ಸುದ್ದಿಒನ್, ಚಿತ್ರದುರ್ಗ, ಜೂನ್. 28 : ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿರುವ ಆಧ್ಯಾತ್ಮಿಕ ಸಾಧಕ, ಈಶ ಫೌಂಡೇಶನ್ ನ ಸ್ಥಾಪಕರಾದ ಸದ್ಗುರು ಶ್ರೀ ಜಗ್ಗಿ ವಾಸುದೇವ್ ಅವರು ಜುಲೈ 01 ರಂದು ಚಿತ್ರದುರ್ಗಕ್ಕೆ ಬೇಟಿ ನೀಡಲಿದ್ದಾರೆ,
ಅಂದು ಬೆಳಿಗ್ಗೆ 10 ಗಂಟೆಗೆ ಹೆಲಿಕಾಫ್ಟರ್ ಮೂಲಕ ಚಿತ್ರದುರ್ಗಕ್ಕೆ ಆಗಮಿಸಿ ಶ್ರೀ ಶಿವಶರಣ ಮಾದರ ಚನ್ನಯ್ಯ ಗುರುಪೀಠಕ್ಕೆ ಬೇಟಿ ನೀಡಿ ಪೀಠಾಧ್ಯಕ್ಷರಾದ
ಡಾ. ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮಿಜಿಗಳೊಂದಿಗೆ 30 ನಿಮಿಷಗಳ ಕಾಲ ಸೌಹಾರ್ದ ಚರ್ಚೆ ನಡೆಸಲಿದ್ದಾರೆ.
ನಂತರ ಮುರುಘಾಮಠದ ಅನುಭವ ಮಂಟಪ ಸಭಾಂಗಣದಲ್ಲಿ ನಡೆಯುವ “ಶರಣರ ದೃಷ್ಟಿಯಲ್ಲಿ ಯೋಗ ವಿಜ್ಞಾನ” ಎಂಬ ವಿಷಯ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಈ ವೇದಿಕೆಯಲ್ಲಿ ಚಿತ್ರದುರ್ಗ ಕಬೀರಾನಂದ ಆಶ್ರಮದ ಶ್ರೀಶಿವಲಿಂಗಾನಂದ ಮಹಾ ಸ್ವಾಮೀಜಿಗಳು ಉಪಸ್ಥಿತರಿರುವರು, ಮುರುಘಾಮಠದ ಆಡಳಿತ ಮಂಡಳಿ ಸದಸ್ಯರಾದ ಡಾ.ಶ್ರೀ ಬಸವಕುಮಾರ ಸ್ವಾಮೀಜಿಗಳ ದಿವ್ಯ ನೇತೃತ್ವದಲ್ಲಿ ಸಮಾರಂಭ ನೆರವೇರಲಿದೆ ಡಾ. ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಸಾನಿದ್ಯ ವಹಿಸುವರು. ಮುರುಘಾಮಠ ಹಾಗೂ ಜಗ್ಗಿ ವಾಸುದೇವ್ ಅವರ ಅನುಯಾಯಿಗಳು ಸದ್ಭಕ್ತರು, ಹೆಚ್ಚಿನ ಸಂಖ್ಯೆಯಲ್ಲಿ ಬಾಗವಹಿಸಬೇಕೆಂದು ಶಿವಶರಣ ಮಾದರ ಚನ್ನಯ್ಯ ಗುರುಪೀಠದ ಟ್ರಸ್ಟಿ ರವಿ ಮಲ್ಲಾಪುರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











