Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಮ್ಮ ಊರು ನಮ್ಮ ಹೆಮ್ಮೆ | ಬೆಂಗಳೂರಿನ ಗಾಳಿ ಆಂಜನೇಯ ದೇವಸ್ಥಾನ

---Advertisement---

ವಿಶೇಷ ಲೇಖನ :
ಡಾ.ಕೆ.ವಿ. ಸಂತೋಷ್
ಹೊಳಲ್ಕೆರೆ
ಚಿತ್ರದುರ್ಗ ಜಿಲ್ಲೆ.
ಮೊ : 93424 66936

 

ಬೆಂಗಳೂರು ಒಂದು ಪುರಾತನ ನಗರ. ಅದರಲ್ಲೂ ಇಲ್ಲಿನ ದೇವಾಲಯಗಳು ಬೆಂಗಳೂರಿನ ಇತಿಹಾಸವನ್ನು ಹೇಳುತ್ತವೆ. ಇಂದಿಗೂ ತನ್ನ ಸಾಂಸ್ಕೃತಿಕ, ಧಾರ್ಮಿಕ ಜೊತೆಗೆ ಐತಿಹಾಸಿಕ ಮಹತ್ವವನ್ನು ಉಳಿಸಿಕೊಂಡಿರುವ ದೇವಾಲಯಗಳಲ್ಲಿ ಗಾಳಿ ಆಂಜನೇಯ ಸ್ವಾಮಿ ದೇವಾಲಯ ಪ್ರಮುಖವಾದದ್ದು. ಜೊತೆಗೆ ಬೆಂಗಳೂರಿನ ಹಳೆಯ ದೇವಸ್ಥಾನಗಳಲ್ಲಿ ಒಂದು. ಗಾಳಿ ಆಂಜನೇಯ ದೇವಸ್ಥಾನ ಬೆಂಗಳೂರಿನ ಮೈಸೂರು ರಸ್ತೆಯ ಬ್ಯಾಟರಾಯನಪುರದಲ್ಲಿದೆ. ಇಲ್ಲಿಗೆ ಭೇಟಿ ನೀಡಿ ಪ್ರಾರ್ಥಿಸಿಕೊಂಡರೆ ತಮ್ಮ ಕೋರಿಕೆಗಳು ಈಡೇರುತ್ತವೆ ಎಂದು ಭಕ್ತರು ನಂಬುತ್ತಾರೆ.

ವರ್ಷವಿಡೀ ದೇವಾಲಯದಲ್ಲಿ ವಿಶೇಷ ಪೂಜೆಗಳನ್ನು ನಡೆಸಲಾಗುತ್ತದೆ ಹಾಗೂ ಧಾರ್ಮಿಕ ಹಬ್ಬಗಳನ್ನು ಆಚರಿಸಲಾಗುತ್ತದೆ. ಈ ದೇವಾಲಯವನ್ನು 1425 ರಲ್ಲಿ ವಿಜಯನಗರ ಕಾಲದಲ್ಲಿ ನಿರ್ಮಿಸಲಾಗಿದ್ದು ಇದು ಸುಮಾರು 600 ವರ್ಷಗಳ ಇತಿಹಾಸವನ್ನು ಹೊಂದಿದ್ದು,
ವೃಷಭಾವತಿ ಮತ್ತು ಪಶ್ಚಿಮಾವತಿ ನದಿಗಳ ಸಂಗಮ ಸ್ಥಳವಾಗಿದೆ. ದಕ್ಷಿಣ ಭಾರತದ ಬಹಳಷ್ಟು ಕಡೆಗಳಲ್ಲಿ ವಿಜಯನಗರದ ಗುರುಗಳಾಗಿದ್ದ ವ್ಯಾಸರಾಯರು ಆಂಜನೇಯ ಸ್ವಾಮಿಯನ್ನು ಪ್ರತಿಷ್ಠಾಪಿಸಿದರು. ಅದರಂತೆ ಇಲ್ಲಿ ಕೂಡ ಸ್ಥಾಪಿಸಿದರೆಂದು ಸ್ಥಳೀಯ ಇತಿಹಾಸ ತಿಳಿಸುತ್ತದೆ.ಅವರು 732 ಹನುಮಂತನ ವಿಗ್ರಹಗಳನ್ನು ಸ್ಥಾಪಿಸಿದ್ದಾರೆ ಎಂದು ಹೇಳಲಾಗುತ್ತದೆ. ಮೊದಲಿಗೆ ಈ ಆಂಜನೇಯ ಸ್ವಾಮಿಗೆ ಯಾವುದೇ ದೇವಾಲಯವಿರಲಿಲ್ಲ.
ಸ್ವಾಮಿಯ ಮೂರ್ತಿ ಬಯಲಿನಲ್ಲಿ ಇದ್ದ ಕಾರಣ ಗಾಳಿ ಆಂಜನೇಯ ಎಂಬ ಹೆಸರು ಬಂದಿದೆ. ದುಷ್ಟ ಶಕ್ತಿ ಹಾಗೂ ಕೆಟ್ಟ ಗಾಳಿ ನಿವಾರಿಸುವ ಆಂಜನೇಯ ಸ್ವಾಮಿ ಎಂದೇ ಇದು ಪ್ರಸಿದ್ಧಿಯಾಗಿದೆ. ಹೊಸ ವಾಹನ ಖರೀದಿಸಿದ ಪ್ರತಿಯೊಬ್ಬರು ಇಲ್ಲಿಗೆ ಭೇಟಿ ನೀಡಿ ಪೂಜಿಸಿಕೊಳ್ಳುತ್ತಾರೆ.

