Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸ್ಲಂ ಜನರ ಮಕ್ಕಳ ಶಿಕ್ಷಣಕ್ಕೆ ಸರ್ಕಾರ ಒತ್ತು ನೀಡಬೇಕ : ಜಿ.ಎಸ್.ಮಂಜುನಾಥ್

---Advertisement---

ಸುದ್ದಿಒನ್, ಚಿತ್ರದುರ್ಗ, ಜೂ. 27: ಸ್ಲಂ ಗಳಲ್ಲಿ ವಾಸವಾಗಿರುವ ಜನರ ಮಕ್ಕಳ ಶಿಕ್ಷಣಕ್ಕೆ ಸರ್ಕಾರ ವಿಶೇಷ ಒತ್ತು ನೀಡಿದರೆ, ಪ್ರತಿಯೊಬ್ಬರಿಗೂ ಶಿಕ್ಷಣ ಸಿಗುತ್ತದೆ ಎಂದು ಆದಿ ಜಾಂಬವ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ್ ಹೇಳಿದರು.

ಭಾರತಸೇವಾದಳ ಸಭಾಂಗಣದಲ್ಲಿ ಸ್ಲಂ ಜನರ ಸಂಘಟನೆ ಕರ್ನಾಟಕ ಇವರ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಉಚಿತ ನೋಟ್‍ಬುಕ್ ವಿತರಣಾ ಸಮಾರಂಭದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಯಾವುದೇ ಸ್ಲಂ ಗಳಲ್ಲಿ ಜಾತಿ, ಧರ್ಮ, ಮತ, ಪಂಥವನ್ನು ಮೀರಿ, ಎಲ್ಲಾ ಜಾತಿ ಜನಾಂಗದವರು ವಾಸವಾಗಿರುತ್ತಾರೆ. ಹಾಗೆಯೇ ಇಲ್ಲಿ ವಾಸವಾಗಿರುವ ಎಲ್ಲಾ ಜಾತಿಯವರು ಕೂಡ ಬಡವರಾಗಿದ್ದು, ಅವರ ಮಕ್ಕಳ ಶಿಕ್ಷಣಕ್ಕೆ ಸರ್ಕಾರ ವಿಶೇಷ ಒತ್ತು ನೀಡಿದರೆ, ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯದಂತೆ ಸಮಾಜದಲ್ಲಿ ಸಮಾನತೆಯನ್ನು ತರಬಹುದು ಎಂದು ಜಿ.ಎಸ್.ಮಂಜುನಾಥ್ ನುಡಿದರು.

 

ಸ್ಲಂ ಜನರ ಸಂಘಟನೆ ಕರ್ನಾಟಕದ ವತಿಯಿಂದ ಹಮ್ಮಿಕೊಂಡಿರುವ ಉಚಿತ ನೋಟ್ ಬುಕ್ ವಿತರಣಾ ಸಮಾರಂಭವು ಅತ್ಯುತ್ತಮ ಮತ್ತು ಜನ ಪರ ಕಾರ್ಯಕ್ರಮವಾಗಿದ್ದು, ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನನಗೂ ಸಂತೋಷವಾಗುತ್ತದೆ. ಇದರಲ್ಲಿ ಭಾಗವಹಿಸಲು ಅವಕಾಶ ಮಾಡಿಕೊಟ್ಟ ಮಾಜಿ ನಗರಸಭಾ ಅಧ್ಯಕ್ಷ ಸಿ.ಟಿ.ಕೃಷ್ಣಮೂರ್ತಿ ಮತ್ತು ಮಂಜಣ್ಣ ಇವರುಗಳಿಗೆ ಅಭಿನಂದನೆ ಹೇಳುವ ಅಗತ್ಯವಿದೆ ಎಂದು ಹೇಳಿದರು.

 

ಸ್ಲಂ ಜನರ ಸಂಘಟನೆಯಿಂದ ಹಮ್ಮಿಕೊಳ್ಳಲಾಗಿರುವ ಈ ಕಾರ್ಯಕ್ರಮವು ಜನಪರವಾಗಿದ್ದು, ನಿಜಕ್ಕೂ ಕೂಡ ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಿ, ಸಂಘಟಿಸಿರುವಂತಹ ಕಾರ್ಯಕ್ರಮ ಸಮಾಜಕ್ಕೆ ಪೂರಕವಾಗಿದೆ. ಶಾಲಾ, ಕಾಲೇಜು ಮತ್ತು ಹಾಸ್ಟೆಲ್‍ಗಳಲ್ಲಿ ಸ್ಲಂ ಮಕ್ಕಳಿಗೆ ವಿಶೇಷ ಆದ್ಯತೆ ನೀಡಿದರೆ, ಪ್ರತಿಭಾನ್ವಿತ ಮಕ್ಕಳನ್ನು ಸಮಾಜ ನೋಡಬಹುದು ಎಂದು ಹೇಳಿದರು.

