ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜೂನ್. 19 : ವಿಧಾನಸಭೆಯಿಂದ ವಿಧಾನಪರಿಷತ್‍ನ ಏಳು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಆಡಳಿತ ರೂಢ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿರುವುದಕ್ಕೆ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗ ಶುಕ್ರವಾರ ವಿಜಯೋತ್ಸವ ಆಚರಿಸಲಾಯಿತು.

ಬಿ.ಕೆ.ಹರಿಪ್ರಸಾದ್, ತಿಪ್ಪಣ್ಣಪ್ಪ ಕಮಕನೂರ, ಪಿ.ವಿ.ಮೋಹನ್, ಬಿ.ಎಸ್.ಶಿವಣ್ಣ, ವಿನಯ್ ಕಾರ್ತಿಕ್ ಇವರುಗಳು ಜಯಶಾಲಿಗಳಾಗಿದ್ದು, ಅಡ್ಡ ಮತದಾನದ ಪರಿಣಾಮ ವಿರೋಧ ಪಕ್ಷಗಳಾದ ಬಿಜೆಪಿ-ಜೆಡಿಎಸ್. ಮುಖಭಂಗ ಅನುಭವಿಸಿರುವುದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಮಾತನಾಡಿ ವಿಧಾನಸಭೆಯಲ್ಲಿರುವ ಕಾಂಗ್ರೆಸ್‍ನ 135 ಶಾಸಕರುಗಳ ಮತಗಳ ಜೊತೆ ಬೇರೆ ಪಕ್ಷದ ಕೆಲವು ಶಾಸಕರುಗಳು ನಮ್ಮ ಪಕ್ಷದ ಮಹಾತ್ವಾಕಾಂಕ್ಷಿ ಯೋಜನೆಗಳನ್ನು ಮೆಚ್ಚಿ ಮತ ನೀಡಿ ಐವರನ್ನು ಗೆಲ್ಲಿಸಿದ್ದಾರೆ. ಇದರಿಂದ ಮೇಲ್ಮನೆಯಲ್ಲಿ ಕಾಂಗ್ರೆಸ್‍ಗೆ ಬಹುಮತ ಸಿಕ್ಕಂತಾಗಿದೆ. ವಿಧಾನಸಭೆಯಲ್ಲಿ ಏನೆ ಬಿಲ್ ಹೊರಡಿಸಿದರು ವಿಧಾನಪರಿಷತ್‍ನಲ್ಲಿ ಪಾಸ್ ಮಾಡಲು ಯಾವುದೆ ಅಡ್ಡಿಯಿರುವುದಿಲ್ಲ. ಅಭಿವೃದ್ದಿ ಕೆಲಸಗಳನ್ನು ಕೈಗೊಳ್ಳಲು ಅನುಕೂಲವಾಗಲಿದೆ. ರಾಜ್ಯಸಭೆಗೆ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ. ಕಾರ್ಯದರ್ಶಿ ಮನ್ಸೂರ್ ಅಲಿಖಾನ್ ಸೇರಿದಂತೆ ಮೂವರನ್ನು ಆಯ್ಕೆ ಮಾಡಿರುವುದು ಕೂಡ ಪಕ್ಷ ಶಕ್ತಿ ತುಂಬಿದಂತಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‍ಕುಮಾರ್, ಡಿ.ಎನ್.ಮೈಲಾರಪ್ಪ, ಉಪಾಧ್ಯಕ್ಷ ಡಿ.ಟಿ.ವೆಂಕಟೇಶ್, ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಸ್ಪರ್ಧಾಕಾಂಕ್ಷಿ ಎಂ.ಎ.ಸೇತುರಾಂ, ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎನ್.ಡಿ.ಕುಮಾರ್, ಹಿರಿಯ ಮುಖಂಡ
ಅಫೀಜ್ ಪಾಲವ್ವನಹಳ್ಳಿ, ಮುದಸಿರ್ ನವಾಜ್, ಶಬ್ಬಿರ್‍ಭಾಷ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯು.ಲಕ್ಷ್ಮಿಕಾಂತ್, ಹೆಚ್.ಅಂಜಿನಪ್ಪ, ಪರಿಶಿಷ್ಟ ವರ್ಗ ವಿಭಾಗದ ಅಧ್ಯಕ್ಷ ಮಂಜುನಾಥ್, ಸೇವಾದಳದ ಅಧ್ಯಕ್ಷೆ ನೇತ್ರಾವತಿ, ಇಂದಿರಾ, ಸೈಯದ್ ಅಫಾಖ್‍ಅಹಮದ್, ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯ ಉಪಾಧ್ಯಕ್ಷ ಟಿ.ಸ್ವಾಮಿ, ಜಿಲ್ಲಾಧ್ಯಕ್ಷ ಆರ್.ಶಿವಣ್ಣ, ಅಬ್ದುಲ್ಲಾ, ಚಾಂದ್‍ಪೀರ್, ರಘು ಇನ್ನು ಅನೇಕರು ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.














