Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ: ಜುಲೈ 31 ಕೊನೆಯ ದಿನ

---Advertisement---

ಚಿತ್ರದುರ್ಗ. ಜೂನ್. 29: 2026-27ನೇ ಸಾಲಿನಲ್ಲಿ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಜಿಲ್ಲೆಯ ಬಹುವಾರ್ಷಿಕ ತೋಟಗಾರಿಕೆ ಬೆಳೆಗಳಾದ ಅಡಿಕೆ, ದಾಳಿಂಬೆ ಮತ್ತು ಮಾವು ಬೆಳೆಗಳಿಗೆ ಜಿಲ್ಲೆಯ ಎಲ್ಲಾ ತಾಳ್ಲೂಕುಗಳಲ್ಲಿ ಅನುಷ್ಠಾನಗೊಳಿಸಲಾಗಿದ್ದು, ವಿಮೆ ನೋಂದಣಿಗೆ ಜುಲೈ 31 ಕೊನೆಯ ದಿನವಾಗಿದೆ.

ಸ್ಥಳೀಯವಾಗಿ ಲಭ್ಯವಿರುವ ಟೆಲಿಮೆಟ್ರಿಕ್ ಮಳೆ ಮಾಪನ ಕೇಂದ್ರಗಳಲ್ಲಿ ದಾಖಲಾಗುವ ಹವಾಮಾನ ಅಂಶಗಳಾದ ಮಳೆಯ ಪ್ರಮಾಣ, ಮಳೆಯ ಹಂಚಿಕೆ, ತಾಪಮಾನ, ಗಾಳಿಯ ವೇಗ ಮತ್ತು ಆದ್ರ್ರತೆ ಇತ್ಯಾದಿ ಮಾಹಿತಿಗಳ ಆಧಾರದ ಮೇಲೆ ಬೆಳೆ ವಿಮೆ ನಷ್ಟವನ್ನು ತೀರ್ಮಾನಿಸಲಾಗುತ್ತದೆ. ಜಿಲ್ಲೆಗೆ ‘ರಿಲಯನ್ಸ್ ಇನ್ಶೂರೆನ್ಸ್ ಕಂಪನಿ’ಯನ್ನು ನಿಗದಿಪಡಿಸಲಾಗಿದೆ.
ಪ್ರತಿ ಹೆಕ್ಟೇರ್‍ಗೆ ಅಡಿಕೆ ಬೆಳೆಗೆ ₹1,28,000 ವಿಮಾ ಮೊತ್ತವಿದ್ದು, ರೈತರು ₹6,400 ಪ್ರೀಮಿಯಂ ಪಾವತಿಸಬೇಕಾಗುತ್ತದೆ. ದಾಳಿಂಬೆ ಬೆಳೆಗೆ ₹1,27,000 ವಿಮಾ ಮೊತ್ತಕ್ಕೆ ₹6,350 ಹಾಗೂ ಮಾವು ಬೆಳೆಗೆ ₹80,000 ವಿಮಾ ಮೊತ್ತಕ್ಕೆ ₹4,000 ಪ್ರೀಮಿಯಂ ಪಾವತಿಸಬೇಕಾಗತ್ತದೆ.

ವಿಮಾ ವ್ಯಾಪ್ತಿಗೆ ಒಳಪಡುವ ಬೆಳೆಗಳು ಫಸಲು ನೀಡುವ ಹಂತದಲ್ಲಿರಬೇಕು ಹಾಗೂ ಸಾಲ ಪಡೆದಿರುವ ಮತ್ತು ಸಾಲ ಪಡೆಯದ ಇಬ್ಬರೂ ರೈತರು ಈ ವಿಮೆಗೆ ಒಳಪಡಬಹುದು. ಆದರೆ, ನೋಂದಣಿ ಮಾಡಲು ಉದ್ದೇಶಿಸಿರುವ ಬೆಳೆಯು ಹಿಂದಿನ ವರ್ಷಗಳ ಅಥವಾ ಮುಂಗಾರಿನ ಬೆಳೆ ಸಮೀಕ್ಷೆಯಲ್ಲಿ ಕಂಡುಬರದಿದ್ದರೆ ಅಂತಹ ಬೆಳೆಗಳ ನೋಂದಣಿಗೆ ಅನುಮತಿ ಇರುವುದಿಲ್ಲ.
ಅರ್ಹ ರೈತರು ಪ್ರಸ್ತುತ ಸಾಲಿನ ಪಹಣಿ ಪತ್ರಿಕೆ, ಎಫ್.ಐ.ಡಿ ಸಂಖ್ಯೆ, ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಪಾಸ್ ಪುಸ್ತಕ (ಆಧಾರ್ ಜೋಡಣೆಯಾಗಿ ಎನ್.ಪಿ.ಸಿ.ಐ ಸಕ್ರಿಯವಾಗಿರಬೇಕು) ದಾಖಲೆಗಳೊಂದಿಗೆ ಹತ್ತಿರದ ಗ್ರಾಮ-1 ಕೇಂದ್ರ, ಬ್ಯಾಂಕುಗಳು ಅಥವಾ ಸಿ.ಎಸ್.ಸಿ ಕೇಂದ್ರಗಳಲ್ಲಿ ವಿಮೆ ಯೋಜನೆಗೆ ನೋಂದಾಯಿಸಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಹತ್ತಿರದ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳು ಅಥವಾ ಬ್ಯಾಂಕ್ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಉದ್ಯೋಗ ಸೃಷ್ಟಿ ಹಾಗೂ ಕೌಶಲ್ಯಾಭಿವೃದ್ಧಿಗೆ ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಕೈಗಾರಿಕಾ ಸಹಭಾಗಿತ್ವದ “ಹೈಪರ್-ಆಕ್ಟಿವ್ ಇನ್ನೋವೇಷನ್ ಹಬ್”ಗಳ ನಿರ್ಮಾಣ ಅತ್ಯಗತ್ಯ

ತೆಳ್ಳಗಿದ್ದರೆ ಮಾತ್ರ ಫಿಟ್ ಎಂದರ್ಥವಲ್ಲ: ನಿಜವಾದ ಫಿಟ್‌ನೆಸ್‌ನ ಗುರುತುಗಳೇನು? ತಜ್ಞರ ಸಲಹೆ ಇಲ್ಲಿದೆ

ಕೂದಲು ಉದುರುವಿಕೆ ತಡೆದು, ದಟ್ಟವಾಗಿ ಬೆಳೆಯಲು ಈ ‘ಸೂಪರ್‌ಫುಡ್‌’ಗಳನ್ನು ನಿಮ್ಮ ಆಹಾರದಲ್ಲಿ ತಪ್ಪದೇ ಸೇರಿಸಿ!

ಚಿತ್ರದುರ್ಗ : ಮೊಳಕಾಲ್ಮೂರಿನಲ್ಲಿ ಭೀಕರ ರಸ್ತೆ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು!

ಮೊಬೈಲ್‌-ಸ್ಕ್ರೀನ್‌ಗೆ ಬ್ರೇಕ್ ನೀಡಿ: ಮಾನಸಿಕ ಆರೋಗ್ಯ ಕಾಪಾಡಲು ‘ಡಿಜಿಟಲ್ ಡಿಟಾಕ್ಸ್’ ಏಕೆ ಮುಖ್ಯ?

ನೀತಿ ಕಥೆ: ನಂಬಿಕೆದ್ರೋಹಕ್ಕೆ ಕ್ಷಮೆಯಿಲ್ಲ (ಯುವರಾಜ ಮತ್ತು ಕರಡಿಯ ಕಥೆ)