Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ (ಪಿಎಂ-ವಿಬಿಆರ್‌ವೈ) ಜಾರಿ : ಉದ್ಯೋಗಿ ಹಾಗೂ ಉದ್ಯೋಗದಾತರಿಗೆ ಹೆಚ್ಚಿನ ಪ್ರೋತ್ಸಾಹ 

---Advertisement---

ಚಿತ್ರದುರ್ಗ : ಜೂ.18: ದೇಶದಲ್ಲಿ ಉದ್ಯೋಗ ಸೃಷ್ಟಿಯನ್ನು ಉತ್ತೇಜಿಸಲು, ಉದ್ಯೋಗದ ಸಾಮರ್ಥ್ಯವನ್ನು ಹೆಚ್ಚಿಸಲು ಮತ್ತು ಸಾಮಾಜಿಕ ಭದ್ರತೆಯ ವ್ಯಾಪ್ತಿಯನ್ನು ವಿಸ್ತರಿಸುವ ಮಹತ್ತರ ಉದ್ದೇಶದೊಂದಿಗೆ ಭಾರತ ಸರ್ಕಾರ “ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ”  (PMVBRY)  ಜಾರಿಗೆ ತಂದಿದೆ.

ನವದೆಹಲಿಯ ವಿಜ್ಞಾನ ಭವನದಲ್ಲಿ ಜೂನ್.19 ರಂದು ಜರುಗಲಿರುವ ರಾಷ್ಟ್ರ ಮಟ್ಟದ ಬೃಹತ್ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಚಾಲನೆ ನೀಡಲಿದ್ದಾರೆ.

 

ವಿಶೇಷವಾಗಿ ಉತ್ಪಾದನಾ ವಲಯದಲ್ಲಿ  (Manufacturing Sector)  ಹೆಚ್ಚಿನ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಯೋಜನೆ ಸಹಕಾರಿಯಾಗಲಿದೆ. ಈ ಮೊದಲು ಯೊಜನೆಯನ್ನು ‘ಎಂಪ್ಲಾಯ್ಮೆAಟ್ ಲಿಂಕ್ಡ್ ಇನ್ಸೆಂಟಿವ್’ ಎಂದು ಕರೆಯಲಾಗುತ್ತಿತ್ತು. ಯೋಜನೆಯಡಿ ರೂ.99,446 ಕೋಟಿ ರೂಪಾಯಿಗಳ ಬಜೆಟ್ ವೆಚ್ಚದೊಂದಿಗೆ ಮುಂದಿನ ಎರಡು ವರ್ಷಗಳಲ್ಲಿ ದೇಶಾದ್ಯಂತ 3.5 ಕೋಟಿಗೂ ಹೆಚ್ಚು ಉದ್ಯೋಗ ಅವಕಾಶಗಳನ್ನು ಸೃಷ್ಟಿಸುವ ಗುರಿ ಹೊಂದಲಾಗಿದೆ. ಯೋಜನೆ ಜಾರಿಯಿಂದ 1.92 ಕೋಟಿ ಫಲಾನುಭವಿಗಳು ಮೊದಲ ಬಾರಿಗೆ ಔಪಚಾರಿಕ ಉದ್ಯೋಗ ವಲಯಕ್ಕೆ ಪ್ರವೇಶಿಸುವ ನಿರೀಕ್ಷೆಯಿದೆ. 1 ಆಗಸ್ಟ್ 2025 ಮತ್ತು 31 ಜುಲೈ 2027 ರ ನಡುವೆ ಸೃಷ್ಟಿಯಾಗುವ ಹೊಸ ಉದ್ಯೋಗಗಳಿಗೆ ಯೋಜನೆ ಅನ್ವಯಿಸುತ್ತದೆ.

