Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದ್ದು ವಿದ್ಯುತ್ ಖಾಸಗೀಕರಣಕ್ಕೆ ಮುಂದಾಗಿದೆ : ಸಂಸದ ಗೋವಿಂದ ಕಾರಜೋಳ ಗಂಭೀರ ಆರೋಪ

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಜೂ. 24 : ಸರ್ಕಾರ ಆರ್ಥಿಕವಾಗಿ ದಿವಾಳಿ ಆಗಿರುವ ಕಾರಣ ವಿದ್ಯುತ್ ಖಾಸಗೀಕರಣ ಮಾಡಲು ಮುಂದಾಗಿದೆ. ಕೋಟಿಗಟ್ಟಲೆ ರೂ ವಿದ್ಯುತ್ ಸಾಲ ಆಗಿದೆ ಇದನ್ನು ಸರಿದೂಗಿಸುವ ಸಲುವಾಗಿ ಸರ್ಕಾರ ಖಾಸಗೀಕರಣ ಮಾಡಿ ಓಡಿ ಹೋಗಲು ಹುನ್ನಾರ ನಡೆಸಿದೆ ಎಂದು ಮಾಜಿ ಉಪ ಮುಖ್ಯಮಂತ್ರಿಗಳು ಸಂಸದರಾದ ಗೋವಿಂದ ಕಾರಜೋಳ ಸರ್ಕಾರ ತರಾಟೆಗೆ ತೆಗೆದುಕೊಂಡಿದ್ದಾರೆ.

ಚಿತ್ರದುರ್ಗ ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ವಿದ್ಯುತ್ ಖಾಸಗೀಕರಣ ಮಾಡುವ ಹುನ್ನಾರ ಸರ್ಕಾರದ ಮುಂದೆ ಇದೆ.. ಸರ್ಕಾರ ಈಗಾಗಲೇ ಟಾಟಾ ಪವರ್ ಪರ್ಚೇಸಿಗೆ ಅರ್ಜಿಯನ್ನು ಆಹ್ವಾನಿಸಿತ್ತು. ದಯವಿಟ್ಟು ಸಾರ್ವಜನಿಕರಲ್ಲಿ ಕೈಮುಗಿದು ಕೇಳಿಕೊಳ್ಳುತ್ತೇನೆ ಯಾರು ಸಹ ಇದರಲ್ಲಿ ಭಾಗಿಯಾಗಬೇಡಿ ಎಂದ ಅವರು, ವಿದ್ಯುತ್ ಖಾಸಗೀಕರಣ ಆದರೆ ಮುಂದಿನ ದಿನಗಳಲ್ಲಿ ರೈತರ ಐಪಿ ಸೆಟ್ಟುಗಳಿಗೆ ಬಿಲ್ ಬರುತ್ತವೆ.. ಆ ಬಿಲ್ಲನ್ನು ತುಂಬಬೇಕಾದರೆ ರೈತರು ಹೊಲ ಮಾರಬೇಕಾಗುತ್ತದೆ. ಈ ಸರ್ಕಾರ ರಿಯಲ್ ಎಸ್ಟೇಟ್ ಕಡೆಗೆ ಗಮನ ಹರಿಸಿದೆ. ಇದನ್ನ ಎಲ್ಲಾ ಶಾಸಕರು ವಿರೋಧ ಮಾಡಬೇಕು ಎಂದು ಆಗ್ರಹಿಸಿದರು.

