Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯ ಮಟ್ಟದ ಕಥಾ ಸ್ಪರ್ಧೆ: ‘ಪ್ರಜಾವಾಣಿ’ಯ ಕೆ.ಪಿ. ಓಂಕಾರಮೂರ್ತಿ ಕಥೆಗೆ ಪ್ರಥಮ ಬಹುಮಾನ

---Advertisement---

ಸುದ್ದಿಒನ್, ಚಿತ್ರದುರ್ಗ, ಜೂನ್‌. 29 : ರಾಯಚೂರು ರಿಪೋರ್ಟರ್ಸ್ ಗಿಲ್ಡ್‌ನ ಬೆಳ್ಳಿ ಮಹೋತ್ಸವದ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ರಾಜ್ಯ ಮಟ್ಟದ ಕಥಾ ಸ್ಪರ್ಧೆಯಲ್ಲಿ ಚಿತ್ರದುರ್ಗದ ‘ಪ್ರಜಾವಾಣಿ’ ಸಹಾಯಕ ವರದಿಗಾರ ಕೆ.ಪಿ. ಓಂಕಾರಮೂರ್ತಿ ಅವರ ‘ಡೆಡ್‌ಲೈನ್’ ಕಥೆಯು ಪ್ರಥಮ ಬಹುಮಾನಕ್ಕೆ ಭಾಜನವಾಗಿದೆ.

ರಾಯಚೂರು ನಗರದ ಪತ್ರಿಕಾಭವನದಲ್ಲಿ ಇಂದು (ಜೂನ್. 29) ನಡೆದ ಪತ್ರಿಕಾಗೋಷ್ಠಿಯಲ್ಲಿ ರಾಯಚೂರು ರಿಪೋರ್ಟರ್ಸ್ ಗಿಲ್ಡ್ ಅಧ್ಯಕ್ಷ ವಿಜಯ್ ಜಾಗತಗಲ್ ಅವರು ಸ್ಪರ್ಧೆಯ ವಿಜೇತರ ಪಟ್ಟಿಯನ್ನು ಪ್ರಕಟಿಸಿದರು.

​ಪ್ರಥಮ ಬಹುಮಾನ ಪಡೆದ ಕೆ.ಪಿ. ಓಂಕಾರಮೂರ್ತಿ ಅವರಿಗೆ ₹10 ಸಾವಿರ ನಗದು ಹಾಗೂ ಪ್ರಮಾಣಪತ್ರ ನೀಡಿ ಗೌರವಿಸಲಾಗುವುದು. ಸ್ಪರ್ಧೆಯ ದ್ವಿತೀಯ ಬಹುಮಾನವನ್ನು ಮೈಸೂರಿನ ‘ದಿ ಟೈಮ್ಸ್ ಆಫ್ ಇಂಡಿಯಾ’ ವಿಶೇಷ ವರದಿಗಾರ ಶ್ರೀನಿವಾಸ ಎಂ. ಅವರ ‘ನಿಧನ ವಾರ್ತೆ’ ಕಥೆ ಹಾಗೂ ತೃತೀಯ ಬಹುಮಾನವನ್ನು ‘ಉದಯವಾಣಿ’ಯ ರಾಯಚೂರು ವರದಿಗಾರ ಸಿದ್ಧಯ್ಯಸ್ವಾಮಿ ಕುಕನೂರು ಅವರ ‘ಪ್ರೆಸಿಡೆಂಟ್ ಶಂಕ್ರ’ ಕಥೆ ಮುಡಿಗೇರಿಸಿಕೊಂಡಿವೆ.

ಖ್ಯಾತ ಕಥೆಗಾರ ಮಹಾಂತೇಶ ನವಲಕಲ್ ಅವರು ಕಥಾ ಸ್ಪರ್ಧೆಯ ತೀರ್ಪುಗಾರರಾಗಿ ಜವಾಬ್ದಾರಿ ನಿರ್ವಹಿಸಿದ್ದರು.
ಆಗಸ್ಟ್‌ ಕೊನೆಯ ವಾರದಲ್ಲಿ ನಡೆಯಲಿರುವ ಗಿಲ್ಡ್‌ನ ಬೆಳ್ಳಿ ಮಹೋತ್ಸವ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ಪ್ರದಾನ ಮಾಡಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.

​ಮೂಲತಃ ಕೋಟೆನಾಡು ಚಿತ್ರದುರ್ಗದವರಾದ ಕೆ.ಪಿ. ಓಂಕಾರಮೂರ್ತಿ ಅವರು ಸಾಹಿತ್ಯ ಮತ್ತು ಪತ್ರಿಕೋದ್ಯಮ ಕ್ಷೇತ್ರದಲ್ಲಿ ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿದ ಯುವ ಪತ್ರಕರ್ತರಾಗಿದ್ದಾರೆ. ಮೈಸೂರಿನ ಪ್ರಸಿದ್ಧ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಪದವಿ ಪೂರೈಸಿದ ಇವರು, ಮೈಸೂರು ವಿಶ್ವವಿದ್ಯಾಲಯದ ಮಾನಸಗಂಗೋತ್ರಿಯಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

​ವಿದ್ಯಾರ್ಥಿ ದೆಸೆಯಿಂದಲೇ ಅತ್ಯಂತ ಪ್ರತಿಭಾವಂತರಾಗಿದ್ದ ಓಂಕಾರಮೂರ್ತಿ ಅವರು, ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿಭಾಗದಲ್ಲಿ ಅತ್ಯಧಿಕ ಅಂಕ ಗಳಿಸಿದ ಸಾಧನೆಗಾಗಿ ಪ್ರತಿಷ್ಠಿತ ‘ಸಂಪೆಮನೆ ಕೃಷ್ಣಮೂರ್ತಿ ಪ್ರಶಸ್ತಿ’ಯನ್ನು ಮುಡಿಗೇರಿಸಿಕೊಂಡಿದ್ದರು.

