ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ. ಜೂ. 25 : ತುರ್ತು ಪರಿಸ್ಥಿತಿಯು ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವಾಗಿ ಪರಿಗಣಿಸ ಲಾಗಿದೆ. ಅಧಿಕಾರ ಉಳಿಸಿಕೊಳ್ಳುವ ಉದ್ದೇಶದಿಂದ ನಾಗರಿಕರ ಮೂಲಭೂತ ಹಕ್ಕುಗಳನ್ನು ನಿರ್ಬಂಧಿಸಿ, ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕ್ಕಿ, ವಿರೋಧ ಪಕ್ಷದ ನಾಯಕರನ್ನು ಬಂಧಿಸಲಾಯಿತು ಎಂದು ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಎಚ್.ಮೋಹನ್ ಕುಮಾರ್ ತಿಳಿಸಿದರು.

ಚಿತ್ರದುರ್ಗ ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಬಿಜೆಪಿ ಜಿಲ್ಲಾ ಎಸ್ಸಿ ಮೋರ್ಚಾವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಸಂವಿಧಾನ ಹತ್ಯೆ ದಿವಸ್ ಕುರಿತು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, 1975ರ ಜೂನ್ 25ರಂದು ಘೋಷಿಸಲಾದ ತುರ್ತು ಪರಿಸ್ಥಿತಿಯು ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವಾಗಿ ಪರಿಗಣಿಸಲಾಗಿದೆ. ಅಧಿಕಾರ ಉಳಿಸಿಕೊಳ್ಳುವ ಉದ್ದೇಶದಿಂದ ನಾಗರಿಕರ ಮೂಲಭೂತ ಹಕ್ಕುಗಳನ್ನು ನಿರ್ಬಂಧಿಸಿ, ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕ್ಕಿ, ವಿರೋಧ ಪಕ್ಷದ ನಾಯಕರನ್ನು ಬಂಧಿಸಲಾಯಿತು. ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಹಲವಾರು ತಿದ್ದುಪಡಿಗಳನ್ನು ಮಾಡಲಾಯಿತು.
ಈ ಸಂದರ್ಭದಲ್ಲಿ ಲೋಕನಾಯಕ ಜಯಪ್ರಕಾಶ್ ನಾರಾಯಣ್ ಅವರ ನೇತೃತ್ವದಲ್ಲಿ ದೇಶವ್ಯಾಪಿ ಹೋರಾಟ ಆರಂಭವಾಗಿ, ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ರಕ್ಷಿಸುವ ಮಹತ್ವದ ಜನಾಂದೋಲನವಾಗಿ ರೂಪು ಗೊಂಡಿತು. ಆ ಹೋರಾಟಕ್ಕೆ ಆರ್ಎಸ್ಎಸ್ ಸೇರಿದಂತೆ ಅನೇಕ ಸಂಘಟನೆಗಳು ಬೆಂಬಲ ನೀಡಿದವು. ಜನಶಕ್ತಿಯ ಮುಂದೆ ಸರ್ವಾಧಿಕಾರಿ ಮನೋಭಾವ ಸೋತು, 1977ರಲ್ಲಿ ಪ್ರಜಾಪ್ರಭುತ್ವ ಮರುಸ್ಥಾಪನೆ ಯಾಯಿತು ಎಂದರು.
ತುರ್ತುಪರಿಸ್ಥಿತಿಯ ಘೋಷಣೆಯ ವಿರುದ್ಧ ರಾಷ್ಟ್ರಪತಿಗಳ ಆದೇಶವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸದಂತೆ ಮಾಡಲಾಯಿತು. ಪ್ರಧಾನಮಂತ್ರಿ, ರಾಷ್ಟ್ರಪತಿ, ಉಪರಾಷ್ಟ್ರಪತಿ ಹಾಗೂ ಲೋಕಸಭಾ ಸಭಾಪತಿಯ ಚುನಾವಣೆ ಗಳನ್ನು ನ್ಯಾಯಾಂಗದ ಪರಿಶೀಲನೆಯ ವ್ಯಾಪ್ತಿಯಿಂದ ಹೊರಗಿಡುವ ಪ್ರಯತ್ನ ಮಾಡಲಾಯಿತು. ಕೇಂದ್ರ ಸರ್ಕಾರದ ಅಧಿಕಾರಗಳನ್ನು ವಿಸ್ತರಿಸಿ, ನ್ಯಾಯಾಂಗದ ಹಸ್ತಕ್ಷೇಪವನ್ನು ಮತ್ತಷ್ಟು ಮಿತಿಗೊಳಿಸುವ ಕ್ರಮಗಳನ್ನು ಕೈಗೊಳ್ಳಲಾಯಿತು. ಉನ್ನತ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸುವ ಪ್ರಕ್ರಿಯೆಗೆ ವಿಶೇಷ ರಕ್ಷಣೆ ಒದಗಿಸಲಾಯಿತು. “ಮಿನಿ ಸಂವಿಧಾನ” ಎಂದೇ ಕರೆಯಲ್ಪಡುವ ಈ ತಿದ್ದುಪಡಿಯ ಮೂಲಕ ಸಂಸತ್ತಿನ ಅಧಿಕಾರವನ್ನು ಹೆಚ್ಚಿಸಿ, ನ್ಯಾಯಾಂಗದ ಅಧಿಕಾರವನ್ನು ಕುಗ್ಗಿಸುವ ಹಾಗೂ ಸಂವಿಧಾನ ತಿದ್ದುಪಡಿಗಳನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುವ ಅವಕಾಶವನ್ನು ನಿರ್ಬಂಧಿಸುವ ಪ್ರಯತ್ನ ಮಾಡಲಾ ಯಿತು.ತುರ್ತು ಪರಿಸ್ಥಿತಿಯ ಸ್ಮರಣೆ ಕೇವಲ ಇತಿಹಾಸದ ಘಟನೆಯಲ್ಲ; ಸಂವಿಧಾನ, ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಸದಾ ಕಾಪಾಡುವ ಸಂಕಲ್ಪದ ಸಂಕೇತವಾಗಿದೆ ಎಂದು ತಿಳಿಸಿದರು.
