ಸುದ್ದಿಒನ್, ಚಿತ್ರದುರ್ಗ, ಜೂ.23: ಗ್ರಾಮೀಣ ಪ್ರದೇಶದ ದೇಶೀಯ ಕ್ರೀಡೆಗಳಿಗೆ ಹೆಚ್ಚು ಆದ್ಯತೆ ನೀಡಿದರೆ, ಗ್ರಾಮೀಣ ಭಾಗಗಳಲ್ಲಿ ಶಾಂತಿ ಹಾಗೂ ಸೌಹಾರ್ದತಾ ವಾತಾವರಣವನ್ನು ನಿರ್ಮಾಣ ಮಾಡಲು ಸಾಧ್ಯವಿದೆ ಎಂದು ವಿಮುಕ್ತಿ ವಿದ್ಯಾಸಂಸ್ಥೆಯ ನಿದೇರ್ಶಕರಾದ ಆರ್.ವಿಶ್ವಸಾಗರ್ ಹೇಳಿದರು.
ನಗರದ ಹೊರ ವಲಯದ ದಮ್ಮಾ ಕೇಂದ್ರದಲ್ಲಿ ವಿಮುಕ್ತಿ ವಿದ್ಯಾಸಂಸ್ಥೆ ಚಿತ್ರದುರ್ಗ, ಶಾಂತಿ & ಸೌಹಾರ್ದ ವೇದಿಕೆ ಇವರ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕ್ರೀಡೆ ಹಾಗೂ ಸಂವಿಧಾನದ ಮೌಲ್ಯಗಳು, ಪಾರ್ಲಿಮೆಂಟ್ ಮತ್ತು ಜೆಂಡರ್ ಕುರಿತು ಎರಡು ದಿನಗಳ ತರಬೇತಿ ಕಾರ್ಯಗಾರ ಹಾಗೂ ಗ್ರಾಮೀಣ ಮಟ್ಟದ ಕ್ರೀಡಾ ಕೂಟದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಹದಿನೆಂಟು ವರ್ಷದೊಳಗಿನ ಬಾಲಕ ಮತ್ತು ಬಾಲಕೀಯರಿಗೆ ಹಮ್ಮಿಕೊಳ್ಳಲಾಗಿದ್ದ ಕ್ರೀಡಾಕೂಟ ನಾಯಕತ್ವ ಗುಣಗಳು ಸಾಮಾಜಿಕ ಜಾಗೃತಿ, ಲಿಂಗ ಸಮಾನತೆ, ವಿಷಯಗಳ ಮೇಲೆ ಮಾತನಾಡಿದ ಅವರು ಗ್ರಾಮೀಣ ಭಾಗದ ಯುವಜನರಲ್ಲಿ ದೇಶೀಯ ಕ್ರೀಡೆಗಳ ಬಗ್ಗೆ ಆಸಕ್ತಿ ಕಡಿಮೆ ಆಗುತ್ತಿದ್ದು, ಅದನ್ನು ಪುನಃ ಬೆಳೆಸುವಂತಹ ವಾತಾವರಣ ನಿರ್ಮಾಣವಾಗಬೇಕು ಮತ್ತು ಸರ್ಕಾರ ಆ ಕ್ರೀಡೆಗಳಿಗೆ ಹೆಚ್ಚು ಒತ್ತು ನೀಡಬೇಕೆಂದು ಸಲಹೆ ನೀಡಿದರು.
ಕರ್ನಾಟಕ ವಿದ್ಯಾರ್ಥಿ ಯುವಜನ ಸಂಘಟನೆಯ ರಾಜ್ಯಾಧ್ಯಕ್ಷ ಬೆಂಕಿಕೆರೆ ಸರೋವರ್ ಮಾತನಾಡಿ, ಗ್ರಾಮೀಣ ಭಾಗದ ಯುವಜನರಲ್ಲಿ ಕ್ರೀಡೆ ಮತ್ತು ಸಾಂಸ್ಕøತಿಕ ಚಟುವಟಿಕೆಗಳು ರಕ್ತಗತವಾಗಿಯೇ ಬಂದಿರುತ್ತದೆ. ಅಂತಹವರನ್ನು ಗುರುತಿಸಿ, ಪ್ರೋತ್ಸಾಹಿಸುವ ಹೊಣೆಗಾರಿಕೆ ಸಂಘ ಸಂಸ್ಥೆಗಳು ಮತ್ತು ಸರ್ಕಾರ ಮಾಡಬೇಕಾದ ಅನಿವಾರ್ಯತೆ ಇದೆ ಎಂದು ಹೇಳಿದರು.
