Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಟೆಲಿಗ್ರಾಂ ಭಯೋತ್ಪಾದನೆ, ಸೈಬರ್ ಅಪರಾಧ, ಮಾದಕ ದ್ರವ್ಯ ದಂಧೆಗೆ ದುರ್ಬಳಕೆ ಆಗುತ್ತಿದೆ; ಹೈಕೋರ್ಟ್ ಗೆ ಕೇಂದ್ರ ಸರ್ಕಾರ ಮಾಹಿತಿ

---Advertisement---

ದೆಹಲಿ.ಜೂನ್.18: ಟೆಲಿಗ್ರಾಂ ಆ್ಯಪ್ ಉಗ್ರವಾದ, ಸೈಬರ್ ಅಪರಾಧ, ಮಾದಕ ದ್ರವ್ಯ ಸಾಗಾಟ, ಮಕ್ಕಳ ಲೈಂಗಿಕ ಶೋಷಣೆ ಮತ್ತು ಆರ್ಥಿಕ ವಂಚನೆ ಸೇರಿದಂತೆ ಹಲವು ಕಾನೂನುಬಾಹಿರ ಚಟುವಟಿಕೆಗಳಿಗೆ ಪ್ರಮುಖ ವೇದಿಕೆಯಾಗಿದೆ ಎಂದು ಕೇಂದ್ರ ಸರ್ಕಾರ ದೆಹಲಿ ಹೈಕೋರ್ಟ್ ಗೆ ತಿಳಿಸಿದೆ. ಅಷ್ಟೇ ಅಲ್ಲದೆ, ಅಪರಾಧಿಗಳು ಕಾನೂನು ಜಾರಿ ಸಂಸ್ಥೆಗಳ ಕಣ್ಣಿಗೆ ಬೀಳದಂತೆ ತಪ್ಪಿಸಿಕೊಳ್ಳಲು ಈ ಆ್ಯಪ್ ಅನ್ನು ಹೊಸ ಡಾರ್ಕ್ ವೆಬ್ ನಂತೆ ಬಳಸಿಕೊಳ್ಳುತ್ತಿದ್ದಾರೆ ಎಂದು ಸರ್ಕಾರ ಕಳವಳ ವ್ಯಕ್ತಪಡಿಸಿದೆ.

ಜೂನ್ 21 ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಯ ಹಿನ್ನೆಲೆಯಲ್ಲಿ, ಭಾರತದಲ್ಲಿ ಟೆಲಿಗ್ರಾಂ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲು ಕೇಂದ್ರ ಸರ್ಕಾರ ನಿರ್ಧರಿಸಿತ್ತು. ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಟೆಲಿಗ್ರಾಂ ಸಂಸ್ಥೆ ಹೈಕೋರ್ಟ್ ಮೆಟ್ಟಿಲೇರಿದ್ದು, ಈ ಕಾನೂನು ಹೋರಾಟದ ನಡುವೆಯೇ ಸರ್ಕಾರ ಈ ಗಂಭೀರ ಆಕ್ಷೇಪಣೆಗಳನ್ನು ಕೋರ್ಟ್ ಮುಂದೆ ಇಟ್ಟಿದೆ.

ಟೆಲಿಗ್ರಾಂ ಚಾನೆಲ್ಗಳ ಮೂಲಕ ಅಪರಾಧಿಗಳು ಬಳಕೆದಾರರನ್ನು ಡಾರ್ಕ್ ವೆಬ್ ಫೋರಮ್ ಗಳು ಮತ್ತು ಡೀಪ್ ವೆಬ್ ನೆಟ್ ವರ್ಕ್ಗಳಿಗೆ ಲಿಂಕ್ ಮಾಡುತ್ತಿದ್ದಾರೆ. ಇದರಿಂದಾಗಿ ಅಪರಾಧಿಗಳ ಗುರುತು ಪತ್ತೆ ಹಚ್ಚುವುದು ಮತ್ತು ಅವರ ಕಾನೂನುಬಾಹಿರ ಚಟುವಟಿಕೆಗಳನ್ನು ಪತ್ತೆ ಮಾಡುವುದು ಅಧಿಕಾರಿಗಳಿಗೆ ಅತ್ಯಂತ ಕಷ್ಟಕರವಾಗಿದೆ ಎಂದು ಕೇಂದ್ರ ಸರ್ಕಾರ ಸಲ್ಲಿಕೆಯಲ್ಲಿ ತಿಳಿಸಿದೆ.

ಭಯೋತ್ಪಾದಕ ಸಂಘಟನೆಗಳೊಂದಿಗೆ ನಂಟು ಹೊಂದಿರುವ ಕೆಲವು ಗುಂಪುಗಳು ಸಾರ್ವಜನಿಕ ಶಾಂತಿಯನ್ನು ಕದಡುವ ಮತ್ತು ತಪ್ಪು ಮಾಹಿತಿ ಹರಡುವ ಉದ್ದೇಶದಿಂದ ಟೆಲಿಗ್ರಾಂ ಚಾನೆಲ್ಗಳಲ್ಲಿ ಹಿಂಸಾತ್ಮಕ ಪ್ರಚಾರ ಮತ್ತು ಉಗ್ರಗಾಮಿ ವಿಷಯಗಳನ್ನು ಹಂಚಿಕೊಳ್ಳುತ್ತಿವೆ ಎಂದು ಸರ್ಕಾರ ಧ್ವನಿ ಎತ್ತಿದೆ.