ಸರ್ಕಾರದ ಒಡೆತನದ ವಿದ್ಯುತ್ ಕಂಪನಿಗಳಿಗೆ ನೇಮಕಾತಿ ಮಾಡಿಕೊಂಡರೆ ಮೀಸಲಾತಿ ಕೊಡಬೇಕಾಗುತ್ತದೆ ಎಂಬ ಕಾರಣಕ್ಕೆ ಖಾಸಗೀಕರಣ ಮಾಡಲು ಹೊರಟಿದೆ.. ಇದು ಎಸ್.ಸಿ/ಎಸ್.ಟಿ ಸಮುದಾಯಕ್ಕೆ ಮಾಡುತ್ತಿರುವ ದ್ರೋಹವಾಗಿದೆ. ಹಾಗೆಯೇ ಸರ್ಕಾರ ಖಾಸಗಿ ಕಂಪನಿಗಳೊಂದಿಗೆ ಒಳಒಪ್ಪಂದ ಮಾಡಿಕೊಂಡು ಲಾಭ ಮಾಡಿಕೊಳ್ಳುವ ಹುನ್ನಾರ ನಡೆಸಿದೆ. ಸರ್ಕಾರ ಆರ್ಥಿಕವಾಗಿ ದಿವಾಳಿ ಆಗಿರುವ ಕಾರಣ ವಿದ್ಯುತ್ ಖಾಸಗೀಕರಣ ಮಾಡಲು ಮುಂದಾಗಿದೆ. ಕೋಟಿಗಟ್ಟಲೆ ರೂ ವಿದ್ಯುತ್ ಸಾಲ ಆಗಿದೆ ಇದನ್ನು ಸರಿದೂಗಿಸುವ ಸಲುವಾಗಿ ಸರ್ಕಾರ ಖಾಸಗೀಕರಣ ಮಾಡಿ ಓಡಿ ಹೋಗಲು ಮುಂದಾಗಿದೆ ಎಂದು ದೂರಿದರು.

ರಾಜ್ಯದಲ್ಲಿ ಬರ ಆವರಿಸಿದೆ ಕೂಡಲೇ ಬರ ಘೋಷಣೆ ಮಾಡಬೇಕು ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರವರಲ್ಲಿ ಒತ್ತಾಯಿಸಿದ್ದು, ಹಾಗೆಯೇ ಪ್ರತೀ ವಿಧಾನಸಭಾ ಕ್ಷೇತ್ರಕ್ಕೆ ಬರ ಪರಿಹಾರಕ್ಕೆ 25 ಕೋಟಿ ರೂ ಬಿಡುಗಡೆ ಮಾಡಬೇಕು. ಹಾಗೂ ಬರ ಅಧ್ಯಯನಕ್ಕೆ  ಕೂಡಲೇ ಐಎಎಸ್ ಕೇಡರ್ ಅಧಿಕಾರಿಯನ್ನ ಪ್ರತಿ ಜಿಲ್ಲೆಗೆ ನೇಮಿಸಬೇಕು ಎಂದು ಸರ್ಕಾರವನ್ನು ಸಂಸದರಾಧ ಗೋವಿಂದ ಕಾರಜೋಳ ಆಗ್ರಹಿಸಿದರು.

ಗೋಷ್ಟಿಯಲ್ಲಿ ಮಾಜಿ ಶಾಸಕರುಗಳಾದ ಜಿ.ಹೆಚ್.ತಿಪ್ಪಾರೆಡ್ಡಿ, ಎಸ್.ಕೆ.ಬಸವರಾಜನ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಕೆ.ಟಿ.ಕುಮಾರಸ್ವಾಮಿ, ಉಪಾಧ್ಯಕ್ಷರಾದ ಡಾ.ಸಿದ್ದಾರ್ಥ, ಪ್ರಧಾನ ಕಾರ್ಯದರ್ಶಿಗಳಾದ ವೆಂಕಟೇಶ್ ಯಾದವ್, ಮಾಧುರಿ ಗೀರೀಶ್, ಮೋಹನ್ ಕುಮಾರ್, ನಗರಾದ್ಯಕ್ಷ ಲೋಕೇಶ್ ಗ್ರಾಮಾಂತರ ಅಧ್ಯಕ್ಷ ನಾಗರಾಜ್, ಜಿಲ್ಲಾ ವಕ್ತಾರ ನಾಗರಾಜ್ ಬೇದ್ರೇ, ಸಹ ವಕ್ತಾರ ನವೀನ್ ಚಾಲುಕ್ಯ, ಎಸ್,ಸಿ.ಮಾರ್ಚಾದ ಅಧ್ಯಕ್ಷ ಪರಶುರಾಮ್ ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now