ಆಂಜನೇಯಸ್ವಾಮಿಯ ಎರಡೂ ಬದಿಗಳಲ್ಲಿ ಶಂಖ ಹಾಗೂ ಚಕ್ರಗಳಿವೆ. ಕೈಯಲ್ಲಿ ಪದ್ಮಕಮಲವಿದೆ.
ಪ್ರತಿ ಮಂಗಳವಾರ ಮತ್ತು ಶನಿವಾರ ವಿಶೇಷ ಪೂಜೆ ನಡೆಯುತ್ತದೆ. ಗಾಳಿ ಆಂಜನೇಯ ದೇವಸ್ಥಾನ ಎತ್ತರದ ಗೋಪುರವನ್ನು ಹೊಂದಿದ್ದು ಇಲ್ಲಿ ದೇವರು ಪಶ್ಚಿಮಕ್ಕೆ ಮುಖಮಾಡಿ ಶ್ರೀರಾಮನ ಪರಿವಾರವನ್ನು ಕಾಣುತ್ತಿದ್ದಾನೆ. ಇಲ್ಲಿ ಪವಿತ್ರ ದಾರವನ್ನು ಭಕ್ತರಿಗೆ ಪ್ರಸಾದ ಎಂದು ನೀಡಲಾಗುತ್ತದೆ. ಇಲ್ಲಿ ಭಗವಂತನ ಬಾಲದ ಕೊನೆಯಲ್ಲಿ ಒಂದು ಗಂಟೆಯನ್ನು ಕಟ್ಟಿದ್ದು ಇದು ಶ್ರೀ ವ್ಯಾಸರಾಜರ ಶಾಂತಿ ಶೈಲಿಯನ್ನು ಸೂಚಿಸುತ್ತದೆ. ಆಂಜನೇಯನ ವಿಗ್ರಹದ ಎಡಗೈ ಸೊಂಟದ ಮೇಲೆ ವಿಶ್ರಾಂತಿ ಪಡೆಯುತ್ತಾ ಹೂವನ್ನು ಹಿಡಿದಿದೆ ಹಾಗೂ ಬಲಗೈಯಲ್ಲಿ ಅಭಯ ಮುದ್ರೆಯನ್ನು ಹಿಡಿದು ತನ್ನ ಎಲ್ಲಾ ಭಕ್ತರಿಗೆ ಆಶೀರ್ವಾದ ನೀಡುತ್ತಿದೆ. ಗಾಳಿ ಆಂಜನೇಯ ದೇವಾಲಯದ ರಥ ಯಾತ್ರೆಯು ಕಳೆದ 120 ವರ್ಷಗಳಿಂದ ನಡೆಯುತ್ತಿದೆ. ಈ ಸಮಯದಲ್ಲಿ ಸಾವಿರಾರು ಭಕ್ತರು ದೇವಾಲಯಕ್ಕೆ ಭೇಟಿ ನೀಡುತ್ತಾರೆ.

ಇಲ್ಲಿ 135 ವರ್ಷಗಳಿಂದ ಶ್ರೀ ರಾಮ ನವಮಿ ಸಂದರ್ಭದಲ್ಲಿ 9 ದಿನಗಳ ಕಾಲ ಶ್ರೀ ಪಂಚರಾತ್ರಾಗಮ ಬ್ರಹ್ಮರಥೋತ್ಸವ ವಿಜೃಂಭಣೆಯಿಂದ ನಡೆಯುತ್ತದೆ.
ಹನುಮ ಜಯಂತಿ ಹಾಗೂ ಭೀಮನ ಅಮಾವಾಸ್ಯೆಯಂದು ವಿಶೇಷ ಪೂಜೆ ನಡೆಯುತ್ತದೆ. ದೇವಸ್ಥಾನದಲ್ಲಿ ಪ್ರತಿ ಶನಿವಾರ ವಿಶೇಷ ಅಭಿಷೇಕ, ಪೂಜೆ, ಸಂಗೀತ, ಭಜನೆ, ಪ್ರಸಾದ ವಿತರಣೆ ಮುಂತಾದವು ಇರುತ್ತದೆ. ದೇವರಿಗೆ ಬೆಣ್ಣೆ ಅಲಂಕಾರವನ್ನು ಕೂಡ ನಡೆಸಲಾಗುತ್ತದೆ. ಈ ಸಮಯದಲ್ಲಿ ವಿಗ್ರಹವನ್ನು ಬೆಣ್ಣೆಯಿಂದ ಅಲಂಕರಿಸಲಾಗುತ್ತದೆ.
ಗಾಳಿ ಆಂಜನೇಯ ದೇವಸ್ಥಾನದಲ್ಲಿ ಶ್ರೀ ವೇಣುಗೋಪಾಲಸ್ವಾಮಿ, ಶ್ರೀರಾಮ, ಗಣಪತಿ ಮತ್ತು ನವಗ್ರಹ ದೇವಾಲಯಗಳಿವೆ. ಈ ದೇವಾಲಯವು ಎಲ್ಲಾ ದಿನಗಳಲ್ಲಿ ಬೆಳಗ್ಗೆ 6 ರಿಂದ ರಾತ್ರಿ 8.30 ರವರೆಗೆ ತೆರೆದಿರುತ್ತದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now