Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿಬಿಜಿರಾಮ್‍ಜಿ ಯೋಜನೆಯಡಿ ವರ್ಷಕ್ಕೆ 125 ದಿನಗಳ ಉದ್ಯೋಗಾವಕಾಶ : ಡಾ.ಎಸ್.ಆಕಾಶ್ ಹೇಳಿಕೆ

---Advertisement---

ಸುದ್ದಿಒನ್, ಚಿತ್ರದುರ್ಗ. ಜೂನ್. 30: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್‍ಗಾರ್ ಅಂಡ್ ಆಜೀವಿಕ ಮಿಷನ್ (ಗ್ರಾಮೀಣ) (ವಿಬಿಜಿರಾಮ್‍ಜಿ) ಯೋಜನೆಯಡಿ ಅರ್ಹ ಗ್ರಾಮೀಣ ಅಕುಶಲ ಕುಟುಂಬಕ್ಕೆ ವರ್ಷಕ್ಕೆ 125 ದಿನಗಳ ಕಡ್ಡಾಯ ಉದ್ಯೋಗಾವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಸಿಇಓ ಡಾ.ಎಸ್.ಆಕಾಶ್ ಹೇಳಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಜಿಲ್ಲೆಯ ಎಲ್ಲಾ ಅನುಷ್ಠಾನ ಅಧಿಕಾರಿಗಳು, ಪಿಡಿಒಗಳು ಹಾಗೂ ತಾಂತ್ರಿಕ ಸಿಬ್ಬಂದಿಗಳ ಒಂದು ದಿನದ ‘ವಿಬಿಜಿರಾಮ್‍ಜಿ’ ಯೋಜನೆ ಜಿಲ್ಲಾಮಟ್ಟದ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ವಿಬಿಜಿರಾಮ್‍ಜಿ ಯೋಜನೆ ಜುಲೈ 1 ರಿಂದ ಜಿಲ್ಲೆಯಾದ್ಯಂತ ಅನುಷ್ಠಾನಗೊಳ್ಳಲಿದೆ. ಸ್ವಯಂಪ್ರೇರಿತವಾಗಿ ಅಕುಶಲ ಕೆಲಸಕ್ಕಾಗಿ ಬೇಡಿಕೆ ಸಲ್ಲಿಸುವ ಗ್ರಾಮೀಣ ವಯಸ್ಕ ಸದಸ್ಯರ ಕುಟುಂಬಕ್ಕೆ ಒಂದು ಆರ್ಥಿಕ ವರ್ಷದಲ್ಲಿ 125 ದಿನಗಳ ಕಡ್ಡಾಯ ಉದ್ಯೋಗ ಖಾತ್ರಿಯನ್ನು ಈ ಯೋಜನೆಯಡಿ ನೀಡಲಾಗುವುದು. ಸಮಗ್ರ ಡಿಜಿಟಲ್ ವ್ಯವಸ್ಥೆ ಮೂಲಕ ಆಡಳಿತ ಹೊಣೆಗಾರಿಕೆ ಮತ್ತು ನಾಗರಿಕರ ಪಾಲ್ಗೊಳ್ಳುವಿಕೆಯನ್ನು ಆಧುನೀಕರಿಸುವುದು ಈ ಯೋಜನೆಯ ದೃಷ್ಟಿಕೋನವಾಗಿದೆ. ಕೃಷಿ ಕಾಲದಲ್ಲಿ ಕೃಷಿ ಕಾರ್ಮಿಕರ ಸಮರ್ಪಕ ಲಭ್ಯತೆಗೆ ಸುಗಮಗೊಳಿಸಲು ಯೋಜನೆಯಡಿ 60 ದಿನಗಳ ಕಾಲ ವಿರಾಮ ನೀಡುವ ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದರುಯ.
ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಎಂ.ಬಾಬು ಮಾತನಾಡಿ, ವಿಬಿಜಿರಾಮ್‍ಜಿ ಯೋಜನೆ ಯಶಸ್ವಿಯಾಗಿ ಅನುಷ್ಠಾನ ಮಾಡಲು ರೂಪುರೇಷೆ ಸಿದ್ಧಪಡಿಸಿಲಾಗಿದೆ. ಯೋಜನೆಯಡಿ ಅಧಿಕಾರಿಗಳು ಗ್ರಾಮೀಣ ಜನರಿಗೆ ಉದ್ಯೋಗ ಕಲ್ಪಿಸುವುದರ ಜೊತೆಗೆ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ಪರಿಣಾಮಕಾರಿಯಾಗಿ ಕೈಗೆತ್ತಿಕೊಳ್ಳಬೇಕು ಎಂದು ಸೂಚಿಸಿದರು.

ಮೈಸೂರಿನ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯಿಂದ ವಿಶೇಷ ತರಬೇತಿ ಪಡೆದ ಮಾಸ್ಟರ್ ತರಬೇತುದಾರರಾದ ಹೊಸದುರ್ಗ ತಾ.ಪಂ. ಸಹಾಯಕ ನಿರ್ದೇಶಕ ನಯಾಜ್ ಕಾಯ್ದೆಯ ಕುರಿತು ಮಾಹಿತಿ ನೀಡಿದರು.

 

ಚಿತ್ರದುರ್ಗ ತಾ.ಪಂ. ಅಭಿವೃದ್ಧಿ ಅಧಿಕಾರಿ ಚೈತ್ರ ಯೋಜನೆಯ ಉದ್ದೇಶ ಹಾಗೂ ಸಾಂಸ್ಥಿಕ ಚೌಕಟ್ಟು ಹಾಗೂ ಸಹಾಯಕ ನಿರ್ದೇಶಕ ಯರ್ರಿಸ್ವಾಮಿ ಯೋಜನಾ ಪ್ರಕ್ರಿಯೆಯ ಹಂತಗಳ ಕುರಿತು ತಿಳಿಸಿದರು.
ಹೊಳಲ್ಕೆರೆ ತಾ.ಪಂ. ಸಹಾಯಕ ನಿರ್ದೇಶಕ ನಟರಾಜ್ ಯೋಜನೆಯ ಹಣಕಾಸು ವ್ಯವಸ್ಥೆ ಮತ್ತು ಸಾಮಾಜಿಕ ಪರಿಶೋಧನೆ ಕುರಿತು  ಹಾಗೂ ಹೊಸದುರ್ಗ ತಾ.ಪಂ. ತಾಂತ್ರಿಕ ಸಂಯೋಜಕ ಸಂತೋಷ್ ಯೋಜನೆಯ ತಂತ್ರಜ್ಞಾನದ ಪಾತ್ರ ಮತ್ತು ಅನುಮತಿಸಲಾದ ಕಾಮಗಾರಿಗಳು ಕುರಿತು ತರಬೇತಿ ನೀಡಿದರು.
ಕಾರ್ಯಾಗಾರದಲ್ಲಿ 6 ತಾಲ್ಲೂಕು ಪಂಚಾಯಿತಿಗಳು ಅಧಿಕಾರಿಗಳು, ಪಿಡಿಒಗಳು, ಸಂಯೋಜಕರು ಸಿಬ್ಬಂದಿ ಉಪಸ್ಥಿತರಿದ್ದರು. ಜಿಲ್ಲಾ ಐಇಸಿ ಸಂಯೋಜಕ ಎಂ.ಎಸ್.ರವೀಂದ್ರನಾಥ್ ಕಾರ್ಯಕ್ರಮ ನಿರೂಪಿಸಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now