ಸುದ್ದಿಒನ್, ಚಿತ್ರದುರ್ಗ. ಜೂನ್. 25: ನಗರದ ರುಡ್‍ಸೆಟ್ ಸಂಸ್ಥೆಯಲ್ಲಿ ಗ್ರಾಮೀಣ ಭಾಗದ ಯುವಕ ಹಾಗೂ ಯುವತಿಯರಿಗಾಗಿ ಸ್ವ ಉದ್ಯೋಗ ಮಾಡಲು 30 ದಿನಗಳ ಕಾಲ ಮೊಬೈಲ್ ರಿಪೇರಿ ತರಬೇತಿಗೆ ಇದೇ ಜೂನ್ 27ರಂದು ಸಂದರ್ಶನ ಆಯೋಜಿಸಲಾಗಿದೆ. ಆಸಕ್ತರು ನೇರವಾಗಿ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಅಭ್ಯರ್ಥಿಗಳು 19 ರಿಂದ 50 ವರ್ಷಗಳ ವಯೋಮಿತಿಯೊಳಗಿರಬೇಕು. ಕನ್ನಡ ಓದಲು ಬರೆಯಲು ಬಲ್ಲವರಾಗಿರಬೇಕು. ಉದ್ಯೋಗವನ್ನು ಮಾಡಬೇಕೆಂಬ ಆಸಕ್ತಿ ಹೊಂದಿರಬೇಕು. ತರಬೇತಿಗೆ ಸಂಬಂಧಿಸಿದಂತೆ ಕೌಶಲ್ಯ ಕುರಿತು ಪ್ರಾಥಮಿಕ ಜ್ಞಾನ ಹೊಂದಿದವರಿಗೆ ಆದ್ಯತೆ ನೀಡಲಾಗುವುದು. ಈ ತರಬೇತಿಯು ಊಟ ಮತ್ತು ವಸತಿ ಸಹಿತವಾಗಿ ಸಂಪೂರ್ಣ ಉಚಿತವಾಗಿರುತ್ತದೆ.
ಆಸಕ್ತ ಅಭ್ಯರ್ಥಿಗಳು ತಮ್ಮ ಮೊಬೈಲ್ ಸಂಖ್ಯೆ ಹಾಗೂ ಸ್ವ-ವಿಳಾಸದ ಅರ್ಜಿಯೊಂದಿಗೆ ಆಧಾರ್ ಕಾರ್ಡ್, ರೇಷನ್ ಕಾರ್ಡ್, ಬ್ಯಾಂಕ್ ಪಾಸ್‍ಬುಕ್ ಜೆರಾಕ್ಸ್, ಜಾತಿ ಪ್ರಮಾಣ ಪತ್ರ ಜೆರಾಕ್ಸ್ ಪ್ರತಿಗಳೊಂದಿಗೆ ಇದೇ ಜೂನ್ 27 ರಂದು ರುಡ್‍ಸೆಟ್ ಸಂಸ್ಥೆಯಲ್ಲಿ ನೇರವಾಗಿ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಸ್ಥಯ ದೂರವಾಣಿ ಸಂಖ್ಯೆ 8431329162, 8618282445, 8660627785 ಕರೆ ಮಾಡುವಂತೆ ರುಡ್‍ಸೆಟ್ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ಕೊರಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











