Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದಲ್ಲಿ ಮುಂದಿನ 5 ದಿನ ವರುಣನ ಆರ್ಭಟ: ಕರಾವಳಿ, ದಕ್ಷಿಣ ಒಳನಾಡಿಗೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ

---Advertisement---

ಬೆಂಗಳೂರು: ರಾಜ್ಯದಾದ್ಯಂತ ಮುಂಗಾರು ಮಳೆ ಚುರುಕುಗೊಂಡಿದ್ದು, ಮುಂದಿನ ಐದು ದಿನಗಳ ಕಾಲ ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಜೂನ್ 26ರ ವರೆಗೆ ವಿವಿಧ ಜಿಲ್ಲೆಗಳಲ್ಲಿ ತೀವ್ರ ನಿಗಾ ವಹಿಸಲಾಗಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ವಿಶೇಷವಾಗಿ ಕರಾವಳಿ ತೀರದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಮುಂದಿನ ಒಂದು ವಾರದವರೆಗೆ ಪ್ರಚಂಡ ಮಳೆಯಾಗುವ ಸಾಧ್ಯತೆಯಿದೆ. ಇನ್ನು ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಮಲೆನಾಡು ಹಾಗೂ ಹಳೆ ಮೈಸೂರು ಭಾಗದ ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ, ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಹಾಗೂ ದಾವಣಗೆರೆಯಲ್ಲಿ ಗುಡುಗು ಸಹಿತ ಭಾರಿ ಮಳೆ ಸುರಿಯುವ ಮುನ್ಸೂಚನೆ ಸಿಕ್ಕಿದೆ.

ಉತ್ತರ ಒಳನಾಡಿನ ಭಾಗದಲ್ಲೂ ವರುಣನ ಅಬ್ಬರ ಜೋರಾಗಲಿದ್ದು, ಬೀದರ್, ಬಾಗಲಕೋಟೆ, ಕಲಬುರಗಿ, ಬಳ್ಳಾರಿ, ವಿಜಯನಗರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಬುಧವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಮುಂದಿನ ದಿನಗಳಲ್ಲಿ ಮಳೆಯ ತೀವ್ರತೆ ಹಂತ ಹಂತವಾಗಿ ಬದಲಾಗಲಿದ್ದು, ಕರಾವಳಿಯಲ್ಲಿ ಜೂನ್ 27 ರಿಂದ 29 ರವರೆಗೆ ಹಾಗೂ ದಕ್ಷಿಣ ಒಳನಾಡಿನಲ್ಲಿ ಜೂನ್ 24 ರಿಂದ 29 ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಜೂನ್ 24 ರಿಂದ 26 ರವರೆಗೆ ಯೆಲ್ಲೋ ಅಲರ್ಟ್ ಇರಲಿದ್ದು, ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಇಲಾಖೆ ಕೋರಿದೆ.

Join WhatsApp

Join Now

Join Telegram

Join Now