ಚಿತ್ರದುರ್ಗ. ಜೂನ್24: ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಡಿಸೆಂಬರ್ 31 ಅರ್ಜಿ ಸಲ್ಲಿಸಲು ಕೊನೆಯ ದಿನ.
2026-27ನೇ ಸಾಲಿಗೆ ಪ್ರೌಢಶಾಲೆಯಿಂದ ಸ್ನಾತಕೋತ್ತರ ಪದವಿವರೆಗೆ ಹಾಗೂ ವೈದ್ಯಕೀಯ ಮತ್ತು ಇಂಜಿನಿಯರಿಂಗ್‍ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ಸೌಲಭ್ಯಕ್ಕೆ ಅರ್ಹರಾಗಿರುತ್ತಾರೆ.
ಅರ್ಜಿ ಸಲ್ಲಿಸಲು ಇಚ್ಛಿಸುವ ಕಾರ್ಮಿಕರ ಮಾಸಿಕ ವೇತನವು ₹35,000/- ಕ್ಕಿಂತ ಮೀರಿರಬಾರದು. ವಿದ್ಯಾರ್ಥಿಯು ಹಿಂದಿನ ವರ್ಷದ ಪರೀಕ್ಷೆಯಲ್ಲಿ ಸಾಮಾನ್ಯ ವರ್ಗದವರಾಗಿದ್ದರೆ ಕನಿಷ್ಠ ಶೇ 50 ರಷ್ಟು ಮತ್ತು ಪ.ಜಾ/ಪ.ಪಂ ವರ್ಗದವರಾಗಿದ್ದರೆ ಶೇ.45 ರಷ್ಟು ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು. ಒಂದು ಕುಟುಂಬದಲ್ಲಿ ಗರಿಷ್ಠ ಇಬ್ಬರು ವಿದ್ಯಾರ್ಥಿಗಳಿಗೆ ಮಾತ್ರ ಈ ಸೌಲಭ್ಯ ದೊರೆಯಲಿದೆ.
ಅರ್ಹ ವಿದ್ಯಾರ್ಥಿಗಳು ಮಂಡಳಿಯ ವೆಬ್‍ಸೈಟ್ www.klwbapps.karnataka.gov.in ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬೇಕಾಗಿದೆ. ಹೆಚ್ಚಿನ ವಿವರಗಳಿಗಾಗಿ ಬೆಂಗಳೂರಿನ ಯಶವಂತಪುರದ ಮತ್ತಿಕೆರೆ ಮುಖ್ಯರಸ್ತೆಯಲ್ಲಿರುವ ಕಾರ್ಮಿಕ ಕಲ್ಯಾಣ ಭವನಕ್ಕೆ ಖುದ್ದಾಗಿ ಭೇಟಿ ನೀಡಬಹುದು ಅಥವಾ ದೂರವಾಣಿ ಸಂಖ್ಯೆಗಳಾದ 080-23475188, 8277291175, 82772120505, 9141585402, 9141602562 ಮೂಲಕ ಸಂಪರ್ಕಿಸಬಹುದಾಗಿದೆ ಎಂದು ಚಿತ್ರದುರ್ಗ ಉಪವಿಭಾಗ ಕಾರ್ಮಿಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
===========
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












