Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪಿಎಂ ಕಿಸಾನ್ 23ನೇ ಕಂತು ಜೂನ್ 20ಕ್ಕೆ ಬಿಡುಗಡೆ: 9.44 ಕೋಟಿ ರೈತರ ಖಾತೆಗೆ ₹18,880 ಕೋಟಿ ಜಮಾ

---Advertisement---

ದೇಶದ ಕೋಟ್ಯಂತರ ರೈತರು ನಿರೀಕ್ಷಿಸುತ್ತಿರುವ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯ 23ನೇ ಕಂತಿನ ಹಣ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಮುಂಗಾರು ಹಂಗಾಮಿನ ಮಧ್ಯೆ ರೈತರಿಗೆ ಆರ್ಥಿಕ ನೆರವಾಗುವ ಈ ಯೋಜನೆಯಡಿ ಜೂನ್ 20ರಂದು ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ತಲಾ ₹2,000 ಜಮಾ ಆಗಲಿದೆ.ಪಿಎಂ ಕಿಸಾನ್ ಯೋಜನೆಯಡಿ ರೈತರಿಗೆ ವಾರ್ಷಿಕ ₹6,000 ನೆರವು ನೀಡಲಾಗುತ್ತಿದ್ದು, ಪ್ರತಿ ನಾಲ್ಕು ತಿಂಗಳಿಗೊಮ್ಮೆ ₹2,000ರಂತೆ ಮೂರು ಕಂತುಗಳಲ್ಲಿ ಹಣವನ್ನು ನೇರವಾಗಿ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗುತ್ತದೆ. ಇದುವರೆಗೆ 22 ಕಂತುಗಳನ್ನು ಯಶಸ್ವಿಯಾಗಿ ವಿತರಿಸಲಾಗಿದ್ದು, ಕಳೆದ ಮಾರ್ಚ್ 13ರಂದು 22ನೇ ಕಂತಿನ ಹಣ ಬಿಡುಗಡೆ ಮಾಡಲಾಗಿತ್ತು.

ಈ ಬಾರಿ 23ನೇ ಕಂತಿನ ಹಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 20ರಂದು ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ತಾರಕೇಶ್ವರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಲಿದ್ದಾರೆ. ಮಧ್ಯಾಹ್ನ 3.45ಕ್ಕೆ ಡಿಬಿಟಿ (Direct Benefit Transfer) ಮೂಲಕ ಹಣ ನೇರವಾಗಿ ರೈತರ ಖಾತೆಗಳಿಗೆ ಜಮಾ ಆಗಲಿದೆ.ದೇಶದ 9.44 ಕೋಟಿಗೂ ಹೆಚ್ಚು ಅರ್ಹ ರೈತರಿಗೆ ಒಟ್ಟು ₹18,880 ಕೋಟಿಗೂ ಅಧಿಕ ಮೊತ್ತವನ್ನು ಈ ಕಂತಿನ ಮೂಲಕ ವರ್ಗಾಯಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಾವತಿ ಸ್ಥಿತಿ ಪರಿಶೀಲಿಸುವುದು ಹೇಗೆ?
ರೈತರು ತಮ್ಮ ಪಾವತಿ ಸ್ಥಿತಿಯನ್ನು ಪರಿಶೀಲಿಸಲು PM-KISAN ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, ‘Farmers Corner’ ವಿಭಾಗದಲ್ಲಿರುವ ‘Beneficiary List’ ಆಯ್ಕೆಯನ್ನು ಕ್ಲಿಕ್ ಮಾಡಿ ಅಗತ್ಯ ಮಾಹಿತಿಯನ್ನು ನಮೂದಿಸಿ ಪರಿಶೀಲಿಸಬಹುದು.

ಈ ದಾಖಲೆಗಳು ಕಡ್ಡಾಯ
ಯೋಜನೆಯ ಹಣ ಪಡೆಯಲು ಇ-ಕೆವೈಸಿ (e-KYC) ಪೂರ್ಣಗೊಳಿಸಿರುವುದು ಅಗತ್ಯ. ಜೊತೆಗೆ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿರಬೇಕು. ಸರ್ಕಾರ ಕಡ್ಡಾಯಗೊಳಿಸಿರುವ ‘ಅಗ್ರಿಸ್ಟಾಕ್’ (AgriStack) ನೋಂದಣಿಯನ್ನೂ ಪೂರ್ಣಗೊಳಿಸಬೇಕಿದೆ. ಈ ಪ್ರಕ್ರಿಯೆಗಳು ಪೂರ್ಣಗೊಂಡಿದ್ದರೆ ಮಾತ್ರ ಹಣ ನಿರ್ವಿಘ್ನವಾಗಿ ಖಾತೆಗೆ ಜಮಾ ಆಗಲಿದೆ.

ಸಹಾಯವಾಣಿ
ಯೋಜನೆಗೆ ಸಂಬಂಧಿಸಿದ ಯಾವುದೇ ಮಾಹಿತಿ ಅಥವಾ ಸಮಸ್ಯೆಗಳಿಗಾಗಿ ರೈತರು ಸಹಾಯವಾಣಿ ಸಂಖ್ಯೆ 1800-115-5525 ಸಂಪರ್ಕಿಸಬಹುದಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now