Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ವಿದ್ಯುತ್ ಕಂಪನಿಗಳ ಖಾಸಗಿಕರಣ ವಿರೋಧಿಸಿ ಪ್ರತಿಭಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜೂನ್‌. 18 : ವಿದ್ಯುತ್ ಕಂಪನಿಗಳ ಖಾಸಗಿಕರಣಗೊಳಿಸುವುದನ್ನು ವಿರೋಧಿಸಿ ಬೆಸ್ಕಾಂ ಮತ್ತು ಕೆಪಿಟಿಸಿಎಲ್ ಅಧಿಕಾರಿಗಳು ಹಾಗೂ ನೌಕರರು ತಿಪ್ಪಜ್ಜಿ ಸರ್ಕಲ್‍ನಲ್ಲಿರುವ ಬೆಸ್ಕಾಂ ವಿಭಾಗೀಯ ಕಚೇರಿ ಎದುರು ಇತ್ತೀಚೆಗೆ ಪ್ರತಿಭಟನೆ ನಡೆಸಿದರು.

ಟಾಟಾ ಪವರ್ ಕಂಪನಿ ಪರ್ಯಾಯ ವಿದ್ಯುತ್ ವಿತರಣಾ ಪರವಾನಗಿಗೆ ಕೆಇಆರ್‍ಸಿಗೆ 19 ಜಿಲ್ಲೆಗಳಿಗೆ ಅರ್ಜಿ ಸಲ್ಲಿಸಿದ್ದು, ಅದರಲ್ಲಿ ಚಿತ್ರದುರ್ಗ ಜಿಲ್ಲೆ ಕೂಡ ಸೇರಿದೆ.
ಇದರ ವಿರುದ್ದ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ, ಎಂಜಿನಿಯರ್ಸ್ ಅಸೋಸಿಯೇಷನ್, ಎಸ್.ಸಿ. ಎಸ್.ಟಿ. ಕಲ್ಯಾಣ ಸಂಸ್ಥೆ, ಸೇರಿದಂತೆ ವಿವಿಧ ಸಂಘಟನೆಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡು ವಿದ್ಯುತ್ ಖಾಸಗಿಕರಣವನ್ನು ಸಂಪೂರ್ಣವಾಗಿ ವಿರೋಧಿಸಿದವು.
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘದ ಉಪಾಧ್ಯಕ್ಷ ಕೆ.ಪಿ.ಬಸವರಾಜ್ ಮಾತನಾಡಿ ವಿದ್ಯುತ್ ಕ್ಷೇತ್ರವನ್ನು ಖಾಸಗಿಕರಣಗೊಳಿಸುವುದರಿಂದ ರೈತರು, ಸಾರ್ವಜನಿಕರು, ನೌಕರರು ಹಾಗು ಗ್ರಾಹಕರ ಹಿತಾಸಕ್ತಿಗೆ ಧಕ್ಕೆಯಾಗುವ ಸಾಧ್ಯತೆಯಿದೆ. ರಾಜ್ಯ ಸರ್ಕಾರ ಜಾರಿಗೊಳಿಸಿರುವ ಗೃಹಜ್ಯೋತಿ, ಗಂಗಾ ಕಲ್ಯಾಣ ಹಾಗೂ
ಕುಟೀರ ಜ್ಯೋತಿ ಇನ್ನು ಮುಂತಾದ ಉಚಿತ ವಿದ್ಯುತ್ ಯೋಜನೆಗಳ ಮೇಲೆ ಪರಿಣಾಮ ಬೀರಲಿದೆ. ಸರ್ಕಾರದ ಅಧೀನದಲ್ಲಿರುವ ವಿದ್ಯುತ್ ವಿತರಣಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಬದಲು ಖಾಸಗಿ ಕಂಪನಿಗಳಿಗೆ ಪರ್ಯಾಯ ವಿತರಣಾ ಪರವಾನಗಿ ನೀಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು?

 

ಕೆಇಆರ್‍ಸಿಗೆ. ಜೂ.23, 2026 ರವರೆಗೆ ಸಲ್ಲಿಸಬೇಕಾದ ಆಕ್ಷೇಪಣಾ ಪತ್ರಗಳ ಕುರಿತು ನೌಕರರು ಹಾಗೂ ಸಾರ್ವಜನಿಕರಿಗೆ ಮಾಹಿತಿ ನೀಡಿ ಟಾಟಾ ಪವರ್ ಕಂಪನಿ ಸಲ್ಲಿಸಿರುವ ಪರ್ಯಾಯ ವಿತರಣಾ ಪರವಾನಗಿ ಅರ್ಜಿಯನ್ನು ತಿರಸ್ಕರಿಸುವಂತೆ ಹೆಚ್ಚಿನ ಸಂಖ್ಯೆಯಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸಲು ಕರೆ ನೀಡಲಾಯಿತು.

 

ಕೆಇಬಿ. ಸಂಘದ ಸಹಾಯಕ ಕಾರ್ಯದರ್ಶಿ ಹರೀಶ್ ಬಿ, ಕೇಂದ್ರ ಸಮಿತಿ ಸದಸ್ಯ ರವಿ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ಸ್ಥಳೀಯ ಸಮಿತಿ ಅಧ್ಯಕ್ಷ ತಿಪ್ಪೇಸ್ವಾಮಿ ಬಿ, ಕಾರ್ಯದರ್ಶಿ ಎಸ್.ಮಹೇಶ್, ಉಪಾಧ್ಯಕ್ಷ ಆರ್.ರವಿಕುಮಾರ್, ಎಕ್ಬಾಲ್, ಎಸ್ಸಿ. ಎಸ್ಟಿ. ನೌಕರರ ಸಂಘದ ರಮೇಶ್, ಪರಮೇಶ್, ಉಮೇಶ್, ಗುತ್ತಿಗೆದಾರರ ಸಂಘದ ಬಾಬು ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

 

ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ತಿಮ್ಮಣ್ಣ, ಸುಧಾಮಣಿ ಸೇರಿದಂತೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಮತ್ತು ಬೆಸ್ಕಾಂ ಸಹಾಯಕ ಇಂಜಿನಿಯರ್‍ಗಳು, ಅಧಿಕಾರಿಗಳು, ನೌಕರರು ಹಾಗು ಗುತ್ತಿಗೆದಾರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now