Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರೈತರಿಗೆ ಶುಭಸುದ್ದಿ; ಜೂನ್ 20ಕ್ಕೆ ಪಿಎಂ ಕಿಸಾನ್ ಯೋಜನೆಯ 23ನೇ ಕಂತು ಬಿಡುಗಡೆ ಸಾಧ್ಯತೆ!

---Advertisement---

ದೆಹಲಿ.ಜೂನ್.17: ದೇಶದ ಕೋಟ್ಯಂತರ ರೈತರಿಗೆ ಕೇಂದ್ರ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-Kisan) ಯೋಜನೆಯ ಬಹುನಿರೀಕ್ಷಿತ 23ನೇ ಕಂತಿನ ಹಣ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಬರುವ ಜೂನ್ 20, 2026 ರಂದು ಪ್ರಧಾನಿ ನರೇಂದ್ರ ಮೋದಿ ಅವರು ರೈತರ ಖಾತೆಗಳಿಗೆ ನೇರವಾಗಿ ಹಣವನ್ನು ವರ್ಗಾಯಿಸುವ ಸಾಧ್ಯತೆ ಇದೆ.

ಕೇಂದ್ರ ಕೃಷಿ ಸಚಿವಾಲಯದ ಅಪ್ಡೇಟ್ ಪ್ರಕಾರ, ಈ ಕಂತಿನ ಅಡಿಯಲ್ಲಿ ಅರ್ಹ ರೈತ ಕುಟುಂಬಗಳ ಬ್ಯಾಂಕ್ ಖಾತೆಗಳಿಗೆ ತಲಾ 2,000 ರೂಪಾಯಿಗಳನ್ನು ಜಮೆ ಮಾಡಲಾಗುತ್ತದೆ.ಯೋಜನೆಯ ಲಾಭ ಪಡೆಯಲು ರೈತರು ತಕ್ಷಣವೇ ತಮ್ಮ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕೆಂದು ಸರ್ಕಾರ ಸೂಚಿಸಿದೆ. ಒಂದು ವೇಳೆ ಇ-ಕೆವೈಸಿ ಬಾಕಿ ಇದ್ದರೆ ಅಥವಾ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗದಿದ್ದರೆ ನಿಮ್ಮ 23ನೇ ಕಂತಿನ ಹಣ ಸ್ಥಗಿತಗೊಳ್ಳುವ ಸಾಧ್ಯತೆ ಇರುತ್ತದೆ.

ನಿಮ್ಮ ಖಾತೆಯ ಸ್ಟೇಟಸ್ನಲ್ಲಿ “Withheld” (ತಡೆಹಿಡಿಯಲಾಗಿದೆ) ಅಥವಾ “Under Verification” (ಪರಿಶೀಲನೆಯಲ್ಲಿದೆ) ಎಂದು ತೋರಿಸುತ್ತಿದ್ದರೆ, ತಕ್ಷಣವೇ ಸ್ಥಳೀಯ ಕೃಷಿ ಇಲಾಖೆ ಅಥವಾ ಸಿಎಸ್ಸಿ (CSC) ಕೇಂದ್ರವನ್ನು ಸಂಪರ್ಕಿಸಿ ದಾಖಲೆಗಳನ್ನು ಸರಿಪಡಿಸಿಕೊಳ್ಳಿ.
ನಿಮ್ಮ ಖಾತೆಗೆ ಹಣ ಬರುತ್ತದೆಯೇ ಇಲ್ಲವೇ ಎಂಬುದನ್ನು ತಿಳಿಯಲು ಈ ಕೆಳಗಿನ ಹಂತಗಳನ್ನು ಅನುಸರಿಸಿ:

ಪಿಎಂ ಕಿಸಾನ್ ಅಧಿಕೃತ ವೆಬ್ಸೈಟ್ಗೆ (pmkisan.gov.in) ಭೇಟಿ ನೀಡಿ.

ಅಲ್ಲಿ ಕಾಣಿಸುವ ‘Know Your Status’ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.

ನಿಮ್ಮ ರಿಜಿಸ್ಟ್ರೇಷನ್ ನಂಬರ್ (Registration Number) ಮತ್ತು ಕ್ಯಾಪ್ಚಾ ಕೋಡ್ ನಮೂದಿಸಿ.

ಒಟಿಪಿ (OTP) ಪರಿಶೀಲನೆಯ ನಂತರ ನಿಮ್ಮ ಸಂಪೂರ್ಣ ವಿವರ ಪರದೆಯ ಮೇಲೆ ಕಾಣಿಸುತ್ತದೆ.

ಕಳೆದ ಮಾರ್ಚ್ 13, 2026 ರಂದು ಪ್ರಧಾನಿ ಮೋದಿ ಅವರು ಅಸ್ಸಾಂನ ಗುವಾಹಟಿಯಿಂದ 22ನೇ ಕಂತಿನ ಹಣವನ್ನು ಬಿಡುಗಡೆ ಮಾಡಿದ್ದರು. ಈಗ ಕೇವಲ ಮೂರು ತಿಂಗಳ ಅವಧಿಯಲ್ಲೇ 23ನೇ ಕಂತು ಬಿಡುಗಡೆಯಾಗುತ್ತಿರುವುದರಿಂದ ರೈತರ ಮುಂಗಾರು ಕೃಷಿ ಚಟುವಟಿಕೆಗಳಿಗೆ ಇದು ಸಹಕಾರಿಯಾಗಲಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now