Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

5 ವರ್ಷದೊಳಗಿನ ಮಕ್ಕಳ ಪೋಷಕರಿಗೆ ಮುಖ್ಯ ಮಾಹಿತಿ: ಇಂದಿನಿಂದ ಜು.1 ರವರೆಗೆ ಪಲ್ಸ್ ಪೋಲಿಯೋ

---Advertisement---

ಬೆಂಗಳೂರು.ಜೂನ್.28: ರಾಜ್ಯಾದ್ಯಂತ ಇಂದಿನಿಂದ ಜುಲೈ 1ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಐದು ವರ್ಷದೊಳಗಿನ ಪುಟ್ಟ ಕಂದಮ್ಮಗಳಿಗೆ ಪೋಲಿಯೋ ಹನಿ ಹಾಕಲು ಆರೋಗ್ಯ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಇಂದು ಬೆಳಗ್ಗೆ 8 ಗಂಟೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ಮಹತ್ವದ ಜನಹಿತ ಕಾರ್ಯಕ್ರಮಕ್ಕೆ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ಈ ಬಾರಿಯ ಅಭಿಯಾನದಲ್ಲಿ ರಾಜ್ಯದ ಒಟ್ಟು 64.84 ಲಕ್ಷ ಮಕ್ಕಳಿಗೆ ಲಸಿಕೆ ತಲುಪಿಸುವ ಬೃಹತ್ ಗುರಿಯನ್ನು ಹೊಂದಲಾಗಿದೆ.

ಮಕ್ಕಳಿಗೆ ಲಸಿಕೆ ನೀಡಲು ಅನುಕೂಲವಾಗುವಂತೆ ರಾಜ್ಯಾದ್ಯಂತ ಒಟ್ಟು 36,076 ಪೋಲಿಯೋ ಬೂತ್ಗಳನ್ನು ಸ್ಥಾಪಿಸಲಾಗಿದೆ. ಇದಲ್ಲದೆ ಕಷ್ಟಕರವಾದ ಗುಡ್ಡಗಾಡು ಪ್ರದೇಶಗಳಲ್ಲಿರುವ ಜನರನ್ನು ತಲುಪಲು 988 ವಿಶೇಷ ತಂಡಗಳನ್ನು ರಚಿಸಲಾಗಿದೆ. ಇನ್ನು ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ ಸೇರಿದಂತೆ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ಸಂಚರಿಸುವ ಮಕ್ಕಳಿಗೆ ಲಸಿಕೆ ನೀಡಲು 2,125 ಟ್ರಾನ್ಸಿಟ್ ತಂಡಗಳನ್ನು ನಿಯೋಜಿಸಲಾಗಿದೆ. ಈ ಬೃಹತ್ ಕಾರ್ಯಕ್ರಮದ ಯಶಸ್ಸಿಗಾಗಿ 1.14 ಲಕ್ಷ ಆರೋಗ್ಯ ಕಾರ್ಯಕರ್ತರು ಶ್ರಮಿಸುತ್ತಿದ್ದು, ಇವರ ಮೇಲ್ವಿಚಾರಣೆಗಾಗಿ 7,197 ಸೂಪರ್ವೈಸರ್ಗಳನ್ನು ನೇಮಕ ಮಾಡಲಾಗಿದೆ.

ಸಾರ್ವಜನಿಕರ ಹತ್ತಿರದ ಪ್ರದೇಶಗಳಾದ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ನಮ್ಮ ಕ್ಲಿನಿಕ್ಗಳು, ಸರ್ಕಾರಿ ಆಸ್ಪತ್ರೆಗಳು, ಅಂಗನವಾಡಿಗಳು ಮತ್ತು ಶಾಲೆಗಳಲ್ಲಿ ಪೋಲಿಯೋ ಕೇಂದ್ರಗಳನ್ನು ತೆರೆಯಲಾಗಿದೆ. ಇದರೊಂದಿಗೆ ಮಾಲ್ಗಳು, ಪ್ರಮುಖ ಉದ್ಯಾನವನಗಳು, ಖಾಸಗಿ ಆಸ್ಪತ್ರೆಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿಯೂ ಸ್ಥಿರ ಹಾಗೂ ಸಂಚಾರಿ ಲಸಿಕಾ ಕೇಂದ್ರಗಳು ಕಾರ್ಯನಿರ್ವಹಿಸಲಿವೆ. ಪೋಷಕರು ತಮ್ಮ 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೋ ಹನಿ ಹಾಕಿಸುವ ಮೂಲಕ ಈ ಅಭಿಯಾನವನ್ನು ಯಶಸ್ವಿಗೊಳಿಸಬೇಕಾಗಿ ಕೋರಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now