ತುರ್ತು ಪರಿಸ್ಥಿತಿಯಲ್ಲಿದ್ದ ಚಿತ್ರದುರ್ಗದ ಬಿಜೆಪಿ ಹಿರಿಯ ಮುಖಂಡರಾದ ರಾಘವೇಂದ್ರ ತನ್ನ ಅನುಭವ ಗಳನ್ನು ಹಂಚಿಕೊಂಡು, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯಲು ಮತ್ತು ತುರ್ತು ಪರಿಸ್ಥಿತಿ ಯ ವಿರುದ್ಧ ಹೋರಾಡಿದವರನ್ನು ಸ್ಮರಿಸಲು ಈ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಭಾರತದ ಪ್ರಜಾ ಪ್ರಭುತ್ವದ ಇತಿಹಾಸದಲ್ಲೇ ಇದು ಅತ್ಯಂತ ಕರಾಳ ಅಧ್ಯಾಯವಾಗಿದ್ದು, ನಾಗರಿಕರು ಸದಾ ಜಾಗೃತರಾಗಿ ಪ್ರಜಾ ಪ್ರಭುತ್ವವನ್ನು ರಕ್ಷಿಸಬೇಕು “1975ರ ಜೂನ್ 25ರಂದು ಭಾರತೀಯ ಪ್ರಜಾಪ್ರಭುತ್ವವನ್ನು ಕ್ರೂರವಾಗಿ ಹತ್ತಿಕ್ಕಲಾಗಿತ್ತು. ಆ ಕರಾಳ ದಿನದ ನೆನಪು ನಮ್ಮ ಸಂವಿಧಾನ, ಪ್ರಜಾಪ್ರಭುತ್ವ ಮತ್ತು ನಾಗರಿಕರ ಹಕ್ಕುಗಳನ್ನು ಸದಾ ರಕ್ಷಿಸಲು ನಮಗೆ ಪ್ರೇರಣೆ ನೀಡುತ್ತದೆ. “ತುರ್ತು ಪರಿಸ್ಥಿತಿಯ ಅವಧಿಯಲ್ಲಿ ದೇಶದ ಕೋಟ್ಯಂತರ ನಾಗರಿಕರ ಮೂಲಭೂತ ಹಕ್ಕುಗಳನ್ನು ಕಸಿದುಕೊಳ್ಳಲಾಗಿತ್ತು ಮತ್ತು ವಾಕ್ ಸ್ವಾತಂತ್ರ್ಯವನ್ನು ಸಂಪೂರ್ಣ ವಾಗಿ ಹತ್ತಿಕ್ಕಲಾಗಿತ್ತು ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷರಾದ ಕೆ ಟಿ ಕುಮಾರಸ್ವಾಮಿ ಮಾತನಾಡಿ ಇದು 1975ರ ಜೂನ್ 25ರಿಂದ 1977ರ ಮಾರ್ಚ್ 21ರವರೆಗೆ (ಒಟ್ಟು 21 ತಿಂಗಳು) ಜಾರಿಯಲ್ಲಿತ್ತು. ಸಂವಿಧಾನದ ವಿಧಿ 14, 19, 21 ಮತ್ತು 22ರ ಅಡಿಯಲ್ಲಿ ಸಿಗುವ ನಾಗರಿಕರ ಮೂಲಭೂತ ಹಕ್ಕುಗಳನ್ನು ಅಮಾನತುಗೊಳಿಸಲಾಯಿತು. ಪ್ರಜಾಪ್ರಭುತ್ವದ ಆಶಯಗಳನ್ನು ಬಲಿಕೊಟ್ಟು ಅಧಿಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ಮಾಡಿದ ಐತಿಹಾಸಿಕ ತಪ್ಪನ್ನು ದೇಶದ ಜನತೆಗೆ ನೆನಪಿಸಲು ಮತ್ತು ಸಂವಿಧಾನದ ಮಹತ್ವವನ್ನು ಸಾರಲು ಬಿಜೆಪಿ ಪ್ರತಿವರ್ಷ ಜೂನ್ 25 ಅನ್ನು ಕರಾಳ ದಿನವನ್ನಾಗಿ ಆಚರಿಸು ತ್ತಾ ಬಂದಿದೆ. ಆಗಿನ ಕಾಂಗ್ರೆಸ್ ಸರ್ಕಾರವು ಸಂವಿಧಾನದ ಮೌಲ್ಯಗಳನ್ನು