Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಬಂಪರ್ ನೇಮಕಾತಿ; ಇಂದಿನಿಂದ 1421 ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ

---Advertisement---

ಬೆಂಗಳೂರು.ಜೂನ್.22: ಪೊಲೀಸ್ ಇಲಾಖೆಯಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಕರ್ನಾಟಕ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಮಿಕ್ಕಿಳಿದ (ಉಳಿಕೆ ಮೂಲ) ವೃಂದದಲ್ಲಿ ಖಾಲಿ ಇರುವ ಒಟ್ಟು 1421 ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (ಸಿಎಆರ್/ಡಿಎಆರ್ – ಪುರುಷ) ಹುದ್ದೆಗಳ ನೇರ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಈ ನೇಮಕಾತಿ ಪ್ರಕ್ರಿಯೆಯ ಸಂಪೂರ್ಣ ಜವಾಬ್ದಾರಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (KEA) ವಹಿಸಲಾಗಿದೆ.

ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 22/06/2026

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22/07/2026

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 24/07/2026

ಲಿಖಿತ ಪರೀಕ್ಷೆ ನಡೆಯುವ ದಿನಾಂಕ: 06/09/2026 (ಬೆಳಗ್ಗೆ 10:30 ರಿಂದ ಮಧ್ಯಾಹ್ನ 12:00 ರವರೆಗೆ)

ವೇತನ ಶ್ರೇಣಿ:
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ. 37,500 – 76,100/- ವೇತನ ಶ್ರೇಣಿ ನಿಗದಿಪಡಿಸಲಾಗಿದೆ.

ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಪಿ.ಯು.ಸಿ. (PUC) ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು. (ಸಿಬಿಎಸ್‌ಇ/ಐಸಿಎಸ್‌ಇ 12ನೇ ತರಗತಿ, ಎನ್‌ಐಓಎಸ್, ಮೂರು ವರ್ಷಗಳ ಡಿಪ್ಲೊಮಾ ಅಥವಾ ಜೆಓಸಿ ಕೋರ್ಸ್‌ಗಳನ್ನು ನಿಯಮಾವಳಿಗಳನ್ವಯ ತತ್ಸಮಾನ ಎಂದು ಪರಿಗಣಿಸಲಾಗುತ್ತದೆ).

ವಯೋಮಿತಿ ವಿವರ (ಗರಿಷ್ಠ ವಯಸ್ಸು):
ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ತುಂಬಿರಬೇಕು. ಒಂದು ಬಾರಿಗೆ ಅನ್ವಯವಾಗುವಂತೆ ಗರಿಷ್ಠ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆ ನೀಡಲಾಗಿದ್ದು, ಗರಿಷ್ಠ ವಯೋಮಿತಿ ಈ ಕೆಳಗಿನಂತಿದೆ:

ಸಾಮಾನ್ಯ ಅರ್ಹತೆ (GM): 33 ವರ್ಷಗಳು

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳು (2A, 2B, 3A, 3B): 35 ವರ್ಷಗಳು

ಕರ್ನಾಟಕದ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ: 38 ವರ್ಷಗಳು

ಅರ್ಜಿ ಶುಲ್ಕ:
ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳು (2A/2B/3A/3B): ರೂ. 750/-

SC / ST / ಪ್ರವರ್ಗ-1 ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ರೂ. 500/-
(ಶುಲ್ಕವನ್ನು ಆನ್‌ಲೈನ್ ಮೂಲಕ ಮಾತ್ರ ಪಾವತಿಸಬೇಕಿರುತ್ತದೆ).

ಆಯ್ಕೆ ಪ್ರಕ್ರಿಯೆ ವಿಧಾನ:
ಲಿಖಿತ ಪರೀಕ್ಷೆ: 100 ಅಂಕಗಳ 1½ ಗಂಟೆ ಅವಧಿಯ ಆಫ್‌ಲೈನ್ (OMR ಮಾದರಿ) ಲಿಖಿತ ಪರೀಕ್ಷೆ ನಡೆಯಲಿದೆ. ಇದರಲ್ಲಿ ತಪ್ಪು ಉತ್ತರಗಳಿಗೆ 0.25 ರಷ್ಟು ನೆಗೆಟಿವ್ ಅಂಕಗಳ ಮೌಲ್ಯಮಾಪನ ಇರುತ್ತದೆ.

ದೇಹದಾರ್ಢ್ಯತೆ ಮತ್ತು ಸಹಿಷ್ಣುತೆ ಪರೀಕ್ಷೆ (PST & PET): ಲಿಖಿತ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳನ್ನು 1:5 ಅನುಪಾತದಲ್ಲಿ ಈ ಪರೀಕ್ಷೆಗೆ ಕರೆಯಲಾಗುತ್ತದೆ.

ಸಾಮಾನ್ಯ ಪುರುಷ ಅಭ್ಯರ್ಥಿಗಳಿಗೆ ಕನಿಷ್ಠ ಎತ್ತರ: 168 ಸೆಂ.ಮೀ.

ಬುಡಕಟ್ಟು ಪುರುಷ ಅಭ್ಯರ್ಥಿಗಳಿಗೆ ಕನಿಷ್ಠ ಎತ್ತರ: 155 ಸೆಂ.ಮೀ.

ಸಹಿಷ್ಣುತೆ ಪರೀಕ್ಷೆ: 1600 ಮೀಟರ್ ಓಟ (6 ನಿಮಿಷ 30 ಸೆಕೆಂಡ್‌ಗಳಲ್ಲಿ), ಉದ್ದ ಜಿಗಿತ ಅಥವಾ ಎತ್ತರ ಜಿಗಿತ ಮತ್ತು ಗುಂಡು ಎಸೆತ ಸ್ಪರ್ಧೆಗಳು ಒಳಗೊಂಡಿರುತ್ತವೆ.

ವೈದ್ಯಕೀಯ ಪರೀಕ್ಷೆ: ದೈಹಿಕ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಅಂತಿಮವಾಗಿ ವೈದ್ಯಕೀಯ ತಪಾಸಣೆ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea/ ಅಥವಾ ಪೊಲೀಸ್ ಇಲಾಖೆಯ ವೆಬ್‌ಸೈಟ್ https://ksp.karnataka.gov.in/ ಗೆ ಭೇಟಿ ನೀಡಿ ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕಾಗಿ ವಿನಂತಿಸಲಾಗಿದೆ. ತಪ್ಪು ಅಥವಾ ಸುಳ್ಳು ಮಾಹಿತಿ ನೀಡಿದಲ್ಲಿ ಅಭ್ಯರ್ಥಿತನವನ್ನು ರದ್ದುಪಡಿಸಲಾಗುವುದು ಎಂದು ಅಧಿಸೂಚನೆಯಲ್ಲಿ ಎಚ್ಚರಿಸಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now