ದೆಹಲಿ.ಜೂನ್.23:ಭಾರತೀಯ ಚಿತ್ರರಂಗ ಹಾಗೂ ಕಲೆಗೆ ನೀಡಿರುವ ಅಪಾರ ಕೊಡುಗೆಯನ್ನು ಪರಿಗಣಿಸಿ, ಮಲಯಾಳಂ ಚಿತ್ರರಂಗದ ಖ್ಯಾತ ಹಿರಿಯ ನಟ ಮಮ್ಮುಟ್ಟಿ ಅವರಿಗೆ ದೇಶದ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಪದ್ಮಭೂಷಣ’ ನೀಡಿ ಗೌರವಿಸಲಾಗಿದೆ.
ರಾಷ್ಟ್ರಪತಿ ಭವನದ ಗಣತಂತ್ರ ಮಂಟಪದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಮ್ಮುಟ್ಟಿ ಅವರಿಗೆ ಅಧಿಕೃತವಾಗಿ ಪ್ರಶಸ್ತಿ ಪ್ರದಾನ ಮಾಡಿದರು.
ಐದು ದಶಕಗಳಿಗೂ ಹೆಚ್ಚು ಕಾಲದ ಸುದೀರ್ಘ ಸಿನಿ ಪಯಣದಲ್ಲಿ 400ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ 74 ವರ್ಷದ ಮಮ್ಮುಟ್ಟಿ ಅವರು, ಈ ಮಹತ್ವದ ಕ್ಷಣಕ್ಕೆ ಸಾಕ್ಷಿಯಾಗಲು ತಮ್ಮ ಪತ್ನಿ ಸುಲ್ಫತ್, ಮಗ ಹಾಗೂ ನಟ ದುಲ್ಕರ್ ಸಲ್ಮಾನ್ ಮತ್ತು ಮಗಳು ಸುರುಮಿ ಅವರೊಂದಿಗೆ ದೆಹಲಿಗೆ ಆಗಮಿಸಿದ್ದರು. 1998 ರಲ್ಲಿ ‘ಪದ್ಮಶ್ರೀ’ ಗೌರವಕ್ಕೆ ಪಾತ್ರರಾಗಿದ್ದ ಮಮ್ಮುಟ್ಟಿ ಅವರಿಗೆ ಈಗ ‘ಪದ್ಮಭೂಷಣ’ ಮುಕುಟಪ್ರಾಯವಾಗಿ ಲಭಿಸಿದೆ.
#WATCH | Delhi | Malayalam cinema legend Mammootty awarded the Padma Bhushan by President Droupadi Murmu
(Video source: Rashtrapati Bhavan) pic.twitter.com/XXCPOyG4pS
— ANI (@ANI) June 23, 2026
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












