ಸುದ್ದಿಒನ್, ಚಿತ್ರದುರ್ಗ, ಜೂನ್. 28 : ಮುಸ್ಲಿಂ ಸಮುದಾಯದ ಯುವಕರು ನಿಜಕ್ಕೂ ಶ್ರಮಜೀವಿಗಳು, ಕಷ್ಟ ಪಟ್ಟು ದುಡಿದು ಜೀವನ ನಡೆಸುತ್ತಿದ್ದು, ಈ ಸಮಾಜ ಶಿಕ್ಷಣ ಪಡೆದು ಪ್ರಗತಿಯತ್ತ ಸಾಗಬೇಕು ಎಂದು ಜನಪರ ಹೋರಾಟಗಾರ, ಕರ್ನಾಟಕ ಶಾಂತಿ ಮತ್ತು ಸೌಹಾರ್ದ ವೇದಿಕೆ ಅಧ್ಯಕ್ಷ ನರೇನಹಳ್ಳಿ ಅರುಣ್ ಕುಮಾರ್ ಕರೆ ನೀಡುದರು.
ನಗರದ ವಾಲ್ಮೀಕಿ ಭವನದಲ್ಲಿ ಭಾನುವಾರ ಮುಸ್ಲಿಂ ಕಲ್ಚರಲ್ ಅಕಾಡೆಮಿವತಿಯಿಂದ ಆಯೋಜಿಸಲಾಗಿದ್ದ ಎಸ್ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟನೆ ಮಾಡಿ ಅವರು ಮಾತನಾಡಿದರು.
ದಲಿತ, ಮುಸ್ಲಿಂ ಸಮುದಾಯದವರು ರಾಜಕಾರಣಿಗಳನ್ನು ಬೆಂಬಲಿಸಿಕೊಂಡು ಕೂರುವ ಬದಲು ಸಾಮಾಜಿಕ ಸುಧಾರಕರಾದ ನಾಡ ದೊರೆ ನಾಲ್ವಡಿ ಕೃಷ್ಣರಾಜ ಒಡೆಯರ್, ನಾರಾಯಣಗುರು, ಜ್ಯೋತಿಬಾ ಪುಲೆ, ಶಾಹುಮಹಾರಾಜ್, ಅಬ್ದುಲ್ ಕಲಾಂ,
ಡಾ ಬಾಬಾಸಾಹೇಬ್ ಅಂಬೇಡ್ಕರ್ ರಂತಹ ಮಹನೀಯರನ್ನ ಆದರ್ಶ ವಾಗಿ ತೆಗೆದುಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಹೇಳಿದರು.
ಶಿಕ್ಷಣ ಮಾತ್ರ ಸಮಾಜವನ್ನು ಮತ್ತು ವೈಯಕ್ತಿಕ ಬದುಕನ್ನು ರೂಪಿಸಲು ಸಾಧ್ಯ. ಹಾಗಾಗಿ ಪ್ರತಿಯೊಬ್ಬರು ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಿ ಎಂದು ನುಡಿದರು.
ರಾಜಕಾರಣದ ಬೆನ್ನು ಬೀಳುವುದನ್ನು ಕೃೆಬಿಟ್ಟು ಸಮುದಾಯದ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಬೇಕು.
ಎಸ್ ಐ ಆರ್ ಬಗ್ಗೆ ಜಾಗ್ರತೆಯಿಂದ ಕೆಲಸ ಮಾಡಿ. ಯಾರು ಕೂಡ ಅದರಿಂದ ದೂರ ಉಳಿಯದಂತೆ ನೋಡಿಕೊಳ್ಳಬೇಕು ಎಂದು ಅರುಣ್ ಕುಮಾರ್ ಹೇಳಿದರು.
ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಂ.ಕೆ. ತಾಜ್ ಪೀರ್ ಮಾತನಾಡಿ, ಇಂದು ಪ್ರತಿಯೊಬ್ಬರೂ ಸಹ ಶಿಕ್ಷಣದ ಮಹತ್ವ ಅರಿತುಕೊಳ್ಳಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾಗಿದೆ. ನಮ್ಮ ಆಸ್ತಿತ್ವ ಉಳಿಸಿಕೊಂಡು ಸಾಮಾಜಿಕ, ರಾಜಕೀಯವಾಗಿಯೂ ಮುನ್ನಡೆಯಬೇಕು ಎಂದರು.
