆಯಾಗಿದೆ ಎಂಬ ಸುಳ್ಳು ಪುರಾವೆಗಳನ್ನು ಸೃಷ್ಟಿಸಲಾಗುತ್ತಿತ್ತು. ಇದನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಎನ್ಟಿಎ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now