 

ಈ ಮಹತ್ತರ ಯೋಜನೆಯ ಯಶಸ್ವಿ ಅನುಷ್ಠಾನದ ಅಂಗವಾಗಿ, ಗೌರವಾನ್ವಿತ ಪ್ರಧಾನಮಂತ್ರಿಯವರ ಘನ ಉಪಸ್ಥಿತಿಯಲ್ಲಿ ಜೂನ್ 19 ರಂದು ನವದೆಹಲಿಯ ವಿಜ್ಞಾನ ಭವನದ ಜರುಗುವ ಸಮಾರಂಭದಲ್ಲಿ ಅರ್ಹ ಫಲಾನುಭವಿಗಳಿಗೆ ಸುಮಾರು ರೂ.2,000 ಕೋಟಿ ರೂಪಾಯಿಗಳ ಆರ್ಥಿಕ ಸೌಲಭ್ಯಗಳನ್ನು ನೇರವಾಗಿ ವಿತರಿಸಲಾಗುತ್ತಿದೆ. ಇದರೊಂದಿಗೆ, ದೇಶದಾದ್ಯಂತ ಪ್ರಮುಖ ಕೈಗಾರಿಕಾ ಮತ್ತು ಉದ್ಯೋಗ ಕೇಂದ್ರಗಳು ಸೇರಿದಂತೆ ಸುಮಾರು 200 ಆಯ್ದ ಸ್ಥಳಗಳಲ್ಲಿ ಪ್ರಾದೇಶಿಕ ಮಟ್ಟದ ಕಾರ್ಯಕ್ರಮಗಳು ಏಕಕಾಲದಲ್ಲಿ ಜರುಗಲಿವೆ. ಈ ಕಾರ್ಯಕ್ರಮಗಳಲ್ಲಿ ನೂತನವಾಗಿ ಉದ್ಯೋಗ ಪಡೆದ ಯುವಕರಿಗೆ ಉದ್ಯೋಗದಾತರಿಂದ ಅಧಿಕೃತ ನೇಮಕಾತಿ ಪತ್ರಗಳನ್ನು ವಿತರಿಸಲಾಗುವುದು.

 

ಮೊದಲ ಬಾರಿಗೆ ಉದ್ಯೋಗಕ್ಕೆ ಸೇರುವ ಉದ್ಯೋಗಿಗಳಿಗೆ ಪ್ರೋತ್ಸಾಹಕ:
ಯೋಜನೆಯಡಿ ಇಪಿಎಫ್‌ಒ (EPFO) ನಲ್ಲಿ ನೋಂದಾಯಿಸಲ್ಪಟ್ಟ ಮತ್ತು ಮಾಸಿಕ ರೂ.1 ಲಕ್ಷದವರೆಗೆ ವೇತನ ಹೊಂದಿರುವ ಮೊದಲ ಬಾರಿಗೆ ಉದ್ಯೋಗಕ್ಕೆ ಸೇರುವ ಅಭ್ಯರ್ಥಿಗಳು ಈ ಸೌಲಭ್ಯಕ್ಕೆ ಅರ್ಹರಾಗಿರುತ್ತಾರೆ. ಅರ್ಹ ಉದ್ಯೋಗಿಗಳಿಗೆ ಅವರ ಒಂದು ತಿಂಗಳ ವೇತನಕ್ಕೆ ಸಮನಾದ (ಗರಿಷ್ಠ ರೂ.15,000 ವರೆಗೆ) ಪ್ರೋತ್ಸಾಹಕ ಧನವನ್ನು ಎರಡು ಕಂತುಗಳಲ್ಲಿ ನೀಡಲಾಗುತ್ತದೆ. ಮೊದಲ ಕಂತನ್ನು 6 ತಿಂಗಳ ನಿರಂತರ ಸೇವೆಯ ನಂತರ ಮತ್ತು ಎರಡನೇ ಕಂತನ್ನು 12 ತಿಂಗಳ ಸೇವೆ ಹಾಗೂ ಹಣಕಾಸು ಸಾಕ್ಷರತಾ ಕಾರ್ಯಕ್ರಮದ ಯಶಸ್ವಿ ಪೂರ್ಣಗೊಳಿಸುವಿಕೆಯ ನಂತರ ನೀಡಲಾಗುವುದು. ಯುವ ಕಾರ್ಮಿಕರಲ್ಲಿ ದೀರ್ಘಾವಧಿಯ ಉಳಿತಾಯದ ಅಭ್ಯಾಸವನ್ನು ಉತ್ತೇಜಿಸಲು ಈ ಪ್ರೋತ್ಸಾಹಕದ ಒಂದು ಭಾಗವನ್ನು ನಿರ್ದಿಷ್ಟ ಅವಧಿಗೆ ಉಳಿತಾಯ ಖಾತೆಯಲ್ಲಿ ಇರಿಸಲಾಗುತ್ತದೆ.