 

ಕರ್ನಾಟಕ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಕೋಟೆ ಮಂಜುನಾಥ್ ಮಾತನಾಡಿ, ಸ್ಲಂ ಮಕ್ಕಳ ಶಿಕ್ಷಣಕ್ಕೆ ನೆರವು ನೀಡುವುದು ನಿಜಕ್ಕೂ ಕೂಡ ಪುಣ್ಯದ ಕೆಲಸ. ಈ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವಂತೆ, ಅನುವು ಮಾಡಿಕೊಟ್ಟ ಸ್ಲಂ ಸಂಘಟನೆಯ ಎಲ್ಲಾ ಕಾರ್ಯಕರ್ತರಿಗೂ ಅಭಾರಿಯಾಗಿದ್ದೇನೆ ಎಂದರು.
ಇನ್ನು ಮುಂದೆ ಸ್ಲಂ ಜನರಿಗಾಗಿ ನಡೆಯುವಂತಹ ಯಾವುದೇ ಕಾರ್ಯಕ್ರಮಗಳಿದ್ದರೂ ತಾವು ಸಕ್ರಿಯವಾಗಿ ಭಾಗವಹಿಸಿ ಜನರಿಗೆ ತಮ್ಮ ಕೈಲಾದಷ್ಟು ಸೇವೆಯನ್ನು ಮಾಡುವುದಾಗಿ ಕೋಟೆ ಮಂಜುನಾಥ್ ಭರವಸೆ ನೀಡಿದರು.

 

ನಗರಸಭೆಯ ಮಾಜಿ ಅಧ್ಯಕ್ಷ ಸಿ.ಟಿ.ಕೃಷ್ಣಮೂರ್ತಿ ಮಾತನಾಡಿ, ಸ್ಲಂ ಜನರ ಸಂಘಟನೆಯ ಕಾರ್ಯಕರ್ತರು ಹಲವಾರು ವರ್ಷಗಳಿಂದ ತಮ್ಮ ಸಂಪರ್ಕದಲ್ಲಿದ್ದು, ಈ ಜನರಿಗಾಗಿ ಸರ್ಕಾರ ಜಿಲ್ಲಾಡಳಿತ ಮತ್ತು ನಗರಸಭೆ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಟಾನಕ್ಕೆ ತರುವ ಅಗತ್ಯವಿದೆ ಎಂದು ತಿಳಿಸಿದರು.

 

ಸ್ಲಂ ಜನರ ಸಂಘಟನೆಯ ರಾಜ್ಯಾಧ್ಯಕ್ಷ ಐಸಕ್ ಅಮೃತ್ ರಾಜ್ ಅವರು ಮಾತನಾಡಿ, ಸ್ಲಂ ಜನರ ಸಂಘಟನೆಯನ್ನು ರಾಜ್ಯದ ಹದಿನೇಳು ಜಿಲ್ಲೆಗಳಲ್ಲಿ ಈಗಾಗಲೇ ಸಂಘಟನೆ ಮಾಡಲಾಗಿದ್ದು, ತಮ್ಮ ಹಕ್ಕುಗಳಿಗಾಗಿ ಜನರೇ ಬೀದಿಗಿಳಿದು ಹೋರಾಟ ಮಾಡುವ ಮೂಲಕ ತಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳುವ ಅಗತ್ಯವಿದೆ ಎಂದು ಹೇಳಿದರು.
ಸ್ಲಂ ಜನರಲ್ಲಿ ಯಾವುದೇ ರೀತಿಯ ತಾರತಮ್ಯಗಳಿಲ್ಲದೇ ಸಹ ಬದುಕನ್ನು ಮತ್ತು ಸಮಾನತೆ ಬದುಕನ್ನು ನಡೆಸಿಕೊಂಡು ಹೋಗಲಾಗುತ್ತಿದೆ. ಇಂತಹ ಜನರ ಸಂಘಟನೆ ಮಾಡುವ ಮೂಲಕ ಸ್ಲಂ ಜನರ ಸಂಘಟನೆ ಜನ ಪರವಾಗಿ ಕೆಲಸ ಮಾಡುತ್ತಿವೆ ಎಂದು ಅಮೃತ್ ರಾಜ್ ಹೇಳಿದರು.

 

ದೌರ್ಜನ್ಯ ತಡೆ ಕಾಯ್ದೆ ಸಮಿತಿಯ ಸದಸ್ಯ ಜೆ.ಜೆ.ಹಟ್ಟಿ ರಾಜಣ್ಣ ಅವರು ಮಾತನಾಡಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದ ಅನ್ವಯ ಎಲ್ಲಾ ಸಮುದಾಯದ ಜನರಲ್ಲಿ ಸಮಾನತೆ ತರುವಂತಹ ವಿಚಾರವನ್ನು ಸಂವಿಧಾನ ಬದ್ಧವಾಗಿ ನೀಡಿದ್ದು, ಆ ನಿಟ್ಟಿನಲ್ಲಿ ಸ್ಲಂ ಜನರು ಸಂಘಟಿತರಾಗಿ ತಮ್ಮ ಹಕ್ಕುಗಳಾಗಿ ಹೋರಾಟಮಾಡುವುದು ಅನಿವಾರ್ಯವಾಗಿದೆ ಎಂದು ಹೇಳಿದರು.

