Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

BREAKING NEWS : ನಟಿ ಕೃಷಿ ತಾಪಾಂಡ ಮನೆಯಲ್ಲಿ ನೇಣು ಬಿಗಿದುಕೊಂಡು ಸ್ನೇಹಿತ ವೈಶಾಕ್ ಆತ್ಮಹತ್ಯೆ!

---Advertisement---

ಬೆಂಗಳೂರು: ಸಿಲಿಕಾನ್ ಸಿಟಿಯ ರಾಜರಾಜೇಶ್ವರಿ ನಗರದ ಅಪಾರ್ಟ್ಮೆಂಟ್ ಒಂದರಲ್ಲಿ ಘೋರ ದುರಂತವೊಂದು ಸಂಭವಿಸಿದೆ. ಸ್ಯಾಂಡಲ್ವುಡ್ ನಟಿ ಕೃಷಿ ತಾಪಂಡ ಅವರ ನಿವಾಸದಲ್ಲಿ ಸ್ನೇಹಿತ ವೈಶಾಕ್ ನೇಣಿಗೆ ಶರಣಾಗಿದ್ದಾರೆ.

ವೈಶಾಕ್ ಮನೆಯಲ್ಲಿ ಯಾರೂ ಇಲ್ಲದ ಸಮಯವನ್ನು ನೋಡಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ರಾಜರಾಜೇಶ್ವರಿ ನಗರ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸದ್ಯ ಮೃತದೇಹವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಯುವಕನ ಈ ಹಠಾತ್ ಆತ್ಮಹತ್ಯೆಗೆ ನಿಖರವಾದ ಕಾರಣ ಏನೆಂಬುದು ಸದ್ಯಕ್ಕೆ ನಿಗೂಢವಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಘಟನೆಯ ಹಿಂದಿನ ಅಸಲಿ ಸತ್ಯವನ್ನು ಹೊರತರಲು ವಿವಿಧ ಆಯಾಮಗಳಲ್ಲಿ ತನಿಖೆಯನ್ನು ತೀವ್ರಗೊಳಿಸಿದ್ದಾರೆ.

Join WhatsApp

Join Now

Join Telegram

Join Now