 

ಉದ್ಯೋಗದಾತರಿಗೆ ಬೆಂಬಲ:
ಯೋಜನೆಯಡಿ ಎಲ್ಲಾ ವಲಯಗಳಲ್ಲಿ ಹೆಚ್ಚುವರಿ ಉದ್ಯೋಗಗಳನ್ನು ಸೃಷ್ಟಿಸುವ ಉದ್ಯೋಗದಾತರನ್ನು ಪ್ರೋತ್ಸಾಹಿಸಲಾಗುತ್ತದೆ. ಉದ್ಯೋಗದಾತರು ಪ್ರತಿ ಹೆಚ್ಚುವರಿ ಉದ್ಯೋಗಿಗೆ ಎರಡು ವರ್ಷಗಳ ಅವಧಿಗೆ ಪ್ರತಿ ತಿಂಗಳು ರೂ.3,000 ವರೆಗೆ ಪ್ರೋತ್ಸಾಹಕ ಧನವನ್ನು ಪಡೆಯಲಿದ್ದಾರೆ (ಕನಿಷ್ಠ 6 ತಿಂಗಳ ನಿರಂತರ ಸೇವೆ ಕಡ್ಡಾಯ). ಉತ್ಪಾದನಾ ವಲಯಕ್ಕೆ ಈ ಸೌಲಭ್ಯವನ್ನು 3ನೇ ಮತ್ತು 4ನೇ ವರ್ಷಕ್ಕೂ ವಿಸ್ತರಿಸಲಾಗಿದೆ. ಈ ಸೌಲಭ್ಯವನ್ನು ಪಡೆಯಲು, 50 ಕ್ಕಿಂತ ಕಡಿಮೆ ಉದ್ಯೋಗಿಗಳನ್ನು ಹೊಂದಿರುವ ಸಂಸ್ಥೆಗಳು ಕನಿಷ್ಠ ಇಬ್ಬರು ಹೆಚ್ಚುವರಿ ಉದ್ಯೋಗಿಗಳನ್ನು ಮತ್ತು 50 ಕ್ಕಿಂತ ಹೆಚ್ಚು ಉದ್ಯೋಗಿಗಳನ್ನು ಹೊಂದಿರುವ ಸಂಸ್ಥೆಗಳು ಕನಿಷ್ಠ ಐದು ಹೆಚ್ಚುವರಿ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳುವುದು ಕಡ್ಡಾಯವಾಗಿದೆ.

 

ನೇರ ನಗದು ವರ್ಗಾವಣೆ :
ಉದ್ಯೋಗಿಗಳಿಗೆ ಸಿಗುವ ಪಾವತಿಗಳನ್ನು ಆಧಾರ್ ಬ್ರಿಡ್ಜ್ ಪೇಮೆಂಟ್ ಸಿಸ್ಟಮ್ ಮೂಲಕ ನೇರವಾಗಿ ಅವರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ ಉದ್ಯೋಗದಾತರಿಗೆ ನೀಡಲಾಗುವ ಪ್ರೋತ್ಸಾಹಕಗಳನ್ನು ಅವರ ಪ್ಯಾನ್ ಲಿಂಕ್ ಮಾಡಲಾದ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮೆ ಮಾಡಲಾಗುವುದು.
ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆಯು ದೇಶದ ಯುವಶಕ್ತಿಯನ್ನು ಸಬಲೀಕರಿಸುವ ಜೊತೆಗೆ, ಉದ್ಯೋಗ ಮಾರುಕಟ್ಟೆಯನ್ನು ಔಪಚಾರಿಕ ಆರ್ಥಿಕತೆಯತ್ತ ಕೊಂಡೊಯ್ಯಲು ಮತ್ತು ದೇಶದ ಕೋಟ್ಯಂತರ ಕಾರ್ಮಿಕರಿಗೆ ಸಾಮಾಜಿಕ ಭದ್ರತೆಯನ್ನು ಒಡಗಿಸಲು ಪ್ರಮುಖ ಮೈಲಿಗಲ್ಲಾಗಲಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now