Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಾಟ್ಸ್‌ಅಪ್ ವೆಬ್ ಸೇವೆ ದಿಢೀರ್ ಸ್ಥಗಿತ; ದೇಶಾದ್ಯಂತ ಲಕ್ಷಾಂತರ ಬಳಕೆದಾರರು ಪರದಾಟ

---Advertisement---

ದೇಶದ ಅತ್ಯಂತ ಜನಪ್ರಿಯ ಮೆಸೇಜಿಂಗ್ ವೇದಿಕೆಯಾದ ವಾಟ್ಸ್‌ಅಪ್‌ನ ಡೆಸ್ಕ್‌ಟಾಪ್ ಆವೃತ್ತಿ ‘ವಾಟ್ಸ್‌ಅಪ್ ವೆಬ್’ ಶುಕ್ರವಾರ ದಿಢೀರ್ ತಾಂತ್ರಿಕ ಸಮಸ್ಯೆಗೆ ಒಳಗಾಗಿದ್ದು, ದೇಶದಾದ್ಯಂತ ಲಕ್ಷಾಂತರ ಬಳಕೆದಾರರು ತೊಂದರೆ ಅನುಭವಿಸಿದ್ದಾರೆ.

ಮಧ್ಯಾಹ್ನದ ವೇಳೆಯಿಂದಲೇ ವಾಟ್ಸ್‌ಅಪ್ ವೆಬ್ ಸರಿಯಾಗಿ ಕಾರ್ಯನಿರ್ವಹಿಸದಿರುವ ಬಗ್ಗೆ ದೂರುಗಳು ಕೇಳಿಬಂದಿವೆ. ವಿಶೇಷವಾಗಿ ಕಚೇರಿ ಕೆಲಸಗಳಿಗೆ ಕಂಪ್ಯೂಟರ್ ಮತ್ತು ಲ್ಯಾಪ್‌ಟಾಪ್ ಮೂಲಕ ವಾಟ್ಸ್‌ಅಪ್ ಬಳಸುವ ಉದ್ಯೋಗಿಗಳು ಹಾಗೂ ಸಂಸ್ಥೆಗಳು ಸಂಕಷ್ಟಕ್ಕೆ ಸಿಲುಕಿವೆ.

ಸಾಮಾನ್ಯವಾಗಿ ಫೈಲ್‌ಗಳು, ಡಾಕ್ಯುಮೆಂಟ್‌ಗಳು, ಲಿಂಕ್‌ಗಳು ಹಾಗೂ ಅಧಿಕೃತ ಸಂದೇಶಗಳ ವಿನಿಮಯಕ್ಕಾಗಿ ವಾಟ್ಸ್‌ಅಪ್ ವೆಬ್‌ನ್ನು ವ್ಯಾಪಕವಾಗಿ ಬಳಸಲಾಗುತ್ತದೆ. ಆದರೆ ಇಂದು ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದರೂ ವೆಬ್ ಪುಟ ಲೋಡ್ ಆಗದಿರುವುದು, ಸಂದೇಶಗಳು ಕಳುಹಿಸದಿರುವುದು ಹಾಗೂ ‘Connecting’ ಎಂಬ ಸಂದೇಶ ಮಾತ್ರ ಕಾಣಿಸಿಕೊಳ್ಳುತ್ತಿರುವುದಾಗಿ ಬಳಕೆದಾರರು ತಿಳಿಸಿದ್ದಾರೆ.ಜಾಗತಿಕ ಮಟ್ಟದಲ್ಲಿ ಆನ್‌ಲೈನ್ ಸೇವೆಗಳ ಸ್ಥಿತಿಗತಿಗಳನ್ನು ಟ್ರ್ಯಾಕ್ ಮಾಡುವ ಡೌನ್‌ಡಿಟೆಕ್ಟರ್ ವೆಬ್‌ಸೈಟ್‌ನಲ್ಲಿ ವಾಟ್ಸ್‌ಅಪ್ ವೆಬ್ ಸೇವೆ ಸ್ಥಗಿತಗೊಂಡಿರುವ ಬಗ್ಗೆ ಸಾವಿರಾರು ದೂರುಗಳು ದಾಖಲಾಗಿವೆ. ಮುಂಬೈ, ದೆಹಲಿ, ಬೆಂಗಳೂರು, ಹೈದರಾಬಾದ್ ಹಾಗೂ ಚೆನ್ನೈ ಸೇರಿದಂತೆ ಪ್ರಮುಖ ನಗರಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ದೂರುಗಳು ಬಂದಿವೆ.

ಮೊಬೈಲ್ ಆಪ್‌ನಲ್ಲಿ ವಾಟ್ಸ್‌ಅಪ್ ಸೇವೆ ಬಹುತೇಕ ಸುಗಮವಾಗಿದ್ದರೂ, ವೆಬ್ ಆವೃತ್ತಿಯಲ್ಲಿ ಮಾತ್ರ ವ್ಯಾಪಕ ತಾಂತ್ರಿಕ ದೋಷ ಕಾಣಿಸಿಕೊಂಡಿದೆ.ವಾಟ್ಸ್‌ಅಪ್ ವೆಬ್ ಸೇವೆ ಸ್ಥಗಿತಗೊಂಡ ಬೆನ್ನಲ್ಲೇ ಬಳಕೆದಾರರು ಸಾಮಾಜಿಕ ಜಾಲತಾಣ X (ಹಿಂದಿನ ಟ್ವಿಟ್ಟರ್) ಕಡೆ ಮುಖ ಮಾಡಿದ್ದಾರೆ. #WhatsAppDown ಹ್ಯಾಷ್‌ಟ್ಯಾಗ್ ಟ್ರೆಂಡಿಂಗ್ ಆಗಿದ್ದು, ಕಚೇರಿ ಕೆಲಸಗಳು ಸ್ಥಗಿತಗೊಂಡಿರುವ ಬಗ್ಗೆ ಹಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜೊತೆಗೆ ವಾಟ್ಸ್‌ಅಪ್ ಡೌನ್ ಆದಾಗ ಜನರು X ಗೆ ಧಾವಿಸುವ ಕುರಿತ ಹಾಸ್ಯಮಯ ಮೀಮ್ಸ್‌ಗಳು ವೈರಲ್ ಆಗಿವೆ.

ಮೆಟಾ ಒಡೆತನದ ವಾಟ್ಸ್‌ಅಪ್ ಸಂಸ್ಥೆ ಈ ಕುರಿತು ಇನ್ನೂ ಅಧಿಕೃತ ಸ್ಪಷ್ಟನೆ ನೀಡಿಲ್ಲ. ಆದರೆ ಸರ್ವರ್ ಸಂಬಂಧಿತ ತಾಂತ್ರಿಕ ಸಮಸ್ಯೆಯಿಂದ ಸೇವೆಯಲ್ಲಿ ವ್ಯತ್ಯಯ ಉಂಟಾಗಿರಬಹುದು ಎಂದು ಅಂದಾಜಿಸಲಾಗಿದೆ. ಶೀಘ್ರದಲ್ಲೇ ಸಮಸ್ಯೆ ಪರಿಹರಿಸುವ ಕಾರ್ಯ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now