ಗ್ರಾಮೀಣ ಕ್ರೀಡೆಗಳ ಜೊತೆ-ಜೊತೆಗೆ ಸಂವಿಧಾನ, ಸಂವಿಧಾನದ ಆಶಯಗಳು, ಸಾಮಾಜಿಕ ನ್ಯಾಯದ ತತ್ವಗಳು ಹಾಗೂ ಭಾರತೀಯ ಪರಂಪರೆ ಮತ್ತು ಮೌಲ್ಯಗಳ ಬಗ್ಗೆ ಕಿಶೋರಿಯರು ಮತ್ತು ಕಿರಿಯ ವಯಸ್ಸಿನವರಲ್ಲಿ ಹೆಚ್ಚು ಹೆಚ್ಚಾಗಿ ಬೆಳೆಸುವಂತಹ ವಾತಾವರಣ ನಿರ್ಮಾಣವಾದಾಗ ಸಮಾಜದಲ್ಲಿ ಸೌಹಾರ್ದಯುತವಾದ ವಾತಾವರಣ ತರಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ವಿಮುಕ್ತಿ ವಿದ್ಯಾಸಂಸ್ಥೆಯ ಅಧ್ಯಕ್ಷೆ ಶ್ರೀಮತಿ ಅನ್ನಪೂರ್ಣ ಅವರು ಮಾತನಾಡಿ, ಚಿತ್ರದುರ್ಗ ಸುತ್ತಮುತ್ತಲ ಇಪ್ಪತ್ತು ಗ್ರಾಮಗಳ ಕಿಶೋರಿಯರ ಸಂಘಟನೆ ಮಾಡಲಾಗಿದ್ದು, ಅವರಿಗೆ ಲಿಂಗತ್ವ ಸಮಾನತೆ, ಶಿಕ್ಷಣ, ಆರೋಗ್ಯ, ಸಾಮಾಜಿಕ ತಾರತಮ್ಯಗಳ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಸಮಾಜದಲ್ಲಿ ಗಂಡು-ಹೆಣ್ಣು ಎಂಬ ತಾರತಮ್ಯವನ್ನು ಹೋಗಲಾಡಿಸಿ, ಎಲ್ಲರೂ ಸಮಾನರು ಎಂಬ ಭಾವನೆಯನ್ನು ಬೆಳೆಸಲಾಗುತ್ತಿದೆ ಎಂದು ಹೇಳಿದರು.
ಕ್ರೀಡಾ ಚಟುವಟಿಕೆಗಳ ಜೊತೆಗೆ ಸೌರ್ಹಾದಯುತ ವಾತಾವರಣ ನಿರ್ಮಾಣಕ್ಕಾಗಿ ವಿಮುಕ್ತಿ ವಿದ್ಯಾಸಂಸ್ಥೆ ಧಮ್ಮಾ ಕೇಂದ್ರ ಶ್ರಮಿಸುತ್ತಿದ್ದು, ಆ ನಿಟ್ಟಿನಲ್ಲಿ ಮಹಿಳೆಯರಲ್ಲಿ ಸಮಾನತೆ ತರುವಂತಹ ಕಾರ್ಯವನ್ನು ನಿರಂತರವಾಗಿ ಕೈಗೊಳ್ಳಲಾಗುತ್ತಿದೆ ಎಂದು ಶ್ರೀಮತಿ ಅನ್ನಪೂರ್ಣ ಅವರು ಹೇಳಿದರು.
ಕ್ರೀಡಾ ಹಾಗೂ ಸೌಹಾರ್ದಯುತ ಕಾರ್ಯಕ್ರಮದಲ್ಲಿ ವಿಮುಕ್ತಿ ವಿದ್ಯಾಸಂಸ್ಥೆಯ ಕೆ.ಬಿ.ನಾಗರತ್ನ, ಬಿಬಿ ಜಾನ್, ನಾಗಪ್ಪ, ಉಪನಿರ್ದೇಶಕರು-ಅರಣ್ಯಸಾಗರ್, ಆಶಾ ಕಾರ್ಯಕರ್ತೆ ಲಕ್ಷ್ಮಿ, ಶ್ರೀಮತಿ ಸುಚಿತ್ರ, ಕುಮಾರ್ ಟಿ.ಬೀರಾವರ, ಶಾಂತಿ ಮತ್ತು ಸೌಹಾರ್ದ ವೇದಿಕೆಯ ಅಧ್ಯಕ್ಷರಾದ ನರೇನಹಳ್ಳಿ ಅರುಣ್ಕುಮಾರ್ ಅವರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಚಿತ್ರದುರ್ಗ ತಾಲ್ಲೂಕಿನ ಚನ್ನಯ್ಯನಹಟ್ಟಿ, ತಮಟಕಲ್ಲು, ವಿಜಾಪುರ, ಕೋಡೇನಹಟ್ಟಿ, ಮಲ್ಲನಕಟ್ಟೆ ಸೇರಿದಂತೆ ಸುಮಾರು ಇಪ್ಪತ್ತಕ್ಕೂ ಹೆಚ್ಚು ಗ್ರಾಮಗಳಿಂದ ಕಿಶೋರ-ಕಿಶೋರಿಯರ ಕ್ರೀಡೋತ್ಸ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.














