Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ : ಚುನಾವಣಾ ಕರ್ತವ್ಯ ಲೋಪದಡಿ ಶಿಕ್ಷಕಿ ಅಮಾನತು

---Advertisement---

ಸುದ್ದಿಒನ್, ಚಿತ್ರದುರ್ಗ. ಜೂನ್16: ಚುನಾವಣಾ ಕರ್ತವ್ಯದಲ್ಲಿ ತೀವ್ರ ನಿರ್ಲಕ್ಷ್ಯ, ಉದಾಸೀನತೆ ಹಾಗೂ ಬೇಜವಾಬ್ದಾರಿತನ ತೋರಿದ ಹಿನ್ನೆಲೆಯಲ್ಲಿ ಹಿರಿಯೂರು ತಾಲ್ಲೂಕಿನ ಬೀರೇನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕಿ ಕೆ.ಶಿವಲೀಲಾ ಅವರನ್ನು ಸರ್ಕಾರಿ ಸೇವೆಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ಅವರು ಆದೇಶ ಹೊರಡಿಸಿದ್ದಾರೆ.

 

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 2026ರ ಜೂನ್ 20 ರಿಂದ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ಆರಂಭವಾಗಲಿದ್ದು, ಖಾಲಿ ಇರುವ ಬಿ.ಎಲ್.ಓ ಹುದ್ದೆಗಳನ್ನು ಭರ್ತಿ ಮಾಡಲು ಆದೇಶಿಸಲಾಗಿತ್ತು. ನಂ. 100 ಹಿರಿಯೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಶಿವಲೀಲಾ ಅವರನ್ನು ಬಿ.ಎಲ್.ಓ ಕರ್ತವ್ಯಕ್ಕೆ ನೇಮಿಸಿ ಆದೇಶ ಹೊರಡಿಸಲಾಗಿತ್ತು. ಆದರೆ, ಈ ಆದೇಶವನ್ನು ಸ್ವೀಕರಿಸಲು ನಿರಾಕರಿಸಿದ ಶಿಕ್ಷಕಿ, ಲಾಗಿನ್ ಐಡಿ ಕ್ರಿಯೇಟ್ ಮಾಡಲು ಅಗತ್ಯವಿರುವ ದಾಖಲೆಗಳನ್ನು ನೀಡದೆ ಅಸಹಕಾರ ತೋರಿದ್ದರು.
ಈ ಸಂಬಂಧ ಹಿರಿಯೂರು ತಹಶೀಲ್ದಾರರು ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದರೂ, ಶಿಕ್ಷಕಿ ಯಾವುದೇ ಲಿಖಿತ ಉತ್ತರ ನೀಡಿರುವುದಿಲ್ಲ. ಇದರಿಂದಾಗಿ ಚುನಾವಣಾ ಆಯೋಗದ ಮಹತ್ವದ ಕಾರ್ಯದ ಪ್ರಗತಿಗೆ ಅಡ್ಡಿಯುಂಟಾಗಿತ್ತು. ಈ ಹಿನ್ನೆಲೆಯಲ್ಲಿ ಮತದಾರರ ನೋಂದಣಾಧಿಕಾರಿಗಳು ನೀಡಿದ ವರದಿಯನ್ನಾಧರಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ಈ ಕ್ರಮ ಕೈಗೊಂಡಿದ್ದಾರೆ.

 

ಪ್ರಜಾಪ್ರಾತಿನಿಧ್ಯ ಕಾಯ್ದೆ 1951ರ ಸೆಕ್ಷನ್ 134 ಹಾಗೂ ಕರ್ನಾಟಕ ನಾಗರಿಕ ಸೇವಾ ನಿಯಮಗಳು 1957ರ ನಿಯಮ 10(2)(8) ರ ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ.
ಅಮಾನತು ಅವಧಿಯಲ್ಲಿ ನೌಕರರು ಸಕ್ಷಮ ಪ್ರಾಧಿಕಾರದ ಅನುಮತಿ ಇಲ್ಲದೆ ಕೇಂದ್ರ ಸ್ಥಾನ ಬಿಡುವಂತಿಲ್ಲ ಹಾಗೂ ಕೆ.ಸಿ.ಎಸ್ ನಿಯಮ 98ರ ಅನ್ವಯ ನಿಲಂಬನಾ ಭತ್ಯೆ ಪಡೆಯಲು ಅರ್ಹರಿರುತ್ತಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ಆದೇಶ ಹೊರಡಿಸಿದ್ದಾರೆ.
============

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now