Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆಯ ಸುಶೀಲ್ ಕುಮಾರ್ ದುರಂತ ಮಾಸುವ ಮುನ್ನವೇ ಮತ್ತೊಂದು ಜಿಮ್ ಟ್ರಾಜಿಡಿ

---Advertisement---

ಉತ್ತರಾಖಂಡದ ಚಂಪಾವತ್ ಜಿಲ್ಲೆಯಲ್ಲಿ ದುಃಖದ ಘಟನೆ ಸಂಭವಿಸಿದ್ದು, ವಿಶೇಷ ಕಾರ್ಯಾಚರಣೆ ತಂಡದ (SOG) ಅಧಿಕಾರಿಯೊಬ್ಬರು ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಹಠಾತ್ ಅಸ್ವಸ್ಥಗೊಂಡು ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಈ ಘಟನೆ ಪೊಲೀಸ್ ಇಲಾಖೆ ಹಾಗೂ ಸ್ಥಳೀಯರಲ್ಲಿ ತೀವ್ರ ಆಘಾತ ಉಂಟುಮಾಡಿದೆ.ಮೃತ ಅಧಿಕಾರಿಯನ್ನು 38 ವರ್ಷದ ಗಿರೀಶ್ ಭಟ್ ಎಂದು ಗುರುತಿಸಲಾಗಿದೆ. ಅವರು ಚಂಪಾವತ್ ಎಸ್‌ಒಜಿ ಘಟಕದಲ್ಲಿ ಸೇವೆ ಸಲ್ಲಿಸುತ್ತಿದ್ದು, ಶುಕ್ರವಾರ ಎಂದಿನಂತೆ ಸ್ಥಳೀಯ ಜಿಮ್‌ನಲ್ಲಿ ವ್ಯಾಯಾಮ ಮಾಡುತ್ತಿದ್ದರು. ಈ ವೇಳೆ ಅವರಿಗೆ ಏಕಾಏಕಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡು ನೆಲಕ್ಕುರುಳಿದ್ದಾರೆ.

ತಕ್ಷಣವೇ ಜಿಮ್‌ನಲ್ಲಿದ್ದವರು ಅವರನ್ನು ಖಾತಿಮಾ ನಗರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದರೂ, ವೈದ್ಯರು ಅವರು ಆಸ್ಪತ್ರೆಗೆ ತಲುಪುವ ಮೊದಲೇ ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ಸಾವಿನ ನಿಖರ ಕಾರಣ ವೈದ್ಯಕೀಯ ವರದಿ ಬಳಿಕವೇ ಸ್ಪಷ್ಟವಾಗಲಿದೆ.ಮೂಲತಃ ಪಿಥೋರಗಢ ಜಿಲ್ಲೆಯವರಾದ ಗಿರೀಶ್ ಭಟ್, ಬಳಿಕ ಬನ್‌ಬಸಾದಲ್ಲಿ ನೆಲೆಸಿದ್ದರು. ಅವರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.ಚಂಪಾವತ್ ಎಸ್‌ಒಜಿ ಘಟಕದಲ್ಲಿ ದಕ್ಷ ಮತ್ತು ಕರ್ತವ್ಯನಿಷ್ಠ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದ ಗಿರೀಶ್ ಭಟ್ ಹಲವು ಮಹತ್ವದ ಪೊಲೀಸ್ ಕಾರ್ಯಾಚರಣೆಗಳಲ್ಲಿ ಪ್ರಮುಖ ಪಾತ್ರವಹಿಸಿದ್ದರು ಎಂದು ಸಹೋದ್ಯೋಗಿಗಳು ಸ್ಮರಿಸಿದ್ದಾರೆ.

ಅವರ ಅಂತ್ಯಕ್ರಿಯೆಯನ್ನು ಬನ್‌ಬಸಾದ ಶಾರದಾ ಘಾಟ್‌ನಲ್ಲಿ ಪೊಲೀಸ್ ಹಾಗೂ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ಹಿರಿಯ ಪೊಲೀಸ್ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಅಂತಿಮ ನಮನ ಸಲ್ಲಿಸಿದರು.

ಇತ್ತೀಚಿನ ದಿನಗಳಲ್ಲಿ ವ್ಯಾಯಾಮದ ವೇಳೆ ಅಥವಾ ನಂತರ ಸಂಭವಿಸುತ್ತಿರುವ ಹಠಾತ್ ಸಾವುಗಳ ಘಟನೆಗಳು ಸಾರ್ವಜನಿಕರಲ್ಲಿ ಆತಂಕ ಹೆಚ್ಚಿಸಿವೆ. ಕೆಲವು ದಿನಗಳ ಹಿಂದೆಯಷ್ಟೇ ಕರ್ನಾಟಕದ ದಾವಣಗೆರೆಯಲ್ಲಿ 26 ವರ್ಷದ ರಾಷ್ಟ್ರಮಟ್ಟದ ಬಾಡಿಬಿಲ್ಡರ್ ಸುಶೀಲ್ ಕುಮಾರ್ ಕೂಡ ಜಿಮ್ ಮುಗಿಸಿ ಮನೆಗೆ ಬಂದ ಬಳಿಕ ಕುಸಿದು ಬಿದ್ದು ಮೃತಪಟ್ಟಿದ್ದರು.ಈ ಎರಡು ಘಟನೆಗಳು ಯುವಕರಲ್ಲಿ ಮತ್ತು ತೀವ್ರ ದೈಹಿಕ ಕಸರತ್ತು ಮಾಡುವವರಲ್ಲಿ ಆರೋಗ್ಯ ತಪಾಸಣೆಯ ಅಗತ್ಯತೆಯನ್ನು ಮತ್ತೊಮ್ಮೆ ಎತ್ತಿ ತೋರಿಸಿವೆ. ದೇಹದ ಸಾಮರ್ಥ್ಯ ಮೀರಿ ವ್ಯಾಯಾಮ ಮಾಡುವುದು ಎಷ್ಟು ಸುರಕ್ಷಿತ ಎಂಬ ಪ್ರಶ್ನೆಯೂ ಇದೀಗ ಚರ್ಚೆಗೆ ಗ್ರಾಸವಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now