ಗಾಳಿಗೆ ತೂರಿ ಹೇರಿದ ತುರ್ತು ಪರಿಸ್ಥಿತಿಯ ಕುರಿತು ಯುವ ಪೀಳಿಗೆಗೆ ಅರಿವು ಮೂಡಿಸಬೇಕಿದೆ. ಬಿಜೆಪಿ ವತಿಯಿಂದ ದೇಶಾದ್ಯಂತ ಹಾಗೂ ರಾಜ್ಯದ ವಿವಿಧ ಬೂತ್ಗಳು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ವಿಶೇಷ ಕಾರ್ಯಕ್ರಮಗಳು, ವಿಚಾರ ಸಂಕಿರಣಗಳು ಮತ್ತು ಛಾಯಾಚಿತ್ರ ಪ್ರದರ್ಶನಗಳನ್ನು ಆಯೋಜಿಸಲಾಗುತ್ತದೆ ತುರ್ತು ಪರಿಸ್ಥಿತಿ ವಿರೋಧಿ ಚಳುವಳಿಯಲ್ಲಿ (ಜೆಪಿ ಚಳುವಳಿ) ಭಾಗವಹಿಸಿ ಜೈಲು ಸೇರಿದ ‘ಪ್ರಜಾಪ್ರಭುತ್ವ ಹೋರಾಟಗಾರರನ್ನು’ ಪಕ್ಷದ ವತಿಯಿಂದ ಸನ್ಮಾನ, ಸಂವಿಧಾನದ ಮೂಲ ಆಶಯಗಳಾದ ಸ್ವಾತಂತ್ರ್ಯ, ಸಮಾನತೆ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯುವ ಬಿಜೆಪಿಯ ಬದ್ಧತೆಯನ್ನು ಪುನರುಚ್ಚರಿಸ ಲಾಗುತ್ತದೆ ಎಂದರು.
ಇದೇ ಸಂದರ್ಭದಲ್ಲಿ ತುರ್ತು ಪರಿಸ್ಥಿತಿಯಲ್ಲಿ ಭಾಗವಹಿಸಿದ್ದ ಚಿತ್ರದುರ್ಗದ ವೆಂಕಟರಾಮ್ರವರ ಸಹಾ ತಮ್ಮ ಅಂದಿನ ಅನುಭವಗಳನ್ನು ಕಾರ್ಯಕ್ರಮದಲ್ಲಿ ಹಂಚಿಕೊಂಡರು, ಕಾರ್ಯಕ್ರಮದ ನಂತರ ಬಿಜೆಪಿ ಕಾರ್ಯಾ ಲಯದ ಮುಂಭಾಗದಲ್ಲಿ ಸಂವಿಧಾನ ಹತ್ಯೆ ದಿವಸ್ ಅಂಗವಾಗಿ ಭೀತ್ತಿ ಪತ್ರಗಳನ್ನು ಹಿಡಿದ ಪಕ್ಷದ ಮುಖಂಡರು ಕಾರ್ಯಕರ್ತರು ಕಾಂಗ್ರೆಸ್ ವಿರುದ್ದ ಘೋಷಣೆಗಳನ್ನು ಕೂಗಲಾಯಿತು.
ಕಾರ್ಯಕ್ರಮದಲ್ಲಿ ಶಿವಣ್ಣಚಾರ್, ಎಸ್.ಸಿ.ಮೋರ್ಚಾದ ಜಿಲ್ಲಾಧ್ಯಕ್ಷ ಪರಶುರಾಮ್, ಜಿಲ್ಲಾ ವಕ್ತಾರ ನಾಗರಾಜ್ ಬೇದ್ರೇ, ಸಹ ವಕ್ತಾರ ನವೀನ್ ಚಾಲುಕ್ಯ,ನÀಗರಾಧ್ಯಕ್ಷ ಲೋಕೇಶ್, ಗ್ರಾಮಾಂತರ ಅಧ್ಯಕ್ಷ ನಾಗರಾಜ್, ಎಸ್.ಟಿ. ಮೋರ್ಚಾದ ಅಧ್ಯಕ್ಷ ರಾಜು, ಶ್ಯಲಜರೆಡ್ಡಿ, ಮಂಜುಳಮ್ಮ, ಮುರಾರ್ಜಿ, ರೇಖಾ, ಬಸಮ್ಮ, ರಜನಿ, ಪ್ರಹ್ಲಾದ್, ನಾಗರಾಜ್, ಚೇತನ ಕುಮಾರ್, ರವಿಕುಮಾರ್, ಪ್ರಸನ್ನ, ತಿಪ್ಪೇಸ್ವಾಮಿ, ಕಲ್ಲೇಶ್ ಹರೀಶ್ ಸೇರಿದಂತೆ ಇತರರು ಭಾಗವಹಿಸಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.













