Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಾಳಘಟ್ಟ ಲಂಬಾಣಿಹಟ್ಟಿಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ: ಗ್ರಾಮಸ್ಥರ ಆಕ್ರೋಶ

---Advertisement---

ಸುದ್ದಿಒನ್,​ಹೊಳಲ್ಕೆರೆ,ಜೂನ್.18: ತಾಲ್ಲೂಕಿನ ಮುತ್ತುಗದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಳಘಟ್ಟ ಲಂಬಾಣಿಹಟ್ಟಿ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ತೀವ್ರ ಹಾಹಾಕಾರ ಉಂಟಾಗಿದೆ.

​ಈ ಊರಿನಲ್ಲಿ 110 ಮನೆಗಳಿದ್ದು, ಕುಡಿಯುವ ನೀರಿಗಾಗಿ ಕೆಲಸ ಕಾರ್ಯ ಬಿಟ್ಟು ಬೆಳಿಗ್ಗೆ 5 ಗಂಟೆಗೆ ಬಂದು ಸರತಿ ಸಾಲಿನಲ್ಲಿ ನಿಲ್ಲಬೇಕು. ಪಿಡಿಒ ಅವರಿಗೆ ಸಮಸ್ಯೆ ಬಗ್ಗೆ ಮನವರಿಕೆ ಮಾಡಿಕೊಟ್ಟರು ಅವರು ಇತ್ತ ಗಮನ ಹರಿಸುತ್ತಿಲ್ಲ. ಸೂಳೆಕೆರೆ ನೀರಿನ ಪೈಪ್‌ಲೈನ್‌ ಇದ್ದರೂ ಸಂಪರ್ಕ ಇಲ್ಲ. ಜಿಲ್ಲಾಧಿಕಾರಿ ಬಂದು ಹೋದರು ಯಾವುದೇ ಪ್ರಯೋಜನವಾಗಲಿಲ್ಲ. ನೀರಿಗಾಗಿ ಎರಡೆರಡು ದಿನ ಕಾಯಬೇಕು. ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವ ಬಗ್ಗೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.

​ಚುನಾವಣಾ ಸಂದರ್ಭದಲ್ಲಿ ಮಾತ್ರ ಮತ ಕೇಳಲು ಬರುವ ಜನಪ್ರತಿನಿಧಿಗಳು, ಚುನಾವಣೆ ಮುಗಿದ ನಂತರ ನಮ್ಮ ಕಷ್ಟ ಕೇಳಲು ಇತ್ತ ಸುಳಿಯುತ್ತಿಲ್ಲ ಎಂದು ಗ್ರಾಮದ ನಿವಾಸಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

​ಇನ್ನಾದರೂ ಸಂಬಂಧಪಟ್ಟ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ತಕ್ಷಣವೇ ಎಚ್ಚೆತ್ತುಕೊಂಡು, ಗ್ರಾಮಕ್ಕೆ ಭೇಟಿ ನೀಡಿ ಕುಡಿಯುವ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ಬಗೆಹರಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now