ಪ್ಯಾರಿಸ್.ಜೂನ್.28: ಫ್ರಾನ್ಸ್ ನ ನ್ಯಾನ್ಸಿ ಬಳಿಯ ತಂಬ್ಲೈನ್ ನಲ್ಲಿ ಭಾನುವಾರ ಸ್ಕೈಡೈವರ್ ಗಳನ್ನು ಹೊತ್ತೊಯ್ಯುತ್ತಿದ್ದ ನಾಗರಿಕ ವಿಮಾನವೊಂದು ಪತನಗೊಂಡಿದ್ದು, ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ತುರ್ತು ರಕ್ಷಣಾ ಸೇವಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಫ್ರೆಂವಿಮಾನದಲ್ಲಿ ಸ್ಕೈಡೈವರ್ ಗಳ ಗುಂಪೊಂದು ಪ್ರಯಾಣಿಸುತ್ತಿದ್ದಾಗ ಈ ದುರಂತ ಸಂಭವಿಸಿದೆ.
ದುರಂತದಲ್ಲಿ ಭಾರಿ ಪ್ರಮಾಣದ ಪ್ರಾಣಹಾನಿಯಾಗಿದೆ. ಅಲ್ಲದೆ, ಪತನಗೊಂಡಿರುವ ವಿಮಾನವು ಸ್ಫೋಟಗೊಳ್ಳುವ ಹೆಚ್ಚಿನ ಅಪಾಯವಿದ್ದು, ಸ್ಥಳದಲ್ಲಿ ತೀವ್ರ ಆತಂಕದ ವಾತಾವರಣ ನಿರ್ಮಾಣವಾಗಿದೆ ಎಂದು ಎಚ್ಚರಿಸಲಾಗಿದೆ. ಸದ್ಯಕ್ಕೆ ಅಧಿಕಾರಿಗಳು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಶ್ರಮಿಸುತ್ತಿದ್ದು, ಅಪಘಾತಕ್ಕೆ ನಿಖರವಾದ ಕಾರಣವೇನೆಂಬುದು ಇನ್ನು ತಿಳಿದುಬರಬೇಕಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