ಮುಸ್ಲಿಂ ಸಮಾಜದಲ್ಲಿ ಸಾಕಷ್ಟು ಪ್ರತಿಭೆಗಳಿವೆ, ಉನ್ನತ ವಿದ್ಯಾಭ್ಯಾಸ ಮಾಡಿ ಸಮಾಜ ಮತ್ತು ದೇಶದ ಸೇವೆಯಲ್ಲಿ ತೊಡಗಿರುವವರ ಸಂಖ್ಯೆಯೂ ಹೆಚ್ಚಾಗಿದೆ. ಅವಕಾಶಗಳು ಸಿಕ್ಕಾಗ ಅದನ್ನು ಸದುಪಯೋಗ ಮಾಡಿಕೊಂಡು ಬದುಕು ಉತ್ತಮ ಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಕರುನಾಡ ರಕ್ಷಣಾ ವೇದಿಕೆ ರಾಜ್ಯ ಸಂಸ್ಥಾಪಕ ಅಧ್ಯಕ್ಷ ಡಾ. ಸೈಯದ್ ಇಸ್ಮಾಯಿಲ್ ಮಾತಾನಾಡಿ, ಮುಸ್ಲಿಂ ಸಮಾಜ ಎಲ್ಲರ ಜೊತೆ ಉತ್ತಮ ಬಾಂಧವ್ಯ ಬೆಳೆಸುವ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಸ್ವಾವಲಂಬನೆಯ ಬದುಕು ನಡೆಸಿಕೊಂಡು ಬಂದಿದೆ. ಈ ಸಮಾಜ ಪ್ರತಿಭೆಗಳಿಗೆ ಗುರುತಿಸಿ ಉತ್ತೇಜನ ನೀಡುತ್ತಾ ಬಂದಿರುವ ಯುವ ಮುಖಂಡ, ಸಾಮಾಜಿಕ ಕಾಳಜಿಯನ್ನು ಮೈಗೂ ಡಿಸಿಕೊಂಡಿರುವ ಹನೀಫ್ ಅವರ ಸೇವಾ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದರು.
ಜಿಲ್ಲಾ ಬಡಗಿ ನೌಕರರ ಸಂಘದ ಅಧ್ಯಕ್ಷ ಎ ಜಾಕೀರ್ ಹುಸೇನ್ ಮಾತನಾಡಿ, ಸಮಾಜದಲ್ಲಿ ನೊಂದವರು, ಅವಕಾಶ ವಂಚಿತರು ಮತ್ತು ಬಡವರ ಕಲ್ಯಾಣ ಕಾರ್ಯಕ್ರಮಗಳಿಗೆ ಎಲ್ಲರೂ ನೆರವು ನೀಡಬೇಕು. ಇದು ಒಂದು ರೀತಿಯಲ್ಲಿ ಪುಣ್ಯದ ಕೆಲಸವೂ ಆಗಿದೆ ಎಂದರು.
ಮುಸ್ಲಿಂ ಕಲ್ಚರಲ್ ಅಕಾಡೆಮಿ ಅಧ್ಯಕ್ಷ ಎಂ ಹನೀಫ್ ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡಿದರು.
ಟಿಪ್ಪು ಅಭಿಮಾನಿಗಳ ಮಹಾ ಸಂಘದ ರಾಜ್ಯಧ್ಯಕ್ಷ ಟಿಪ್ಪು ಖಾಸಿಂ ಅಲಿ, ಮುಸ್ಲಿಂ ಹಾಸ್ಟೆಲ್ ಅಧ್ಯಕ್ಷ ನಾಯಜ್ ಭಾಷಾ,ಮುಸ್ಲಿಂ ಕಲ್ಚರಲ್ ಅಕಾಡೆಮಿಯ ನವೀದ್ ಅಬ್ದುಲ್ಲಾ ಮುಖಾಂಡಾರದ ಮುದಸೀರ್, ಶಬ್ಬೀರ್ ಭಾಷಾ,ಮುನಿರಾ,ಇನ್ನಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.