ಕರ್ನಾಟಕ ಶಾಂತಿ & ಸೌಹಾರ್ದ ವೇದಿಕೆಯ ರಾಜ್ಯಾಧ್ಯಕ್ಷ ನರೇನಹಳ್ಳಿ ಅರುಣ್‍ಕುಮಾರ್ ಅವರು ಮಾತನಾಡಿ, ಜಾತಿ, ಧರ್ಮ, ಮತ, ಪಂಥಗಳ ಪ್ರತ್ಯೇಕ ಸಭೆ ಸಮಾರಂಭಗಳು ನಡೆಸುವ ಮೂಲಕ ಸಮಾಜದಲ್ಲಿ ಅಸಮಾನತೆಯನ್ನು ಹುಟ್ಟು ಹಾಕುತ್ತಿರುವ ಜನರ ಮಧ್ಯೆ ಸ್ಲಂ ಜನರು ಸಂಘಟಿತರಾಗಿ ಬಹುತ್ವ ಭಾರತವನ್ನು ನಿರ್ಮಾಣ ಮಾಡುವ ನಿಟ್ಟಿನಲ್ಲಿ ಮತ್ತು ಬಾಬಾ ಸಾಹೇಬರ ಆಶಯದಂತೆ ಸಮಾನತೆಯನ್ನು ಬಿಂಬಿಸುವ ಉದ್ದೇಶದಿಂದ ಎಲ್ಲಾ ಜಾತಿ, ಧರ್ಮದವರು ಒಂದಾಗಿ ಮಕ್ಕಳ ಶಿಕ್ಷಣಕ್ಕಾಗಿ ಹೋರಾಟವನ್ನು ರೂಪಿಸುತ್ತಿರುವುದು ನಿಜಕ್ಕೂ ಕೂಡ ಸಂವಿಧಾನಬದ್ಧವಾಗಿದೆ. ಆದ್ದರಿಂದ ಪ್ರತಿಯೊಬ್ಬರು ಕೂಡ ಸ್ಲಂ ಜನರ ಸಂಘಟನೆಯ ಜೊತೆಗೆ ಕೈಜೋಡಿಸಬೇಕು ಎಂದು ಸಲಹೆ ನೀಡಿದರು.

 

ಹಿರಿಯ ವಕೀಲರಾದ ಮಲ್ಲೇಶಪ್ಪ ಟಿ. ಅವರು ಮಾತನಾಡಿ, ಸ್ಲಂ ಜನರು ಜಾಗೃತರಾಗಿ ಏನು ನಾಳೆ ಇಪ್ಪತ್ತೊಂಭತ್ತರಿಂದ ಎಸ್.ಐ.ಆರ್. ಕುರಿತು ಜಾಗೃತಿ ಮಾಹಿತಿಯನ್ನು ನೀಡಬೇಕಾದ ಅಗತ್ಯವಿದೆ ಎಂದು ಹೇಳಿದರು. ಯಾರೂ ಕೂಡ ಎಸ್.ಐ.ಆರ್.ನಿಂದ ಹೊರ ಉಳಿಯಬಾರದು, ಪ್ರತಿಯೊಬ್ಬರು ತಮ್ಮ ಅರ್ಜಿ ಫಾರಂ ಅನ್ನು ಸ್ಪಷ್ಟವಾಗಿ ತುಂಬಿಸುವ ಮೂಲಕ ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಬೇಕೆಂದು ಹೇಳಿದರು.

 

ಉಚಿತ ನೋಟ್ ಪುಸ್ತಕ ವಿತರಣಾ ಸಮಾರಂಭದಲ್ಲಿ ರೈಟರ್ ಆನಂದ್ ಕುಮಾರ್, ಗ್ರಾಮಪಂಚಾಯಿತಿ ಮಾಜಿ ಉಪಾಧ್ಯಕ್ಷ ಮಲ್ಲಿಕಾರ್ಜುನ, ಸ್ಲಂ ಜನರ ಸಂಘಟನೆಯ ಜಿಲ್ಲಾಧ್ಯಕ್ಷ ಮಂಜಣ್ಣ ಟಿ., ಜಿಲ್ಲಾಧ್ಯಕ್ಷ ಎಂ.ಮಹೇಶ, ಮಂಜುನಾಥ, ಮಹಿಳಾ ಮುಖಂಡರಾದ ವರಲಕ್ಷ್ಮಿ, ಮಾಲತಿ, ಹೀನಾಕೌಸರ್, ಭಾಗ್ಯಮ್ಮ, ಲಕ್ಷ್ಮಿ, ರಕ್ಷಿತಾ, ರೇಷ್ಮಾ ಮುಂತಾದವರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಸ್ಲಂ ಜನರ ಸಂಘಟನೆಯ ಟಿ.ಮಂಜಣ್ಣ ಕಾರ್ಯಕ್ರಮವನ್ನು ನಿರೂಪಿಸಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now