ಕಾನೂನುಬಾಹಿರವಾಗಿ ಮಕ್ಕಳ ಲೈಂಗಿಕ ಶೋಷಣೆಯ ದೃಶ್ಯಗಳನ್ನು (CSEAM) ಟೆಲಿಗ್ರಾಂ ಗ್ರೂಪ್ ಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಇದರೊಂದಿಗೆ, ಪೈರಸಿ ಮಾಡಲಾದ ಚಲನಚಿತ್ರಗಳು, ವೆಬ್ ಸರಣಿಗಳು ಮತ್ತು ಹಕ್ಕುಸ್ವಾಮ್ಯ ಹೊಂದಿರುವ ಕಂಟೆಂಟ್ ಗಳನ್ನು ದೊಡ್ಡ ಮಟ್ಟದಲ್ಲಿ ವಿತರಿಸಲಾಗುತ್ತಿದ್ದು, ಇದರಿಂದ ಭಾರಿ ಆದಾಯ ನಷ್ಟ ಮತ್ತು ಬೌದ್ಧಿಕ ಆಸ್ತಿ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂದು ಕೇಂದ್ರ ಹೇಳಿದೆ.

ಸೈಬರ್ ಅಪರಾಧಿಗಳು ನಕಲಿ ಗುರುತಿನ ಚೀಟಿಗಳನ್ನು ಬಳಸಿ ಖಾತೆಗಳನ್ನು ತೆರೆಯುತ್ತಿದ್ದಾರೆ. ಈ ಮೂಲಕ ಈ ಹಿಂದೆ ಸೋರಿಕೆಯಾಗಿರುವ ಮೊಬೈಲ್ ಸಂಖ್ಯೆಗಳು ಹಾಗೂ ವೈಯಕ್ತಿಕ ವಿವರಗಳನ್ನು ಹಂಚಿಕೊಳ್ಳಲು ಟೆಲಿಗ್ರಾಂ ಬಾಟ್ ಗಳನ್ನು (Bots) ಬಳಸಲಾಗುತ್ತಿದೆ. ಅಲ್ಲದೆ, ಭಾರತದ ಬ್ಯಾಂಕಿಂಗ್ ವ್ಯವಸ್ಥೆ, ಯುಪಿಐ (UPI) ಮತ್ತು ಕ್ರಿಪ್ಟೋಕರೆನ್ಸಿ ವೇದಿಕೆಗಳನ್ನು ದುರ್ಬಳಕೆ ಮಾಡಿಕೊಂಡು ಅಕ್ರಮ ಹಣ ವರ್ಗಾವಣೆ (Money Laundering) ಮಾಡಲಾಗುತ್ತಿದೆ ಎಂದು ಸರ್ಕಾರ ಕೋರ್ಟ್ ಗೆ ವಿವರಿಸಿದೆ.

ನೀಟ್-ಯುಜಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಅಥವಾ ಯಾವುದೇ ರೀತಿಯ ದುರುಪಯೋಗವನ್ನು ತಡೆಗಟ್ಟಲು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಶಿಫಾರಸಿನ ಮೇರೆಗೆ ಕೇಂದ್ರ ಸರ್ಕಾರವು ಜೂನ್ 22 ರವರೆಗೆ ಟೆಲಿಗ್ರಾಂ ಅನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿದೆ. ಜೊತೆಗೆ, ಟೆಲಿಗ್ರಾಂನಲ್ಲಿರುವ ‘ಮೆಸೇಜ್ ಎಡಿಟಿಂಗ್’ ವೈಶಿಷ್ಟ್ಯವನ್ನು ಜೂನ್ 30 ರವರೆಗೆ ಭಾರತದಲ್ಲಿ ಸ್ಥಗಿತಗೊಳಿಸುವಂತೆ ಸೂಚಿಸಲಾಗಿದೆ. ಈ ಹಿಂದೆ ಹಳೆಯ ಸಂದೇಶಗಳನ್ನು ಎಡಿಟ್ ಮಾಡಿ, ಸಮಯವನ್ನು ಬದಲಾಯಿಸದೆ ಹೊಸ ಫೈಲ್ ಗಳನ್ನು ಅಟ್ಯಾಚ್ ಮಾಡುವ ಮೂಲಕ “ಪೇಪರ್ ಲೀಕ್” ಆದಂತೆ ನಕಲಿ ಪುರಾವೆಗಳನ್ನು ಸೃಷ್ಟಿಸಲು ಈ ಫೀಚರ್ ಅನ್ನು ದುರುಪಯೋಗಪಡಿಸಿಕೊಳ್ಳಲಾಗಿತ್ತು ಎಂದು ಎನ್ ಟಿಎ ತಿಳಿಸಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now