ಕಾಲೇಜು ದಿನಗಳಲ್ಲಿ ವಿವಿಧ ಪತ್ರಿಕೋದ್ಯಮ ಹಾಗೂ ಸಾಹಿತ್ಯಕ ಸ್ಪರ್ಧೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡ ಹೆಗ್ಗಳಿಕೆ ಇವರದ್ದಾಗಿದೆ. ವಿದ್ಯಾರ್ಥಿ ಜೀವನದಲ್ಲಿಯೇ ಬರವಣಿಗೆಯ ತೀವ್ರ ನಂಟು ಹೊಂದಿದ್ದ ಇವರು ‘ಉದಯವಾಣಿ’ ಸೇರಿದಂತೆ ನಾಡಿನ ಪ್ರಮುಖ ದಿನಪತ್ರಿಕೆಗಳಿಗೆ ನಿಯಮಿತವಾಗಿ ವೈಚಾರಿಕ ಹಾಗೂ ಪ್ರಚಲಿತ ವಿದ್ಯಮಾನಗಳ ಲೇಖನಗಳನ್ನು ಬರೆಯುತ್ತಿದ್ದರು.

ಪ್ರಸ್ತುತ ಚಿತ್ರದುರ್ಗದ ‘ಪ್ರಜಾವಾಣಿ’ ಪತ್ರಿಕೆಯಲ್ಲಿ ಸಹಾಯಕ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಓಂಕಾರಮೂರ್ತಿ ಅವರು, ವೃತ್ತಿಪರ ವರದಿಗಾರಿಕೆಯ ಜೊತೆಗೆ ಸೃಜನಶೀಲ ಸಾಹಿತ್ಯ ಬರವಣಿಗೆಯಲ್ಲೂ ತೊಡಗಿಸಿಕೊಂಡಿದ್ದಾರೆ. ಇವರ ಈ ಸಾಧನೆಗೆ ಪತ್ರಿಕಾ ಬಳಗ ಹಾಗೂ ಸಾಹಿತ್ಯಾಸಕ್ತರು ಹರ್ಷ ವ್ಯಕ್ತಪಡಿಸಿ, ಅಭಿನಂದನೆ ಸಲ್ಲಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಉದ್ಯೋಗ ಸೃಷ್ಟಿ ಹಾಗೂ ಕೌಶಲ್ಯಾಭಿವೃದ್ಧಿಗೆ ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಕೈಗಾರಿಕಾ ಸಹಭಾಗಿತ್ವದ “ಹೈಪರ್-ಆಕ್ಟಿವ್ ಇನ್ನೋವೇಷನ್ ಹಬ್”ಗಳ ನಿರ್ಮಾಣ ಅತ್ಯಗತ್ಯ

ತೆಳ್ಳಗಿದ್ದರೆ ಮಾತ್ರ ಫಿಟ್ ಎಂದರ್ಥವಲ್ಲ: ನಿಜವಾದ ಫಿಟ್‌ನೆಸ್‌ನ ಗುರುತುಗಳೇನು? ತಜ್ಞರ ಸಲಹೆ ಇಲ್ಲಿದೆ

ಕೂದಲು ಉದುರುವಿಕೆ ತಡೆದು, ದಟ್ಟವಾಗಿ ಬೆಳೆಯಲು ಈ ‘ಸೂಪರ್‌ಫುಡ್‌’ಗಳನ್ನು ನಿಮ್ಮ ಆಹಾರದಲ್ಲಿ ತಪ್ಪದೇ ಸೇರಿಸಿ!

ಚಿತ್ರದುರ್ಗ : ಮೊಳಕಾಲ್ಮೂರಿನಲ್ಲಿ ಭೀಕರ ರಸ್ತೆ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು!

ಮೊಬೈಲ್‌-ಸ್ಕ್ರೀನ್‌ಗೆ ಬ್ರೇಕ್ ನೀಡಿ: ಮಾನಸಿಕ ಆರೋಗ್ಯ ಕಾಪಾಡಲು ‘ಡಿಜಿಟಲ್ ಡಿಟಾಕ್ಸ್’ ಏಕೆ ಮುಖ್ಯ?

ನೀತಿ ಕಥೆ: ನಂಬಿಕೆದ್ರೋಹಕ್ಕೆ ಕ್ಷಮೆಯಿಲ್ಲ (ಯುವರಾಜ ಮತ್ತು ಕರಡಿಯ ಕಥೆ)